ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ; ತಂಡಕ್ಕೆ ಮರಳಿದ ಮುಹಮ್ಮದ್ ಶಮಿ

Photo:X/@BCCI
ಮುಂಬೈ: ಟೀಮ್ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಮತ್ತು ಇಂಗ್ಲೆಂಡ್ ವಿರುದ್ಧದ ODI ಸರಣಿಗೆ ತಮ್ಮ ತಂಡವನ್ನು ಶನಿವಾರ ಪ್ರಕಟಿಸಿದೆ.
ಈ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಶುಭಮನ್ ಗಿಲ್ ಅವರನ್ನು ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. 15 ಜನರ ತಂಡಕ್ಕೆ ಸಂಜು ಸ್ಯಾಮ್ಸನ್ ಬದಲಿಗೆ ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ಗಳಾಗಿ ಆಯ್ಕೆ ಮಾಡಲಾಗಿದೆ.
ಮುಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಗಾಯದಿಂದ ಯಶಸ್ವಿಯಾಗಿ ಚೇತರಿಸಿಕೊಂಡಿರುವುದು ಕುಲ್ದೀಪ್ ಯಾದವ್ ಮತ್ತು ಮುಹಮ್ಮದ್ ಶಮಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಪತ್ರಿಕಾಗೋಷ್ಠಿಯಲ್ಲಿ ಇರಲಿಲ್ಲ.
2025ರ ಚಾಂಪಿಯನ್ಸ್ ಟ್ರೋಫಿಗೆ ಪೂರ್ಣ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜ, ಮುಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ವಾಶಿಂಗ್ಟನ್ ಸುಂದರ್
India's squad for the #ChampionsTrophy 2025 announced!
— BCCI (@BCCI) January 18, 2025
Drop in a message in the comments below to cheer for #TeamIndia pic.twitter.com/eFyXkKSmcO