ಝಿಂಬಾಬ್ವೆ ವಿರುದ್ಧ ಟಿ20 ಸರಣಿ | ಶುಭಮನ್ ಗಿಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಪ್ರಕಟ

ಶುಭಮನ್ ಗಿಲ್ | PTI
ಹೊಸದಿಲ್ಲಿ: ಝಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಗಾಗಿ 15 ಸದಸ್ಯರನ್ನು ಒಳಗೊಂಡ ಭಾರತೀಯ ಕ್ರಿಕೆಟ್ ತಂಡವನ್ನು ಸೋಮವಾರ ಪ್ರಕಟಿಸಲಾಗಿದ್ದು, ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್ ಹಾಗೂ ಸೂರ್ಯಕುಮಾರ್ ಯಾದವ್ ಗೆ ವಿಶ್ರಾಂತಿ ನೀಡಲಾಗಿದೆ.
ಸರಣಿಯು ಜುಲೈ 6ರಂದು ಹರಾರೆಯಲ್ಲಿ ಆರಂಭವಾಗಲಿದೆ. ಆ ನಂತರ ಹರಾರೆಯಲ್ಲಿಯೇ ಜುಲೈ 7, 10, 13 ಹಾಗೂ 14 ರಂದು ಪಂದ್ಯಗಳು ನಡೆಯುತ್ತವೆ.
ಖಾಯಂ ನಾಯಕ ರೋಹಿತ್ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.
ನಿತಿಶ್ ರೆಡ್ಡಿ, ರಿಯಾನ್ ಪರಾಗ್, ಅಭಿಷೇಕ್ ಶರ್ಮಾ ಹಾಗೂ ತುಷಾರ್ ದೇಶಪಾಂಡೆ ಇದೇ ಮೊದಲ ಬಾರಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ
ಶುಭಮನ್ ಗಿಲ್(ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್(ವಿಕೆಟ್ಕೀಪರ್), ಧ್ರುವ್ ಜುರೆಲ್(ವಿಕೆಟ್ಕೀಪರ್), ನಿತಿಶ್ ರೆಡ್ಡಿ, ರಿಯಾನ್ ಪರಾಗ್, ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ತುಷಾರ್ ದೇಶಪಾಂಡೆ.







