Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಗೇಮ್ಸ್: ಭಾರತದ ಪುರುಷರ,...

ಏಶ್ಯನ್ ಗೇಮ್ಸ್: ಭಾರತದ ಪುರುಷರ, ಮಹಿಳೆಯರ ಫುಟ್ಬಾಲ್ ತಂಡ ಭಾಗವಹಿಸಲು ಕ್ರೀಡಾ ಸಚಿವಾಲಯ ಅನುಮತಿ

ವಾರ್ತಾಭಾರತಿವಾರ್ತಾಭಾರತಿ26 July 2023 8:20 PM IST
share
ಏಶ್ಯನ್ ಗೇಮ್ಸ್: ಭಾರತದ ಪುರುಷರ, ಮಹಿಳೆಯರ ಫುಟ್ಬಾಲ್ ತಂಡ ಭಾಗವಹಿಸಲು ಕ್ರೀಡಾ ಸಚಿವಾಲಯ ಅನುಮತಿ

ಹೊಸದಿಲ್ಲಿ, ಜು.26: ಕ್ರೀಡಾ ಸಚಿವಾಲಯವು ಪ್ರಸಕ್ತ ಆಯ್ಕೆ ಮಾನದಂಡಗಳನ್ನು ಸಡಿಲಗೊಳಿಸಲು ನಿರ್ಧರಿಸಿದ ಬಳಿಕ ಚೀನಾದಲ್ಲಿ ನಡೆಯಲಿರುವ ಮುಂಬರುವ ಏಶ್ಯನ್ ಗೇಮ್ಸ್‌ನಲ್ಲಿ ಭಾರತದ ಪುರುಷರ ಹಾಗೂ ಮಹಿಳೆಯರ ಫುಟ್ಬಾಲ್ ತಂಡಗಳು ಭಾಗವಹಿಸಲು ಅನುಮತಿಯನ್ನು ಪಡೆದಿವೆ.

ಆರಂಭದಲ್ಲಿ ಭಾರತೀಯ ಒಲಿಂಪಿಕ್ಸ್ ಅಸೋಯೇಶನ್(ಐಒಎ)ಏಶ್ಯನ್ ಗೇಮ್ಸ್‌ನಲ್ಲಿ ಸ್ಪರ್ಧಿಸಲು ಭಾರತೀಯ ಫುಟ್ಬಾಲ್ ತಂಡಗಳಿಗೆ ಅನುಮತಿ ನಿರಾಕರಿಸಿತ್ತು. ಭಾರತದ ರ್ಯಾಂಕ್ ಅಗ್ರ-8ರ ಹೊರಗಿರುವುದು ಇದಕ್ಕೆ ಕಾರಣ ಎಂದು ಅದು ಉಲ್ಲೇಖಿಸಿತ್ತು.

ಈ ಸನ್ನಿವೇಶಕ್ಕೆ ಪ್ರತಿಕ್ರಿಯೆಯಾಗಿ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ಕ್ರೀಡಾ ಸಚಿವಾಲಯಕ್ಕೆ ಮನವಿ ಮಾಡಿದ್ದು, ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಪುರುಷ ಹಾಗೂ ಮಹಿಳಾ ತಂಡಗಳಿಗೆ ಅನುಮತಿ ಕೋರಿತ್ತು.

ಭಾರತದ ಪುರುಷರ ಫುಟ್ಬಾಲ್ ತಂಡದ ತರಬೇತುದಾರ ಇಗೊರ್ ಸ್ಟಿಮ್ಯಾಕ್ ಕೂಡ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯನ್ನು ಕೋರಿದ್ದರು.

"ಭಾರತದ ಫುಟ್ಬಾಲ್ ಪ್ರೇಮಿಗಳಿಗೆ ಶುಭ ಸುದ್ದಿ! ನಮ್ಮ ರಾಷ್ಟ್ರೀಯ ಫುಟ್ಬಾಲ್ ತಂಡಗಳು, ಪುರುಷ ಹಾಗೂ ಮಹಿಳಾ ಎರಡೂ ತಂಡಗಳು ಮುಂಬರುವ ಏಶ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲು ಸಜ್ಜಾಗಿವೆ'' ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಟ್ವೀಟಿಸಿದ್ದಾರೆ.

ಭಾರತದ ಸರಕಾರದ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯವು ಈಗಿರುವ ಮಾನದಂಡದ ಪ್ರಕಾರ ಅರ್ಹತೆ ಪಡೆಯದ ಎರಡೂ ತಂಡಗಳ ಭಾಗವಹಿಸುವಿಕೆಗೆ ಅನುಕೂಲವಾಗುವಂತೆ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿದೆ.

"ಇತ್ತೀಚೆಗಿನ ದಿನಗಳಲ್ಲಿ ತಂಡಗಳ ಪ್ರದರ್ಶನಗಳನ್ನು ಗಮನದಲ್ಲಿಟ್ಟುಕೊಂಡು ಸಚಿವಾಲಯವು ನಿಯಮ ಸಡಿಲಿಕೆಗೆ ನಿರ್ಧರಿಸಿದೆ. ಫುಟ್ಬಾಲ್ ಆಟಗಾರರು ಏಶ್ಯನ್ ಗೇಮ್ಸ್‌ನಲ್ಲಿ ತಮ್ಮ ಅತ್ಯುತ್ತಮ ಹೆಜ್ಜೆ ಇಡುತ್ತಾರೆ ಹಾಗೂ ನಮ್ಮ ದೇಶ ಹೆಮ್ಮೆಪಡುವಂತೆ ಮಾಡುತ್ತಾರೆ ಎಂಬ ಖಾತ್ರಿ ನನಗಿದೆ'' ಎಂದು ಅನುರಾಗ್ ಠಾಕೂರ್ ಹೇಳಿದರು.

ಟೀಮ್ ಇವೆಂಟ್‌ಗಳಿಗೆ ಸಚಿವಾಲಯದ ಆಯ್ಕೆ ಮಾನದಂಡಗಳ ಪ್ರಕಾರ ಆಯಾ ಕ್ರೀಡೆಗಳ ಕಾಂಟಿನೆಂಟಲ್‌ಗಳ ಶ್ರೇಯಾಂಕಗಳಲ್ಲಿ ಅಗ್ರ-8ರಲ್ಲಿ ತಂಡಗಳಿಗೆ ಮಾತ್ರ ಏಶ್ಯಾಡ್‌ಗೆ ಪ್ರಯಾಣಿಸಲು ಅನುಮತಿಸಲಾಗುತ್ತದೆ.

ಭಾರತದ ಪುರುಷರ ತಂಡ ಏಶ್ಯದಲ್ಲಿ 18ನೇ ಸ್ಥಾನದಲ್ಲಿದ್ದರೆ, ಮಹಿಳೆಯರ ತಂಡ 11ನೇ ಸ್ಥಾನದಲ್ಲಿದೆ.

ಹ್ವಾಂಗ್‌ಝೌ ಏಶ್ಯನ್ ಗೇಮ್ಸ್ ಚೀನಾದಲ್ಲಿ ಸೆಪ್ಟಂಬರ್ 23ರಿಂದ ಅಕ್ಟೋಬರ್ 8ರ ತನಕ ನಡೆಯಲಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X