ಏಶ್ಯಕಪ್ | ರೋಚಕ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸಿದ ಭಾರತ

Photo : x/BCCI
6 ವಿಕೆಟ್ ಗಳ ಭರ್ಜರಿ ಜಯ
ದುಬೈ: ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆದ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಪಾಕಿಸ್ತಾನದ ವಿರುದ್ಧದ ಸೂಪರ್ 4 ಹಂತದ ರೋಚಕ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಸೋಲಿಸಿತು. ಆ ಮೂಲಕ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ಪಾಕಿಸ್ತಾನವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡ ಪಾಕಿಸ್ತಾನ ತಂಡವು ಭಾರತಕ್ಕೆ 172 ರನ್ ಗಳ ಗುರಿ ನೀಡಿತು.
4 ವಿಕೆಟ್ ಕಳೆದುಕೊಂಡ ಭಾರತ ತಂಡವು 7 ಎಸೆತ ಬಾಕಿ ಇರುವಂತೆ 174 ರನ್ ಗಳಿಸಿ ರೋಚಕ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸಿತು. ಭಾರತ ತಂಡದ ಪರ ಅಭಿಷೇಕ್ ಶರ್ಮ 74 ರನ್ ಗಳಿಸಿ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯಕ್ಕೆ ಮೆರುಗು ನೀಡಿದರು.
Next Story





