IPL- 2026| ಕೆ.ಎಲ್.ರಾಹುಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ | Photo Credit : PTI
ಬೆಂಗಳೂರು, ಎ.16: ಲಕ್ನೊ ಸೂಪರ್ ಜಯಂಟ್ಸ್ ವಿರುದ್ಧ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿಯ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅವರು ಸಿಕ್ಸರ್ ಬಾರಿಸುವ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.
ಈ ಪಂದ್ಯದಲ್ಲಿ ಅರ್ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲಿಯೂ ಉತ್ತಮ ಪ್ರದರ್ಶನ ನೀಡಿತ್ತು. ಈ ಪಂದ್ಯದಲ್ಲಿ ಆರ್ಸಿಬಿಯ ಮಾಜಿ ನಾಯಕ ಕೊಹ್ಲಿ 34 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 49 ರನ್ ಗಳಿಸಿ ಒಂದು ರನ್ನಿಂದ ಅರ್ಧಶತಕ ವಂಚಿತರಾಗಿದ್ದರು.
ಕೊಹ್ಲಿ ಒಂದು ಸಿಕ್ಸರ್ ಬಾರಿಸುತ್ತಿದ್ದಂತೆ ಐಪಿಎಲ್ನಲ್ಲಿ ರಾಹುಲ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕೊಹ್ಲಿ ಅವರು ಐಪಿಎಲ್ ಇತಿಹಾಸದಲ್ಲಿ ಈ ತನಕ ಭಾರತದ ಆರಂಭಿಕ ಆಟಗಾರನಾಗಿ ಅತ್ಯಂತ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದರು. ಮುಂಬೈ ಇಂಡಿಯನ್ಸ್ ತಂಡದ ಬ್ಯಾಟರ್ ರೋಹಿತ್ ಶರ್ಮಾ ಅವರು 148 ಸಿಕ್ಸರ್ಗಳನ್ನು ಗಳಿಸುವ ಮೂಲಕ 3ನೇ ಸ್ಥಾನದಲ್ಲಿದ್ದಾರೆ. ಇದಾದ ಬಳಿಕ ಶಿಖರ್ ಧವನ್ ಹಾಗೂ ಶುಭಮನ ಗಿಲ್ ಅವರು ಕ್ರಮವಾಗಿ 4ನೇ ಹಾಗೂ 5ನೇ ಸ್ಥಾನದಲ್ಲಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಲ್ಲಿದೆ. ಅವರು ಒಟ್ಟು 326 ಸಿಕ್ಸರ್ ಸಿಡಿಸಿದ್ದಾರೆ. ನಂತರದ ಸ್ಥಾನದಲ್ಲಿ ಡೇವಿಡ್ ವಾರ್ನರ್ ಹಾಗೂ ವಿರಾಟ್ ಕೊಹ್ಲಿ ಇದ್ದಾರೆ.






