Asian Games | ಕಬಡ್ಡಿಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಇರಾನ್ ವಿರುದ್ಧ ಗೆಲುವು

Photo source: X/@India_AllSports
ಹೊಸದಿಲ್ಲಿ: ಏಷ್ಯನ್ ಗೇಮ್ಸ್ 2026ರ ಪುರುಷರ ಕಬಡ್ಡಿ ಫೈನಲ್ ನಲ್ಲಿ ಇರಾನ್ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿತು.
ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿದ್ದ ಭಾರತಕ್ಕೆ ಫೈನಲ್ ನಲ್ಲಿ ಆರಂಭಿಕ ಹಂತದಲ್ಲಿ ಹಿನ್ನಡೆಯಾಯಿತು. ಮೊದಲಾರ್ಧದ ಅಂತ್ಯಕ್ಕೆ ಭಾರತ ಹಿನ್ನಡೆಯಲ್ಲಿತ್ತು. ದ್ವಿತೀಯಾರ್ಧದಲ್ಲೂ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ.
ಆದರೂ ಬಳಿಕ ಭಾರತ ತಂಡ ಆಟದಲ್ಲಿ ಪ್ರಬಲವಾಗಿ ಪುಟಿದೆದ್ದಿತು. ದ್ವಿತೀಯಾರ್ಧದಲ್ಲಿ ಮುನ್ನಡೆ ಸಾಧಿಸಿದ ಭಾರತ, ಆ ಮುನ್ನಡೆಯನ್ನು ಕೊನೆಯವರೆಗೂ ಕಾಯ್ದುಕೊಂಡಿತು. ಪಂದ್ಯ ಮುಂದುವರಿದಂತೆ ಅಂತರವನ್ನೂ ಹೆಚ್ಚಿಸಿಕೊಂಡ ಭಾರತ, ಅಂತಿಮವಾಗಿ ಇರಾನ್ ವಿರುದ್ಧ ಗೆಲುವು ಸಾಧಿಸಿ ಚಿನ್ನದ ಪದಕ ಖಚಿತಪಡಿಸಿಕೊಂಡಿತು.
ಇದಕ್ಕೂ ಕೆಲವೇ ಗಂಟೆಗಳ ಮೊದಲು ನಡೆದ ಮಹಿಳೆಯರ ಕಬಡ್ಡಿ ಫೈನಲ್ನಲ್ಲೂ ಭಾರತ ತಂಡ ಇರಾನ್ ವಿರುದ್ಧ ಗೆಲುವು ಸಾಧಿಸಿತ್ತು. ಇದರೊಂದಿಗೆ ಮಹಿಳಾ ತಂಡವೂ ತನ್ನ ಚಿನ್ನದ ಪದಕವನ್ನು ಉಳಿಸಿಕೊಂಡಿತ್ತು.
Next Story




