Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಬ್ಲಿಝ್ ಚಾಂಪಿಯನ್‌ಶಿಪ್ ಪ್ರಶಸ್ತಿ...

ವಿಶ್ವ ಬ್ಲಿಝ್ ಚಾಂಪಿಯನ್‌ಶಿಪ್ ಪ್ರಶಸ್ತಿ ಹಂಚಿಕೊಂಡ ಕಾರ್ಲ್‌ಸನ್, ನೆಪೊಮ್ನಿಯಾಚ್ಚಿ

ವಾರ್ತಾಭಾರತಿವಾರ್ತಾಭಾರತಿ1 Jan 2025 9:52 PM IST
share
ವಿಶ್ವ ಬ್ಲಿಝ್ ಚಾಂಪಿಯನ್‌ಶಿಪ್ ಪ್ರಶಸ್ತಿ ಹಂಚಿಕೊಂಡ ಕಾರ್ಲ್‌ಸನ್, ನೆಪೊಮ್ನಿಯಾಚ್ಚಿ

ನ್ಯೂಯಾರ್ಕ್: ಐತಿಹಾಸಿಕ ಬೆಳವಣಿಗೆಯೊಂದರಲ್ಲಿ ಹಾಲಿ ವಿಶ್ವ ಬ್ಲಿಝ್ ಚೆಸ್ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್, ನ್ಯೂಯಾರ್ಕ್‌ನ ವಾಲ್ ಸ್ಟ್ರೀಟ್‌ನಲ್ಲಿ ನಡೆದ 2024ರ ವಿಶ್ವ ಬ್ಲಿಝ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಬುಧವಾರ ರಶ್ಯದ ಇಯಾನ್ ನೆಪೊಮ್ನಿಯಾಚ್ಚಿ ಜೊತೆಗೆ ಹಂಚಿಕೊಂಡಿದ್ದಾರೆ. ಪ್ರಶಸ್ತಿಯನ್ನು ಹಂಚಿಕೊಂಡ ಘಟನೆ ಚೆಸ್ ಇತಿಹಾಸದಲ್ಲಿ ಹಿಂದೆಂದೂ ನಡೆದಿಲ್ಲ.

ಫಲಿತಾಂಶವನ್ನು ನಿರ್ಧರಿಸುವ ಸಡನ್ ಡೆತ್‌ನಲ್ಲಿ ಉಭಯ ಆಟಗಾರರು ಬೆನ್ನು ಬೆನ್ನಿಗೆ ಮೂರು ಪಂದ್ಯಗಳನ್ನು ಡ್ರಾಗೊಳಿಸಿದ ಬಳಿಕ ಪ್ರಶಸ್ತಿಯನ್ನು ಇಬ್ಬರು ಆಟಗಾರರಲ್ಲಿ ಹಂಚುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಅದಕ್ಕೂ ಮೊದಲು, ಕಾರ್ಲ್‌ಸನ್ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಚಾಲನೆ ನೀಡಿದರು. ಬಳಿಕ ಗೆಲ್ಲಲು ಅವರಿಗೆ ಒಂದು ಡ್ರಾ ಸಾಕಾಗಿತ್ತು. ಆದರೆ ನೆಪೊಮ್ನಿಯಾಚ್ಚಿ ಅಮೋಘ ಪ್ರತಿಹೋರಾಟವನ್ನು ನೀಡಿದರು. ಅವರು ಎರಡು ಪಂದ್ಯಗಳನ್ನು ಗೆದ್ದರು. ಅಂತಿಮ ಸ್ಕೋರ್ 2.0-2.0ಯಲ್ಲಿ ಸಮಬಲವಾದಾಗ ಸಡನ್ ಡೆತ್ ಅನಿವಾರ್ಯವಾಯಿತು.

ಬಳಿಕ ನಡೆದ ಮೂರು ಸಡನ್ ಡೆತ್ ಪಂದ್ಯಗಳಲ್ಲಿ ಉಭಯ ಆಟಗಾರರು ಸಮಾನವಾಗಿ ಹೋರಾಡಿದರು. ಆಗ ಪ್ರಶಸ್ತಿಯನ್ನು ಹಂಚಿಕೊಳ್ಳುವ ಪ್ರಸ್ತಾವವನ್ನು ಕಾರ್ಲ್‌ಸನ್, ನೆಪೊಮ್ನಿಯಾಚ್ಚಿ ಮುಂದಿಟ್ಟರು. ಅದಕ್ಕೆ ಚೆಸ್‌ನ ಜಾಗತಿಕ ಆಡಳಿತ ಮಂಡಳಿ ಅಂತಿಮ ಮುದ್ರೆಯನ್ನು ಒತ್ತಿತು.

ಫೈನಲ್ ಪಂದ್ಯವು 2021ರ ಕ್ಲಾಸಿಕಲ್ ವಿಶ್ವ ಚಾಂಪಿಯನ್‌ಶಿಪ್ ಪಂದ್ಯದ ಪುನರಾವರ್ತನೆಯಾಗಿತ್ತು. ಆ ಫೈನಲ್‌ನಲ್ಲಿ ನೆಪೊಮ್ನಿಯಾಚ್ಚಿ ಅವರು ಕಾರ್ಲ್‌ಸನ್ ವಿರುದ್ಧ ಸೋಲನುಭವಿಸಿದ್ದರು.

ಇದರೊಂದಿಗೆ, ನಿರಂತರವಾಗಿ ದ್ವಿತೀಯ ಸ್ಥಾನಿಯಾಗುವ ನೆಪೊಮ್ನಿಯಾಚ್ಚಿ ಅವರ ಶಾಪವೂ ಕೊನೆಯಾಯಿತು. ಅವರು ಏಳು ಬಾರಿ ಫೈನಲ್‌ನಲ್ಲಿ ಎಡವಿದ್ದರು.

ಅವರು 2013, 2015 ಮತ್ತು 2021ರ ವಿಶ್ವ ರ್ಯಾಪಿಡ್ ಚಾಂಪಿಯನ್‌ಶಿಪ್‌ನಲ್ಲಿ, 2014ರ ವಿಶ್ವ ಬ್ಲಿಝ್ ಚಾಂಪಿಯನ್‌ಶಿಪ್‌ನಲ್ಲಿ, 2022ರ ವಿಶ್ವ ಫಿಶರ್ ರ್ಯಾಂಡಮ್ ಚಾಂಪಿಯನ್‌ಶಿಪ್‌ನಲ್ಲಿ ಹಾಗೂ 2021 ಮತ್ತು 2023ರ ಕ್ಲಾಸಿಕಲ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ಇದು ಕಾರ್ಲ್‌ಸನ್‌ರ ಎಂಟನೇ ಬ್ಲಿಝ್ ಪ್ರಶಸ್ತಿಯಾಗಿದೆ.

Tags

CarlsenNepomniachtchiWorld Blitz Championship
share
ವಾರ್ತಾಭಾರತಿ
ವಾರ್ತಾಭಾರತಿ
Next Story
X