Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ಯಾಡ್‌ ನತ್ತ ಧಾವಿಸಿದ ಚೆಂಡು ಹಿಡಿದ...

ಪ್ಯಾಡ್‌ ನತ್ತ ಧಾವಿಸಿದ ಚೆಂಡು ಹಿಡಿದ ಬ್ಯಾಟರ್ ; ಔಟ್ ನೀಡಲು ನಿರಾಕರಿಸಿದ ಅಂಪೈರ್

ವಾರ್ತಾಭಾರತಿವಾರ್ತಾಭಾರತಿ12 Jun 2025 10:32 PM IST
share

ಲಂಡನ್: ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ (ಡಬ್ಲ್ಯುಟಿಸಿ) ಫೈನಲ್‌ ನ ಎರಡನೇ ದಿನವಾದ ಗುರುವಾರ ವಿವಾದಾಸ್ಪದ ಘಟನೆಯೊಂದು ಸಂಭವಿಸಿತು. ಭೋಜನ ವಿರಾಮದ ಮುನ್ನ ಮೂರು ಎಸೆತಗಳು ಬಾಕಿಯಿರುವಾಗ ಘಟನೆ ನಡೆಯಿತು.

ಆಸ್ಟ್ರೇಲಿಯ ಸ್ಪಿನ್ನರ್ ಬೋ ವೆಬ್‌ಸ್ಟರ್‌ ರ ಎಸೆತವೊಂದನ್ನು ದಕ್ಷಿಣ ಆಫ್ರಿಕದ ಬ್ಯಾಟರ್ ಡೇವಿಡ್ ಬೆಡಿಂಗಮ್ ಬ್ಯಾಟ್ ಮೂಲಕ ನಿಭಾಯಿಸಿದಾಗ ಅದು ಇನ್‌ ಸೈಟ್ ಎಜ್ ಆಗಿ ಅವರ ಪ್ಯಾಡ್ ಸಮೀಪಕ್ಕೆ ಬಂತು. ಆಸ್ಟ್ರೇಲಿಯ ವಿಕೆಟ್‌ ಕೀಪರ್ ಅಲೆಕ್ಸ್ ಕ್ಯಾರಿ ಚೆಂಡನ್ನು ಕ್ಯಾಚ್ ಹಿಡಿಯಲು ಬ್ಯಾಟರ್‌ ನ ಸಮೀಪಕ್ಕೆ ಧಾವಿಸಿದರು. ಆದರೆ, ಚಲನೆಯಲ್ಲಿದ್ದ ಚೆಂಡನ್ನು ಬೆಡಿಂಗಮ್ ಹಿಡಿದು ಪಕ್ಕಕ್ಕೆ ಎಸೆದರು.

ಆಗ ಉಸ್ಮಾನ್ ಖ್ವಾಜ ಮತ್ತು ಸ್ಟೀವ್ ಸ್ಮಿತ್ ಬ್ಯಾಟರ್ ಔಟಾಗಿದ್ದಾರೆ ಎಂಬುದಾಗಿ ತೀರ್ಪು ನೀಡುವಂತೆ ಕೋರಿ ಅಂಪೈರ್‌ ಗೆ ಮನವಿ ಮಾಡಿದರು. ಫೀಲ್ಡಿಂಗ್ ಮಾಡುವಾಗ ತಡೆಯೊಡ್ಡಲಾಗಿದೆ ಎಂದು ಹೇಳುತ್ತಾ ಕ್ಯಾರಿ ತನ್ನ ಮನವಿಯನ್ನು ಮುಂದುವರಿಸಿದರು. ಆದರೆ, ಅಂಪೈರ್‌ ಗಳಿಗೆ ಅದು ಮನವರಿಕೆಯಾಗಲಿಲ್ಲ. ಅಂತಿಮವಾಗಿ ಆಸ್ಟ್ರೇಲಿಯ ನಾಯಕ ಪ್ಯಾಟ್ ಕಮಿನ್ಸ್ ನಗುತ್ತಾ ಘಟನೆಯನ್ನು ಮುಕ್ತಾಯಗೊಳಿಸಿದರು.

ಕ್ರಿಕೆಟ್ ನಿಯಮಗಳ ಪ್ರಕಾರ, ಚೆಂಡು ಬ್ಯಾಟರ್‌ನ ಪ್ಯಾಡ್‌ಗೆ ಬಡಿದಾಗ ಅದನ್ನು ಡೆಡ್ ಎಂಬುದಾಗಿ ಪರಿಗಣಿಸಲಾಗುತ್ತದೆ. ಆದರೆ, ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ಚೆಂಡು ಚಲನೆಯಲ್ಲಿತ್ತು ಮತ್ತು ಪ್ಯಾಡ್‌ ಗೆ ಬಡಿದು ನಿಂತಿರಲಿಲ್ಲ.

ಅದು ಫೀಲ್ಡಿಂಗ್‌ಗೆ ತಡೆಯಲ್ಲ ಎಂಬುದಾಗಿ ಅಂಪೈರ್‌ಗಳು ಭಾವಿಸಿದರೆ, ವೀಕ್ಷಕ ವಿವರಣೆಗಾರರ ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಆ ಚೆಂಡನ್ನು ಕ್ಯಾಚ್ ಹಿಡಿಯಲು ವಿಕೆಟ್‌ ಕೀಪರ್‌ ಗೆ ಅವಕಾಶವಿತ್ತು ಎಂಬುದಾಗಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ದೀಪ್ ದಾಸ್‌ಗುಪ್ತಾ ಅಭಿಪ್ರಾಯಪಟ್ಟರೆ, ಇನ್ನೋರ್ವ ಭಾರತೀಯ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಅದಕ್ಕೆ ವಿರುದ್ಧವಾದ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X