Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಕರ್ನಾಟಕದ ಕರಾವಳಿ ಜನರ ಹಾಗೂ ಬಿಜೆಪಿ...

ಕರ್ನಾಟಕದ ಕರಾವಳಿ ಜನರ ಹಾಗೂ ಬಿಜೆಪಿ ನಡುವೆ ಬಲಿಷ್ಠ ಬಾಂಧವ್ಯ: ಪ್ರಧಾನಿ ಮೋದಿ

ಮಂಗಳೂರಿನ ರೋಡ್ ಶೋನಲ್ಲಿ ಭಾಗವಹಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ಪಿಎಂ

ವಾರ್ತಾಭಾರತಿವಾರ್ತಾಭಾರತಿ15 April 2024 11:55 AM IST
share
ಕರ್ನಾಟಕದ ಕರಾವಳಿ ಜನರ ಹಾಗೂ ಬಿಜೆಪಿ ನಡುವೆ ಬಲಿಷ್ಠ ಬಾಂಧವ್ಯ: ಪ್ರಧಾನಿ ಮೋದಿ

ಮಂಗಳೂರು, ಎ.15: ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಕರಾವಳಿ ಭಾಗ ಜನರ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ಹಲವು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ತಮ್ಮ X ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ… pic.twitter.com/K6tC8B6nbN

— Narendra Modi (@narendramodi) April 14, 2024

ಈ ಬಗ್ಗೆ Xನಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ. ಕಳೆದ ದಶಕದಲ್ಲಿ ಅಭಿವೃದ್ಧಿಗೆ ಬಂದರು ಅಭಿವೃದ್ಧಿ, ಮೀನುಗಾರಿಕೆ ಮತ್ತು ಮಹಿಳಾ ಮೀನುಗಾರರ ಸಬಲೀಕರಣ, ಇಂಧನ, ಆರೋಗ್ಯ ಮತ್ತು ಇತರೆ ವಲಯಗಳನ್ನು ಕೇಂದ್ರೀಕರಿಸಿ ಕೆಲಸ ಮಾಡಲಾಗಿದೆ. ಬಿಜೆಪಿಯ ಪ್ರಣಾಳಿಕೆ ʻಸಂಕಲ್ಪ ಪತ್ರʼದಲ್ಲಿ ಹೇಳಿರುವಂತೆ ಮಂಗಳೂರು ಅಭಿವೃದ್ಧಿಗಾಗಿ ನಗರಾಭಿವೃದ್ಧಿ ಮೂಲಕ 'ಸುಗಮ ಜೀವನ' ಕಲ್ಪಿಸಲಾಗುವುದು, ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ ಎಂಬುದು ನನ್ನ ನಂಬಿಕೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನಾನು ಉದ್ಘಾಟಿಸಿದ ಮತ್ತು ಶಿಲಾನ್ಯಾಸ ನೆರವೇರಿಸಿದ ಕೆಲಸಗಳಿಂದ ಇಲ್ಲಿನ ಜನರ ಜೀವನಮಟ್ಟ ಸುಧಾರಣೆಗೆ ಪುಷ್ಟಿ ದೊರೆಯಲಿದೆ. ಕೊಚ್ಚಿ – ಮಂಗಳೂರು ಪೈಪ್ ಲೈನ್ ಯೋಜನೆಯು ಸಹ ಇದರಲ್ಲಿ ಸೇರಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಂದರು ವಲಯಕ್ಕೆ ಸಂಬಂಧಿಸಿದಂತೆ ಮೂಲ ಸೌಕರ್ಯವನ್ನು ಆಧುನೀಕರಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ಮೂರನೇ ಅವಧಿಯಲ್ಲಿ ಭವಿಷ್ಯದ ಶಿಕ್ಷಣಕ್ಕೆ ಸಂಬಂಧಿಸಿದ ಅಂಶಗಳನ್ನು ಸುಧಾರಿಸುವಲ್ಲಿ ಮತ್ತು ಈ ಪ್ರದೇಶದಲ್ಲಿ ಇನ್ನೂ ಉತ್ತಮವಾದ ರೀತಿಯಲ್ಲಿ ಆರೋಗ್ಯ ವಲಯದ ರಕ್ಷಣೆಗೆ ಇನ್ನೂ ಹೆಚ್ಚಿನ ಕೆಲಸ ಮಾಡಬೇಕಾಗಿದೆ. ನಾವು ನೀಲಿ ಕ್ರಾಂತಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದು, ಇದರಿಂದ ಮೀನುಗಾರರಿಗೆ ಉತ್ತೇಜನ ಸಿಗಲಿದೆ. ಇದೇ ರೀತಿ ನಾವು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದರಿಂದ ಕರ್ನಾಟಕದ ಈ ಭಾಗವನ್ನು ಹೆಚ್ಚಿನ ಜನ ನೋಡಲು ಸಹಕಾರಿಯಾಗಲಿದೆ.

ಮತ ಬ್ಯಾಂಕ್ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್ ಸರಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X