Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ವಿಂಡೀಸ್ ಟೆಸ್ಟ್ : ಗುರುವಾರ ಮೊದಲ...

ಭಾರತ-ವಿಂಡೀಸ್ ಟೆಸ್ಟ್ : ಗುರುವಾರ ಮೊದಲ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ30 Sept 2025 8:49 PM IST
share
ಭಾರತ-ವಿಂಡೀಸ್ ಟೆಸ್ಟ್ : ಗುರುವಾರ ಮೊದಲ ಪಂದ್ಯ

ಅಹ್ಮದಾಬಾದ್, ಸೆ. 30: ಭಾರತ ಮತ್ತು ಪ್ರವಾಸಿ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಅಹ್ಮದಾಬಾದ್‌ನಲ್ಲಿ ಗುರುವಾರ ಆರಂಭವಾಗಲಿದೆ.

ಶುಭಮನ್ ಗಿಲ್ ನಾಯಕತ್ವದ ಭಾರತ ತಂಡವು ಎರಡು ಟೆಸ್ಟ್‌ಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಫೇವರಿಟ್ ಆಗಿದೆ. ಒಂದು ಕಾಲದಲ್ಲಿ ಕ್ರಿಕೆಟ್‌ನ ದೊಡ್ಡ ಶಕ್ತಿಯಾಗಿದ್ದ ವೆಸ್ಟ್ ಇಂಡೀಸ್ ಈಗ ದುರ್ಬಲವಾಗಿದೆ. ಗಾಯದ ಸಮಸ್ಯೆಗಳಿಂದ ಬಳಲುತ್ತಿರುವ ವೆಸ್ಟ್ ಇಂಡೀಸ್ ಹಲವಾರು ವರ್ಷಗಳಿಂದ ಕುಸಿತದ ದಾರಿಯಲ್ಲಿ ಸಾಗಿದೆ. ಅದರ ಟಿ20 ತಂಡವಂತೂ ಇತ್ತೀಚೆಗೆ ಟೆಸ್ಟ್ ಆಡದ ನೇಪಾಳದ ವಿರುದ್ಧ ಸರಣಿ ಸೋತು ಹೊಸ ಕನಿಷ್ಠ ಮಟ್ಟ ತಲುಪಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈ ವರ್ಷ ಅದು ಆಸ್ಟ್ರೇಲಿಯ ವಿರುದ್ಧ 3-0 ಅಂತರದಿಂದ ಸೋತಿದೆ. ಸ್ವದೇಶದಲ್ಲಿ ನಡೆದ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಅದು ಕೇವಲ 27 ರನ್‌ಗೆ ಆಲೌಟ್ ಆಯಿತು. ಇದು ಟೆಸ್ಟ್ ಇತಿಹಾಸದ ಎರಡನೇ ಕನಿಷ್ಠ ಮೊತ್ತವಾಗಿದೆ.

ರಾಸ್ಟನ್ ಚೇಸ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡವು ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದು, ಕೊನೆಯ ಕ್ಷಣಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ವೇಗಿಗಳಾದ ಅಲ್ಝಾರಿ ಜೋಸೆಫ್ ಮತ್ತು ಶಮರ್ ಜೋಸೆಫ್ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಅವರ ಬದಲಿಗೆ ರಾಷ್ಟ್ರೀಯ ತಂಡದಲ್ಲಿ ಈವರೆಗೆ ಆಡದ ಜೊಹಾನ್ ಲೇನ್ ಮತ್ತು ಎಡಗೈ ವೇಗಿ ಜೆಡಿಯಾ ಬ್ಲೇಡ್ಸ್ರನ್ನು ತಂಡಕ್ಕೆ ಸೇರಿಸಲಾಗಿದೆ. ಬ್ಲೇಡ್ಸ್ ಈವರೆಗೆ ವೆಸ್ಟ್ ಇಂಡೀಸ್ ಪರವಾಗಿ ಏಕದಿನ ಮತ್ತು ಟಿ20 ಕ್ರಿಕೆಟ್ ಮಾತ್ರ ಆಡಿದ್ದಾರೆ. ಜೇಡನ್ ಸೀಲ್ಸ್ 10ಕ್ಕಿಂತ ಹೆಚ್ಚು ಟೆಸ್ಟ್‌ಗಳನ್ನು ಆಡಿರುವ ಏಕೈಕ ವೇಗಿಯಾಗಿದ್ದಾರೆ.

ಇನ್ನು ಭಾರತ ತಂಡ ಇತ್ತೀಚೆಗೆ ಇಂಗ್ಲೆಂಡ್‌ನಲ್ಲಿ ನಡೆದ ಐದು ಟೆಸ್ಟ್‌ಗಳ ಸರಣಿಯಲ್ಲಿ 2-2 ರಿಂದ ಡ್ರಾ ಸಾಧಿಸಿ ಆತ್ಮವಿಶ್ವಾಸದಲ್ಲಿದೆ. ಗಿಲ್‌ಗೆ ಇದು ನಾಯಕತ್ವದ ಮೊದಲ ಸರಣಿಯಾಗಿತ್ತು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ನಿವೃತ್ತರಾದ ನಂತರ ಭಾರತ ಆಡಿರುವ ಮೊದಲ ಸರಣಿ ಅದಾಗಿತ್ತು.

ಗಿಲ್ ವೈಯಕ್ತಿಕವಾಗಿ ಇಂಗ್ಲೆಂಡ್‌ನಲ್ಲಿ 754 ರನ್ ಗಳಿಸಿದರು. ಇದು ಭಾರತೀಯ ಬ್ಯಾಟರ್ ಒಬ್ಬರು ಇಂಗ್ಲೆಂಡ್‌ನಲ್ಲಿ ಗಳಿಸಿದ ಗರಿಷ್ಠ ರನ್ ಆಗಿದೆ.

ವೇಗಿ ಜಸ್ಪ್ರೀತ್ ಬುಮ್ರಾ ದುಬೈನಲ್ಲಿ ಭಾನುವಾರ ನಡೆದ ಟಿ20 ಏಷ್ಯ ಕಪ್ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಎರಡು ವಿಕೆಟ್ ಪಡೆದ ನಂತರ ಟೆಸ್ಟ್‌ಗೆ ಮರಳುತ್ತಿದ್ದಾರೆ. ಈ ವರ್ಷ ಆಸ್ಟ್ರೇಲಿಯದಲ್ಲಿ ಗಾಯಗೊಂಡ ನಂತರ ಬುಮ್ರಾರ ಕೆಲಸದ ಒತ್ತಡವನ್ನು ಎಚ್ಚರಿಕೆಯಿಂದ ನಿಭಾಯಿಸಲಾಗುತ್ತಿದೆ.

ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ಗಳ ಪೈಕಿ ಎರಡರಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಆ ಸರಣಿಯಲ್ಲಿ ಮುಹಮ್ಮದ್ ಸಿರಾಜ್ 23 ವಿಕೆಟ್‌ಗಳನ್ನು ಪಡೆದು ಮಿಂಚಿದರು.

ವೆಸ್ಟ್ ಇಂಡೀಸ್‌ನ ಸ್ಪಿನ್ ವಿಭಾಗದಲ್ಲಿ ಚೇಸ್‌ಗೆ ಜೊಮೆಲ್ ವಾರಿಕನ್ ಮತ್ತು ಖಾರಿ ಪಿಯರ್ ಸಾಥ್ ನೀಡಲಿದ್ದಾರೆ. ಪಿಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಆಡುತ್ತಿದ್ದಾರೆ.

ಎರಡನೇ ಮತ್ತು ಅಂತಿಮ ಟೆಸ್ಟ್ ಅಕ್ಟೋಬರ್ 10ರಂದು ಹೊಸದಿಲ್ಲಿಯಲ್ಲಿ ಆರಂಭಗೊಳ್ಳಲಿದೆ.

ಆಟ ಆರಂಭ: ಗುರುವಾರ ಬೆಳಗ್ಗೆ 9:30

ತಂಡಗಳು

ಭಾರತ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ದೇವದತ್ತ ಪಡಿಕ್ಕಲ್, ಧ್ರುವ ಜುರೆಲ್, ರವೀಂದ್ರ ಜಡೇಜ, ಮುಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ವಾಶಿಂಗ್ಟನ್ ಸುಂದರ್, ಕುಲದೀಪ್ ಯಾದವ್, ನಿತೀಶ್ ರೆಡ್ಡಿ, ಪ್ರಸಿದ್ಧ ಕೃಷ್ಣ, ಅಕ್ಷರ್ ಪಟೇಲ್, ಎನ್. ಜಗದೀಶನ್.

ವೆಸ್ಟ್ ಇಂಡೀಸ್: ರಾಸ್ಟನ್ ಚೇಸ್ (ನಾಯಕ), ಕೆವ್ಲನ್ ಆ್ಯಂಡರ್ಸನ್, ಆ್ಯಲಿಕ್ ಆ್ಯತನೇಝ್, ಜಾನ್ ಕ್ಯಾಂಬೆಲ್, ತಗೆನರಿನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶಾಯ್ ಹೋಪ್, ಟೆವಿನ್ ಇಮ್ಲಾಚ್, ಜೊಹಾನ್ ಲೇನ್, ಜೆಡಿಯ ಬ್ಲೇಡ್ಸ್, ಬ್ರಾಂಡನ್ ಕಿಂಗ್, ಆ್ಯಂಡರ್ಸನ್ ಫಿಲಿಪ್, ಖಾರಿ ಪಿಯರ್, ಜೇಡನ್ ಸೀಲ್ಸ್, ಜೊಮೆಲ್ ವಾರಿಕನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X