ಐಸಿಸಿ ಏಕದಿನ ರ್ಯಾಂಕಿಂಗ್ | 12 ಸ್ಥಾನಗಳಲ್ಲಿ ಭಡ್ತಿ ಪಡೆದ ಅರ್ಷದೀಪ್ ಸಿಂಗ್

ಅರ್ಷದೀಪ್ ಸಿಂಗ್ | Photo Credit : PTI
ದುಬೈ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಪುರುಷ ಆಟಗಾರರ ಹೊಸ ಐಸಿಸಿ ರ್ಯಾಂಕಿಂಗ್ನಲ್ಲಿ ಬೌಲರ್ಗಳ ಪೈಕಿ 12 ಸ್ಥಾನ ಮೇಲಕ್ಕೇರಿ ಜೀವನಶ್ರೇಷ್ಠ 19ನೇ ಸ್ಥಾನ ಪಡೆದಿದ್ದಾರೆ.
ನ್ಯೂಝಿಲ್ಯಾಂಡ್ ತಂಡದ ವಿರುದ್ಧ ಕೊನೆಗೊಂಡಿರುವ ಐದು ಪಂದ್ಯಗಳ ಏಕದಿನ ಸರಣಿಯ ನಂತರ ಅರ್ಷದೀಪ್ ಈ ಸಾಧನೆ ಮಾಡಿದ್ದಾರೆ.
ಆಸ್ಟ್ರೇಲಿಯ ವಿರುದ್ಧ ಶತಕ ಗಳಿಸಿ ತಂಡದ ಗೆಲುವಿಗೆ ಕಾರಣವಾಗಿದ್ದ ಇಂಗ್ಲೆಂಡ್ನ ಟಾಮ್ ಬಾಂಟನ್ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಭಡ್ತಿ ಪಡೆದಿದ್ದಾರೆ.
ಏಕದಿನ ಬೌಲಿಂಗ್ ರ್ಯಾಂಕಿಂಗ್ನಲ್ಲಿ ಅರ್ಷದೀಪ್, ಮ್ಯಾಟ್ ಹೆನ್ರಿ ಮಹತ್ವದ ಸಾಧನೆ
12 ಸ್ಥಾನಗಳಲ್ಲಿ ಭಡ್ತಿ ಪಡೆದಿರುವ ಅರ್ಷದೀಪ್ ಸಿಂಗ್ ಏಕದಿನ ಬೌಲರ್ಗಳ ರ್ಯಾಂಕಿಂಗ್ನಲ್ಲಿ 19ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಅಗ್ರ ಸ್ಥಾನ ಪಡೆದಿದ್ದಾರೆ. ನ್ಯೂಝಿಲ್ಯಾಂಡ್ನ ವೇಗಿ ಮ್ಯಾಟ್ ಹೆನ್ರಿ 15 ಸ್ಥಾನ ಮೇಲಕ್ಕೇರಿ 12ನೇ ಸ್ಥಾನ ಹಂಚಿಕೊಂಡಿದ್ದಾರೆ.
ಆಸ್ಟ್ರೇಲಿಯದ ವಿರುದ್ಧ ಮೊದಲೆರಡು ಏಕದಿನ ಪಂದ್ಯಗಳಲ್ಲಿ ವಿಕೆಟ್ಗಳನ್ನು ಪಡೆದಿದ್ದ ಇಂಗ್ಲೆಂಡ್ನ ಜೋಫ್ರಾ ಆರ್ಚರ್ ಟಾಪ್-10ಕ್ಕೆ ಮರಳಿದ್ದಾರೆ.
ಅಡಿಲೇಡ್ನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಶತಕ ಗಳಿಸಿದ್ದ ಇಂಗ್ಲೆಂಡ್ನ ಬ್ಯಾಟರ್ ಟಾಮ್ ಬಾಂಟಮ್ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಭಾರೀ ಪ್ರಗತಿ ಸಾಧಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ತನ್ನ ಎರಡನೇ ಶತಕ(121 ರನ್)ಗಳಿಸಿದ ಬಾಂಟನ್ 34 ಸ್ಥಾನ ಮೇಲಕ್ಕೇರಿ 13ನೇ ಸ್ಥಾನ ತಲುಪಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.
ಬಾಂಟಮ್ ಸಹ ಆಟಗಾರ ಜೋ ರೂಟ್ ಎರಡು ಸ್ಥಾನ ಮೇಲಕ್ಕೇರಿ 9ನೇ ಸ್ಥಾನ ತಲುಪಿ ಅಗ್ರ-10ಕ್ಕೆ ಮರಳಿದ್ದಾರೆ. ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ಅಗ್ರ ಸ್ಥಾನದಲ್ಲೇ ಮುಂದುವರಿದಿದ್ದಾರೆ.






