IPL 2026 | ಡೆಲ್ಲಿ ವಿರುದ್ಧ CSK ಗೆ 8 ವಿಕೆಟ್ ಗಳ ಭರ್ಜರಿ ಜಯ

Photo : x.com/IPL
ಮತ್ತೆ ಮಿಂಚಿದ ಸಂಜು ಸ್ಯಾಮ್ಸನ್
ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು 8 ವಿಕೆಟ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತ್ತು. 156 ರನ್ ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೇವಲ 2 ವಿಕೆಟ್ ನಷ್ಟಕ್ಕೆ 17.3 ಓವರುಗಳಲ್ಲಿ 159 ರನ್ ಗಳಿಸಿ ಜಯಭೇರಿ ಬಾರಿಸಿತು.
ಸಂಜು ಸ್ಯಾಮ್ಸನ್ ಅಜೇಯ 87 ರನ್ ಗಳಿಸಿದರು. ಕಾರ್ತಿಕ್ ಶರ್ಮ 41ರನ್ ಗಳಿಸಿ ತಂಡಕ್ಕೆ ಮಹತ್ವದ ಕೊಡುಗೆ ನೀಡಿದರು.
Next Story




