ಮಳೆಯಿಂದಾಗಿ ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ರದ್ದು

Photo credit: X/BCCI
ಕ್ಯಾನ್ಬೆರಾ, ಅ. 29: ಮಳೆಯಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಬುಧವಾರ ಕ್ಯಾನ್ಬೆರಾದ ಮನುಕಾ ಓವಲ್ ಮೈದಾನದಲ್ಲಿ ರದ್ದುಗೊಂಡಿದೆ.
ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆದರೆ ಮಳೆಯ ತೀವ್ರತೆಯಿಂದ ಮೈದಾನ ತೇವಗೊಂಡು, ಅಧಿಕಾರಿಗಳು ಪಂದ್ಯ ಆರಂಭಿಸಲು ಸಾಧ್ಯವಿಲ್ಲವೆಂದು ಘೋಷಿಸಿದರು.
Next Story





