ನ್ಯಾಶನಲ್ ರೈಫಲ್ ಅಸೋಸಿಯೇಶನ್ ಅಧ್ಯಕ್ಷ ಸ್ಥಾನಕ್ಕೆ ಗಗನ್ ನಾರಂಗ್ ಸ್ಪರ್ಧೆ

ಗಗನ್ ನಾರಂಗ್ | PC : PTI
ಹೊಸದಿಲ್ಲಿ, ನ.23: ಒಲಿಂಪಿಕ್ಸ್ ಪದಕ ವಿಜೇತ ಗಗನ್ ನಾರಂಗ್ ನ್ಯಾಶನಲ್ ರೈಫಲ್ ಅಸೋಸಿಯೇಶನ್ (ಎನ್ಆರ್ಎಐ)ಅಧ್ಯಕ್ಷ ಸ್ಥಾನಕ್ಕಾಗಿ ಕಾಳಿಕೇಶ್ ನಾರಾಯಣ ಸಿಂಗ್ ವಿರುದ್ಧ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಬಿಜೆಪಿ ಸಂಸದ ಹಾಗೂ ಉದ್ಯಮಿ ನವೀನ್ ಜಿಂದಾಲ್ ಕಳೆದ ವಾರ ತನ್ನ ಹೆಸರನ್ನು ಹಿಂಪಡೆದ ನಂತರ ಈ ಬೆಳವಣಿಗೆ ನಡೆದಿದೆ.
ಗಗನ್ ಅವರ ಹೆಸರನ್ನು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ಸ್ ಹಿರಿಯ ಉಪಾಧ್ಯಕ್ಷ ಅಜಯ್ ಪಟೇಲ್ ಪ್ರಸ್ತಾವಿಸಿದ್ದಾರೆ.
2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ವಿಜೇತ ನಾರಂಗ್ ಅವರು ಆಡಳಿತ ಮಂಡಳಿಯ ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ಅಜಯ್ ಹೆಸರನ್ನು ಪ್ರಸ್ತಾವಿಸಿದ್ದಾರೆ.
ಕುತೂಹಲಕಾರಿ ಅಂಶವೆಂದರೆ ಗಗನ್ ಅವರು ಇತರ ಐವರು ಅಭ್ಯರ್ಥಿಗಳ ಜೊತೆಗೆ ಉಪಾಧ್ಯಕ್ಷ ಹುದ್ದೆಗೂ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಪವನ್ ಕುಮಾರ್ ಸಿಂಗ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಿರುವ ಏಕೈಕ ಅಭ್ಯರ್ಥಿಯಾಗಿದ್ದಾರೆ. ಡಿಸೆಂಬರ್ 4ರಂದು ಪಂಜಾಬ್ ನಲ್ಲಿ ನಡೆಯಲಿರುವ ಸಾಮಾನ್ಯ ಸಭೆಯಲ್ಲಿ 2025ರಿಂದ 2029ರ ವರೆಗಿನ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಗುವುದು. ಸಭೆಯ ವೇಳೆ 25 ಸದಸ್ಯರ ಆಡಳಿತ ಮಂಡಳಿಯನ್ನು ಕೂಡ ಆಯ್ಕೆ ಮಾಡಲಾಗುತ್ತದೆ.





