ಕೊಹ್ಲಿ, ಧವನ್ ಅವರನ್ನು ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ ಗಿಲ್

ಶುಭಮನ್ ಗಿಲ್ x.com/TheCricketPanda
ಹೊಸದಿಲ್ಲಿ : ಭಾರತ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾಗಿರುವ ಶುಭಮನ್ ಗಿಲ್ ಶನಿವಾರ ಅಫ್ಘಾನಿಸ್ತಾನ ವಿರುದ್ಧ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರ ದಾಖಲೆಗಳನ್ನು ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ್ದಾರೆ. ಅತಿವೇಗವಾಗಿ 3000 ರನ್ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.
ಗಿಲ್ 62 ಇನಿಂಗ್ಸ್ಗಳಲ್ಲಿ ಈ ಮೈಲುಗಲ್ಲು ಸ್ಥಾಪಿಸಿದ್ದು, ಶಿಖರ್ ಧವನ್ (72 ಇನಿಂಗ್ಸ್) ಮತ್ತು ವಿರಾಟ್ ಕೊಹ್ಲಿ (75 ಇನಿಂಗ್ಸ್) ಅವರನ್ನು ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ. ವಿಶ್ವಮಟ್ಟದಲ್ಲಿ ಗಿಲ್ ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅತಿವೇಗವಾಗಿ 3000 ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಹಶೀಂ ಆಮ್ಲ ಕೇವಲ 57 ಇನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿ ಪ್ರಥಮ ಸ್ಥಾನದಲ್ಲಿದ್ದಾರೆ.
ಶನಿವಾರದ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಬ್ಯಾಟಿಂಗ್ ಆರಂಭಿಸಿದ ಗಿಲ್ 66 ಎಸೆತಗಳಲ್ಲಿ 84 ರನ್ ಸಿಡಿಸಿ ಗೆಲುವಿನ ರೂವಾರಿ ಎನಿಸಿದರು. ಕೇವಲ 37 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಇವರು ಅಜೇಯರಾಗಿ ಇನ್ನೂ 2.3 ಓವರ್ಗಳಿದ್ದಂತೆಯೇ ಭಾರತವನ್ನು ಗೆಲುವಿನ ದಡ ಸೇರಿಸಿದರು. ಮಳೆಯಿಂದ ವಿಳಂಬವಾಗಿ ಆರಂಭವಾದ ಪಂದ್ಯವನ್ನು 25 ಓವರ್ಗಳಿಗೆ ಇಳಿಸಲಾಗಿತ್ತು.




