Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಮಂಗಳೂರಿನ ಆಸ್ಪತ್ರೆಯಲ್ಲಿ ಕೈ ಬೆರಳಿಗೆ...

ಮಂಗಳೂರಿನ ಆಸ್ಪತ್ರೆಯಲ್ಲಿ ಕೈ ಬೆರಳಿಗೆ ಚಿಕಿತ್ಸೆ ಪಡೆದಿದ್ದ ಹಂತಕ

► ಕಗ್ಗೊಲೆಗೆ ಪ್ರವೀಣ್ ಬಳಸಿದ್ದ ಚೂರಿ ಈಗ ಎಲ್ಲಿದೆ ? ► ಪ್ರವೀಣ್ ಗೆ ಅಕ್ರಮ ಚಿನ್ನ ಸಾಗಾಟದ ಮಾಫಿಯಾ ಜೊತೆ ನಂಟಿತ್ತೇ ?

ಆರ್. ಜೀವಿಆರ್. ಜೀವಿ24 Nov 2023 6:12 PM IST
share
ಮಂಗಳೂರಿನ ಆಸ್ಪತ್ರೆಯಲ್ಲಿ ಕೈ ಬೆರಳಿಗೆ ಚಿಕಿತ್ಸೆ ಪಡೆದಿದ್ದ ಹಂತಕ

ಉಡುಪಿ ತಾಯಿ, ಮಕ್ಕಳ ಹತ್ಯಾಕಾಂಡದ ಆರೋಪಿಯ ಬಂಧನವಾಗಿದೆ. ಆದರೆ ಈಗಲೂ ಹಾಡಹಗಲೇ ಕೇವಲ 15- 20 ನಿಮಿಷಗಳಲ್ಲಿ ನಡೆದು ಹೋದ ಆ ಹತ್ಯಾಕಾಂಡದ ಕುರಿತು ಜನರಲ್ಲಿ ಹತ್ತು ಹಲವು ಪ್ರಶ್ನೆಗಳಿವೆ.

ಪ್ರವೀಣ್ ಅರುಣ್ ಅಷ್ಟು ಸುಲಭವಾಗಿ ಹೇಗೆ ನಾಲ್ವರ ಕೊಲೆ ಮಾಡಿ ಬಿಟ್ಟ ?. ಆಮೇಲೆ ಆತ ಯಾವುದೇ ಸಮಸ್ಯೆಯಿಲ್ಲದೆ ಅಲ್ಲಿಂದ ಪರಾರಿಯಾಗಿದ್ದು ಹೇಗೆ ?. ಕೊಲೆಗೆ ಆತ ಮೊದಲೇ ಸಾಕಷ್ಟು ಪ್ಲ್ಯಾನ್ ಮಾಡಿಕೊಂಡೇ ಬಂದಿದ್ದನೇ ?.

ಆತ ಈ ಹಿಂದೆಯೂ ಇಂತಹ ಕೃತ್ಯ ಎಸಗಿದ್ದನೇ ?. ಅದಕ್ಕಾಗಿ ತರಬೇತಿ ಪಡೆದಿದ್ದನೇ ?. ಆತನಿಗೆ ಕ್ರಿಮಿನಲ್ ಹಿನ್ನೆಲೆಯಿತ್ತೇ ?.

ಕರಾವಳಿಯ ಜನರನ್ನು ಕಾಡುತ್ತಿದ್ದ ಇಂತಹ ಹಲವು ಪ್ರಶ್ನೆಗಳಿಗೆ ಈಗ ಆತನ ಬಂಧನದ ಬಳಿಕ ಒಂದೊಂದಾಗಿ ಉತ್ತರಗಳು ಸಿಗುತ್ತಿವೆ.

ನೇಜಾರಿನಲ್ಲಿ ರವಿವಾರ ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆಗೈದ ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಬಹಳ ಯೋಜಿತವಾಗಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಯಾವುದೇ ಸಾಕ್ಷ್ಯಾಧಾರ ಮತ್ತು ತನ್ನ ಮುಖ ಪರಿಚಯ ಸಿಗಬಾರದೆಂಬ ಉದ್ದೇಶದಿಂದ ಪ್ರವೀಣ್ ಚೌಗುಲೆ ಈ ಪೂರ್ವ ಯೋಜಿತ ಕೊಲೆಗಾಗಿ ತನ್ನ ಕಾರು, ಮಾಸ್ಕ್, ಹಲವು ರಿಕ್ಷಾ, ಬೈಕ್, ಬಸ್‌ಗಳನ್ನು ಬಳಸಿದ್ದ. ಅದೇ ರೀತಿ ಬ್ಯಾಗ್ ಮತ್ತು ಬ್ಯಾಗ್ ಒಳಗೆ ಹರಿತವಾದ ಚೂರಿ ಹಾಗೂ ಬಟ್ಟೆಗಳನ್ನು ಇಟ್ಟು ಕೊಂಡಿದ್ದ.

ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಕೆಲ ತಿಂಗಳ ಕಾಲ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದ ಈತ, ಪಕ್ಕಾ ಕ್ರಿಮಿನಲ್ ಮೈಂಡ್ ಬಳಸಿಕೊಂಡು ಹತ್ಯಾಕಾಂಡಕ್ಕೆ ಎಲ್ಲ ರೀತಿಯ ಸಿದ್ಧತೆ ಹಾಗೂ ಯೋಜನೆ ಹಾಕಿಕೊಂಡೇ ಈ ಕೃತ್ಯ ಎಸಗಲು ಹೊರಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹತ್ಯಾಕಾಂಡ ನಡೆದ ನವೆಂಬರ್ 12ರಂದು ಬೆಳಗ್ಗೆ 8ಗಂಟೆ ಸುಮಾರಿಗೆ ಆರೋಪಿ ಪ್ರವೀಣ್ ಚೌಗುಲೆ, ಮಂಗಳೂರಿನ ಮನೆಯಿಂದ ತನ್ನ ಕಾರಿನಲ್ಲಿ ಹೊರಟಿದ್ದ. ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಿಗುವ ಏಕೈಕ ಟೋಲ್‌ಗೇಟ್‌ನಲ್ಲಿ ತನ್ನ ಕಾರು ಹಾದು ಹೋದರೆ ಸಿಸಿಟಿವಿ ಮೂಲಕ ತನ್ನ ಹೆಜ್ಜೆ ಪೊಲೀಸರಿಗೆ ಸಿಕ್ಕಿ ಬಿಡುತ್ತದೆ ಎಂಬ ಅರಿವು ಅವನಿಗೆ ಇತ್ತು.

ತಾನು ಉಡುಪಿಗೆ ಬಂದಿರುವ ಯಾವುದೇ ಸುಳಿವು ಸಿಗಬಾರದೆಂಬ ಉದ್ದೇಶದಿಂದ ಕಾರನ್ನು ಹೆಜಮಾಡಿ ಟೋಲ್‌ಗೇಟ್‌ಗಿಂತ ಮೊದಲೇ ದೂರದಲ್ಲಿ ಪಾರ್ಕ್ ಮಾಡಿದ್ದ ಪ್ರವೀಣ್. ಅಲ್ಲಿಂದ ಬೈಕ್, ಬಸ್ ಹಿಡಿದು ಉಡುಪಿಗೆ ಬಂದ ಪ್ರವೀಣ್, ಸಂತೆಕಟ್ಟೆಯಿಂದ ಆಟೊ ರಿಕ್ಷಾದಲ್ಲಿ ನೇಜಾರಿನ ತೃಪ್ತಿ ಲೇಔಟ್‌ ತಲುಪಿದ್ದಾನೆ.

ಅಲ್ಲಿ ಐನಾಝ್ ಮನೆಗೆ ನುಗ್ಗಿ ನಾಲ್ವರನ್ನು ಕಗ್ಗೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತೃಪ್ತಿ ಲೇಔಟ್‌ನಿಂದ ಆತ ದಾರಿ ಹೋಕರ ಬೈಕ್ ಹಿಡಿದು ಸಂತೆಕಟ್ಟೆಗೆ ಬಂದಿದ್ದಾನೆ. ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್‌ವರೆಗೆ ರಿಕ್ಷಾ ಬಳಸಿದ್ದಾನೆ. ಕರಾವಳಿ ಬೈಪಾಸ್‌ನಿಂದ ಇನ್ನೊಬ್ಬರ ಬೈಕ್ ಏರಿ ಕಿನ್ನಿಮುಲ್ಕಿಗೆ ಹೋದ ಪ್ರವೀಣ್, ಅಲ್ಲಿಂದ ಸ್ವಲ್ಪ ಮುಂದೆ ನಡೆದುಕೊಂಡು ಹೋಗಿ ಬಸ್ ಹತ್ತಿದ್ದಾನೆ.

ಬಳಿಕ ಹೆಜಮಾಡಿ ಟೋಲ್ ಗೇಟ್ ಸಮೀಪ ನಿಲ್ಲಿಸಿದ ತನ್ನ ಕಾರಿನ ಬಳಿ ಬಸ್‌ನಿಂದ ಇಳಿಡಿದ್ದಾನೆ. ಅಲ್ಲಿಂದ ಕಾರಿನಲ್ಲಿ ನೇರವಾಗಿ ತನ್ನ ಮನೆಗೆ ಹೋಗಿದ್ದಾನೆ ಎನ್ನಲಾಗಿದೆ.

ಕೃತ್ಯ ಎಸಗಿ ಮನೆಗೆ ಹೋದ ಆರೋಪಿ ಪ್ರವೀಣ್, ಮನೆಯಲ್ಲಿ ತನ್ನ ಎಲ್ಲ ರಕ್ತದ ಕಲೆಗಳನ್ನು ಶುಚಿಗೊಳಿಸಿದ್ದಾನೆ. ಸುಮಾರು 10 ನಿಮಿಷಗಳ ಕಾಲ ಮನೆಯಲ್ಲಿದ್ದು, ಬಳಿಕ ಕೃತ್ಯ ಎಸಗಿದ ವೇಳೆ ಗಾಯಗೊಂಡ ಕೈ ಬೆರಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋಗಿದ್ದ ಎನ್ನಲಾಗಿದೆ.

ಅಲ್ಲಿ ತನ್ನ ಬೆರಳಿನ ಗಾಯಗಳಿಗೆ ಚಿಕಿತ್ಸೆ ಪಡೆದುಕೊಂಡ ಆತ, ಮತ್ತೆ ಮನೆಗೆ ಬಂದಿದ್ದಾನೆ. ಮನೆಯಿಂದ ತನ್ನ ಪತ್ನಿ ಮತ್ತು ಮಕ್ಕಳನ್ನು ಕಾರಿನಲ್ಲಿ ಹೊರಗೆ ವಿಹಾರಕ್ಕೆ ಕರೆದುಕೊಂಡು ಹೊರಗಡೆ ಸುತ್ತಾಡಿ ಸಂಜೆ 6ರ ಸುಮಾರಿಗೆ ಮತ್ತೆ ಮನೆಗೆ ಬರುತ್ತಾನೆ.

ನಾಲ್ಕು ಮಂದಿಯನ್ನು ಭೀಕರವಾಗಿ ಕೊಲೆಗೈದು ಎಂಟು ಗಂಟೆ ಕಳೆದರೂ ಆರೋಪಿ ಯಾವುದೇ ರೀತಿಯ ಪಶ್ಚಾತ್ತಾಪ ಅಥವಾ ಭಯವಿಲ್ಲದೆ ಮಾಮೂಲಿಯಂತೆ ಮನೆಯವರೊಂದಿಗೆ ಬೆರೆತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಮೇಲೆ ಹಬ್ಬದ ಪ್ರಯುಕ್ತ ಎರಡು ದಿನ ರಜೆ ಇದೆ ಎಂದು ಹೇಳಿ ಕೊಲೆಗೈದ ಮರು ದಿನ ಅಂದರೆ ನ.13ರಂದು ಬೆಳಗಾವಿಯ ಕುಡುಚಿಗೆ ಕುಟುಂಬದೊಂದಿಗೆ ಹೊರಡಲು ಯೋಜನೆ ಹಾಕಿಕೊಂಡಿದ್ದ ಪ್ರವೀಣ್ . ಅದರಂತೆ ಮರುದಿನ ಆತ ತನ್ನ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಬೆಳಗಾವಿಯ ಕುಡುಚಿಗೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ತನ್ನ ಸಂಬಂಧಿಕ ತೋಟಗಾರಿಕೆ ಇಲಾಖೆಯ ನಿವೃತ್ತ ಅಧಿಕಾರಿ ಮನೆಯಲ್ಲಿ ದೀಪಾವಳಿ ಆಚರಿಸಿದ್ದ.

ಇತ್ತ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈತನೇ ಈ ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಅದೇ ಸಮಯಕ್ಕೆ ಆತ ಅಲ್ಲಿ ತನ್ನ ಮೊಬೈಲ್ ಸ್ವಿಚ್ ಆನ್ ಮಾಡುತ್ತಾನೆ. ಇದರಿಂದ ಆತ ಇರುವ ಜಾಡನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರವೀಣ್ ಹತ್ಯಾಕಾಂಡಕ್ಕೆ ಬಳಸಿದ ಚೂರಿಯು ಇಡೀ ಪ್ರಕರಣದ ಪ್ರಮುಖ ಸಾಕ್ಷ್ಯವಾಗಿದ್ದು, ಇದಕ್ಕೆ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕೊಲೆ ಮಾಡಿದ ಬಳಿಕ ಚೂರಿಯನ್ನು ತನ್ನ ಬ್ಯಾಗ್ ಒಳಗೆ ಹಾಕಿಕೊಂಡ ಪ್ರವೀಣ್ , ಅದನ್ನು ಹೆಜಮಾಡಿಯಿಂದ ಮುಂದೆ ಕಾರಿನಲ್ಲಿ ಹೋಗುವಾಗ ಸೇತುವೆಯಿಂದ ಕೆಳಗೆ ಎಸದಿದ್ದಾನೆ ಎಂದು ವಿಚಾರಣೆ ವೇಳೆ ಮೊದಲು ಬಹಿರಂಗಪಡಿಸಿದ್ದಾನೆ. ಆದರೆ ನಂತರ ಆತ ಅದನ್ನು ತನ್ನ ಮನೆ ಸಮೀಪವೇ ವಿಲೇವಾರಿ ಮಾಡಿದ್ದಾನೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದ. ಹೀಗಾಗಿ ಪೊಲೀಸರು ಈ ಆಯುಧಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಕಗ್ಗೊಲೆಗಳ ಪ್ರಕರಣದಲ್ಲಿ ಆಶ್ಚರ್ಯಕರ ಸಂಗತಿ ಅಂದರೆ ನಾಲ್ಕು ಮಂದಿಯನ್ನು ಭೀಕರವಾಗಿ ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿ ಪ್ರವೀಣ್, ತನ್ನ ರಕ್ತ ಸಿಕ್ಕ ಬಟ್ಟೆಯನ್ನು ಬದಲಾಯಿಸಿಯೇ ಇಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ನಾಲ್ವರ ಹತ್ಯೆಯಿಂದ ಇಡೀ ಮನೆ ರಕ್ತಸಿಕ್ತವಾಗಿತ್ತು. ನಾಲ್ವರು ಕೂಡ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆದರೂ ಆತನ ಬಟ್ಟೆಗೆ ಅಲ್ಪಸ್ವಲ್ಪ ಮಾತ್ರವೇ ರಕ್ತದ ಕಲೆಗಳು ಅಂಟಿವೆ. ಇದನ್ನು ಆತ ಅಲ್ಲಿಂದ ಬೈಕು, ರಿಕ್ಷಾ, ಬಸ್‌ನಲ್ಲಿ ಹೋಗುವಾಗ ತನ್ನ ಕೈಯಲ್ಲಿದ್ದ ಬ್ಯಾಗ್‌ನಿಂದ ಮುಚ್ಚಿಟ್ಟು ಯಾರಿಗೂ ಕಾಣದಂತೆ ಮರೆ ಮಾಚಿದ್ದ ಎಂದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ.

ಬಳಿಕ ಆತ ಹೆಜಮಾಡಿಯಿಂದ ಮಂಗಳೂರಿಗೆ ಹೋಗುವಾಗ ದಾರಿ ಮಧ್ಯೆ ಕಾರು ನಿಲ್ಲಿಸಿ ಕಾರಿನೊಳಗೆಯೇ ತನ್ನ ಬ್ಯಾಗ್‌ನಲ್ಲಿದ್ದ ಬಟ್ಟೆ ತೆಗೆದು ಬದಲಾಯಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದಕ್ಕೆ ಪುಷ್ಟಿ ಕೊಡುವಂತೆ ಕೊಲೆ ನಡೆದ ದಿನ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್‌ಗೆ ಆರೋಪಿಯನ್ನು ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದ ಚಾಲಕ, ಮತ್ತೆ ಆತನನ್ನು ಸಂತೆಕಟ್ಟೆಯಲ್ಲಿ ಕಂಡಾಗ ಬಟ್ಟೆಯಿಂದ ಗುರುತಿಸಿದ್ದೆ ಎಂದು ಹೇಳಿಕೆ ನೀಡಿದ್ದರು.

ಬಂಧಿತ ಕೊಲೆ ಆರೋಪಿ ಪ್ರವೀಣ್ ಚೌಗುಲೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಹೀಗೆ ಆತನನ್ನು ನೇಜಾರು ಮನೆಗೆ ಕರೆದೊಯ್ದು ಮಹಜರು ಪ್ರಕ್ರಿಯೆ ಮುಗಿಸಿ, ಬಳಿಕ ಮಂಗಳೂರಿನ ಆತನ ಮನೆಗೆ ಕರೆದುಕೊಂಡು ಹೋಗಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಮಂಗಳೂರಿಗೆ ಕರೆದೊಯ್ದು ಎಲ್ಲ ರೀತಿಯ ಮಹಜರು ಪ್ರಕ್ರಿಯೆ ಮುಗಿಸಿದ್ದಾರೆ ಎಂದು ತಿಳಿದುಬಂದಿದೆ. ಮುಂದೆ ಹೆಚ್ಚಿನ ತನಿಖೆಗಾಗಿ ಆತನನ್ನು ಬೆಳಗಾವಿ, ಮಹಾರಾಷ್ಟ್ರಕ್ಕೂ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇಷ್ಟು ದೊಡ್ಡ ಹತ್ಯಾಕಾಂಡವನ್ನು ಇಷ್ಟು ಕರಾರುವಕ್ಕಾಗಿ, ಅಷ್ಟೇ ಸುಲಭವಾಗಿ ಮಾಡಿ ಮುಗಿಸಿರುವ ಪ್ರವೀಣ್ ಅರುಣ್ ಗೆ ಏನಾದರೂ ಕ್ರಿಮಿನಲ್ ಅಥವಾ ಮಾಫಿಯಾ ಹಿನ್ನೆಲೆ ಇದೆಯೇ ಎಂದೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂಬ ಮಾಹಿತಿಯಿದೆ. ಪ್ರವೀಣ್ ನ ಜೀವನ ಶೈಲಿಗೂ ಆತನ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿ ಸಿಗುವ ಸಂಬಳಕ್ಕೂ ತಲೆಯಾಗುವುದಿಲ್ಲ. ಆತನಲ್ಲಿ ದುಬಾರಿ ಕಾರು, ಸ್ವಂತ ಮನೆ, ಭೂಮಿ ಇತ್ಯಾದಿಗಳಿದ್ದವು. ಆತನ ಜೀವನ ಶೈಲಿಯೂ ತೀರಾ ಸರಳವಾಗಿರಲಿಲ್ಲ.

ಹಾಗಾಗಿ ಆತ ಯಾವುದಾದರೂ ಕ್ರಿಮಿನಲ್ ನಂಟು ಹೊಂದಿದ್ದನೇ ? ಅಂತರ್ ರಾಷ್ಟ್ರೀಯ ಪ್ರಯಾಣ ಮಾಡುವ ವಿಮಾನ ಸಿಬ್ಬಂದಿಯಾಗಿ ಯಾವುದಾದರೂ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದನೇ ? ಅಕ್ರಮ ಚಿನ್ನ ಸಾಗಾಟದಂತಹ ಅಕ್ರಮಗಳ ಮೂಲಕ ಹಣ ಸಂಪಾದಿಸುತ್ತಿದ್ದನೇ ಎಂಬ ಪ್ರಶ್ನೆಗಳೂ ಇವೆ. ಅಂತಹ ಯಾವುದಾದರೂ ಅಕ್ರಮ ಸಹೋದ್ಯೋಗಿ ಐನಾಝ್ ಗಮನಕ್ಕೆ ಬಂದು ಆಕೆ ಅದನ್ನು ತಡೆದಿದ್ದಳೇ ? ಆ ಸೇಡು ತೀರಿಸಿಕೊಂಡನೇ ಪ್ರವೀಣ್ ? ಈ ಪ್ರಶ್ನೆಗಳಿಗೆ ಪ್ರವೀಣ್ ತನಿಖೆಯ ಬಳಿಕವೇ ಉತ್ತರ ಸಿಗಲಿದೆ.

‘‘ಆರೋಪಿ ಪ್ರವೀಣ್ ಚೌಗುಲೆ ಕಿರುಕುಳದಿಂದ ಐನಾಝ್, ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದಳು. ಆತನ ಕಿರುಕುಳದ ಬಗ್ಗೆ ಮನೆಯಲ್ಲೂ ಹೇಳಿರಲಿಲ್ಲ. ಈ ವಿಚಾರ ಹೇಳುತ್ತಿದ್ದರೆ ತಂದೆ ಅವಳನ್ನು ಕೆಲಸಕ್ಕೆ ಹೋಗಬೇಡ ಎನ್ನುತ್ತಾರೆಂಬ ಭಯ ಅವಳಿಗಿತ್ತು’’ ಎಂದು ಮೃತ ಐನಾಝ್ ಸಹೋದರ ಅಸದ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರು ಮುಂದೆ ಬರುತ್ತಿದ್ದಾರೆ. ಆದುದರಿಂದ ಅವರಿಗೆ ಭದ್ರತೆ ಬೇಕು. ಅವರಿಗೆ ಯಾರಾದರೂ ಕಿರುಕುಳ ನೀಡಿದರೆ ಮಾಹಿತಿ ಕೊಡುವ ವ್ಯವಸ್ಥೆ ಬರಬೇಕು ಎಂದು ಆಗ್ರಹಿಸಿದರು.

ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ ಇದ್ದರೆ ಮಹಿಳೆಯರು ಹೇಳಿಕೊಳ್ಳುವುದಿಲ್ಲ. ಆದುದರಿಂದ ತಮ್ಮ ಸಮಸ್ಯೆ ಹೇಳಿಕೊಳ್ಳಲು ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು. ಅದಕ್ಕಾಗಿ ಪ್ರತೀ ಜಿಲ್ಲೆಯಲ್ಲೂ ಮಹಿಳಾ ಸೆಲ್ ಸ್ಥಾಪಿಸಬೇಕು ಮತ್ತು ಅದು ಸಮರ್ಥವಾಗಿರಬೇಕು ಎಂದು ಆಗ್ರಹಿಸಿದರು.

share
ಆರ್. ಜೀವಿ
ಆರ್. ಜೀವಿ
Next Story
X