ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್: 286 ರನ್ ಮುನ್ನಡೆಯೊಂದಿಗೆ ಡಿಕ್ಲೇರ್ ಘೋಷಿಸಿದ ಭಾರತ

Photo credit: PTI
5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾದ ವೆಸ್ಟ್ ಇಂಡೀಸ್
ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಡಿಕ್ಲೇರ್ ಘೋಷಿಸಿದೆ. ಮೂರನೇ ದಿನದಾಟ ಆರಂಭಕ್ಕೂ ಮುನ್ನ ಡಿಕ್ಲೇರ್ ಘೋಷಿಸಿದ ಭಾರತ 286 ರನ್ ಮುನ್ನಡೆ ಗಳಿಸಿದೆ.
286 ರನ್ ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಗೆ ಇಳಿದ ವೆಸ್ಟ್ ಇಂಡೀಸ್ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ್ದು, 59 ರನ್ ಗಳಿಗೆ ಐದು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ರವೀಂದ್ರ ಜಡೇಜಾ 3 ವಿಕೆಟ್ ಪಡೆದಿದ್ದು, ಕುಲದೀಪ್ ಯಾದವ್ ಹಾಗೂ ಮುಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.
Next Story





