IPL 2026 | ಮತ್ತೊಮ್ಮೆ ಮುಂಬೈ ಇಂಡಿಯನ್ಸ್ ನಾಯಕತ್ವವಹಿಸಿಕೊಂಡ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ | Photo Credit : PTI
ಚೆನ್ನೈ, ಮೇ 20: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಬುಧವಾರ ರಾತ್ರಿ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಅವರು ಮತ್ತೊಮ್ಮೆ ಮುಂಬೈ ಇಂಡಿಯನ್ಸ್ ಕ್ರಿಕೆಟ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದ ಆಲ್ರೌಂಡರ್ ಪಾಂಡ್ಯ ಅವರು ಬೆನ್ನುನೋವಿನಿಂದಾಗಿ ಮುಂಬೈ ಇಂಡಿಯನ್ಸ್ ತಂಡದ ನಾಲ್ಕು ಪಂದ್ಯಗಳಿಂದ ವಂಚಿತರಾಗಿದ್ದರು. ಮೇ 2ರಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕೊನೆಯ ಪಂದ್ಯ ಆಡಿದ್ದರು. ಆ ಪಂದ್ಯದಲ್ಲಿ ಮುಂಬೈ 8 ವಿಕೆಟ್ಗಳಿಂದ ಸೋಲುಂಡಿತ್ತು.
ಪಂಜಾಬ್ ಕಿಂಗ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಸೂರ್ಯಕುಮಾರ್ ವೈಯಕ್ತಿಕ ಕಾರಣದಿಂದಾಗಿ ಅಲಭ್ಯರಾದಾಗ ಜಸ್ಪ್ರಿತ್ ಬುಮ್ರಾ ನಾಯಕತ್ವ ವಹಿಸಿದ್ದರು.
ಮುಂಬೈ ಇಂಡಿಯನ್ಸ್ ಪಾಲಿಗೆ ಈ ವರ್ಷದ ಐಪಿಎಲ್ ಸಿಂಹಸ್ವಪ್ನವಾಗಿದ್ದು, ಈ ತನಕ ಎಂಟು ಪಂದ್ಯಗಳನ್ನು ಸೋತಿದೆ. ಪ್ಲೇಆಫ್ ರೇಸ್ನಿಂದ ಸಂಪೂರ್ಣ ಹೊರಬಿದ್ದಿದೆ.




