Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ದೆ:...

ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ದೆ: ಕರ್ನಾಟಕಕ್ಕೆ ಒಂದು ಬೆಳ್ಳಿ, ಎರಡು ಕಂಚಿನ ಪದಕ

ವಾರ್ತಾಭಾರತಿವಾರ್ತಾಭಾರತಿ18 Dec 2023 1:53 PM IST
share
ರಾಷ್ಟ್ರೀಯ  ರೋಲರ್ ಹಾಕಿ ಸ್ಪರ್ದೆ: ಕರ್ನಾಟಕಕ್ಕೆ ಒಂದು ಬೆಳ್ಳಿ, ಎರಡು ಕಂಚಿನ ಪದಕ

ಕಾರವಾರ: ಚಂಡಿಗಢನಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ. ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚು ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಹೆಮ್ಮೆಯ ತಂಡವಾಗಿ ಕರ್ನಾಟಕ ಹೊರಹೊಮ್ಮಿದೆ.

ಸಬ್ ಜ್ಯೂನಿಯರ್ ಬಾಲಕಿಯರ ವಿಭಾಗದಲ್ಲಿ ಬೆಂಗಳೂರಿನ ಮೂವರು ಸ್ಕೇಟರ್ಸ್‌ಗಳು : ಮೂವರು ಬೆಂಗಳೂರಿನ ಆಟಗಾರರನ್ನೊಳಗೊಂಡ ಕರ್ನಾಟಕ ತಂಡವೂ ತಮಿಳುನಾಡು, ತೆಲಂಗಾಣ, ಜಮ್ಮು ಕಾಶ್ಮೀರ, ಆಂದ್ರಪ್ರದೇಶ ತಂಡವನ್ನ ಮಣಿಸಿತ್ತು. ನಂತರ ಚಂಡಿಗಢ ಜೊತೆಗೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸೋಲನ್ನಪ್ಪಿತು. ಬಳಿಕ ಮೂರನೇ ಸ್ಥಾನಕ್ಕಾಗಿ ಕೇರಳ ತಂಡದ ಜೊತೆಗೆ ನಡೆದ ಹಣಾಹಣಿಯಲ್ಲಿ 3-1ಪಾಯಿಂಟ್‌ಗಳಿಂದ ಗೆಲುವು ಸಾಧಿಸಿದೆ.

ತಂಡದಲ್ಲಿದ್ದವರು: ಮಾನ್ಯತಾ ಶಿರಸಿ(ಕ್ಯಾಪ್ಟನ್), ಆರ್ಯ ಮಂಜುನಾಥ ಬೆಂಗಳೂರು, ಯಶಸ್ವಿನಿ ಬೆಂಗಳೂರು, ಚಿನ್ಮಯಿ ಬೆಂಗಳೂರು, ಮಾನ್ಯ ಬಿ.ಎಸ್ ಶಿರಸಿ, ಅಪೂರ್ವ ಕಾರವಾರ, ಕೀರ್ತಿ ಮುಂಡಗೋಡು, ಮಾನಸಿ ಬೆಳಗಾವಿ, ಆರಾಧ್ಯ ಮೆನನ್ ಕಾರವಾರ ತಂಡವನ್ನ ಪ್ರತಿನಿಧಿಸಿದ್ದರು.

ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11ವರ್ಷದೊಳಗಿನವರು) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ್ ನೇತೃತ್ವದ ತಂಡ ಹರ್ಯಾಣ ಎದುರು 6-0, ಆಂದ್ರಪ್ರದೇಶ ಎದುರು 3-0ವಿಜಯಿಯಾಗಿತ್ತು. ನಂತರ ಕೇರಳ ಜೊತೆಗೆ 2-0, ತಮಿಳುನಾಡು ಜೊತೆ 4-0 ಅಂತರದಿಂದ ಗೆಲುವು ಸಾಧಿಸಿತ್ತು. ಬಳಿಕ ಕೇರಳ ತಂಡದ ಜೊತೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ 3-1 ಗೆಲುವಿನ ಕೇಕೆ ಹಾಕಿತ್ತು. ಬಳಿಕ ಪಂಜಾಬ್ ಜೊತೆ ನಡೆದ ಫೈನಲ್ ಪಂದ್ಯದಲ್ಲಿ 1-2 ಅಂತರಗಳಿಂದ ಪರಾಭವಗೊಂಡು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ತಂಡದಲ್ಲಿದ್ದವರು: ಆದ್ಯಾ ನಾಯ್ಕ್ ಕೈಗಾ(ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ಐಶ್ವರ್ಯ ತುಮಕೂರು, ಕವನ ತುಮಕೂರು, ಸನ್ನಿಧಿ ತುಮಕೂರು, ಅಹನಾ ನಾಯ್ಕ ಕಾರವಾರ, ಕುಶಾಲ ಬೆಂಗಳೂರು, ಅನಯಾ ಕಾರವಾರ‌ ತಂಡವನ್ನ ಪ್ರತಿನಿಧಿಸಿದ್ದರು.

ಕೆಡೆಟ್ ಮಿಕ್ಸಡ್ ವಿಭಾಗದಲ್ಲಿ ಆರಂಭದ ಪಂದ್ಯ ತಮಿಳುನಾಡು ಜೊತೆ ಡ್ರಾ, ಆಂದ್ರಪ್ರದೇಶ, ಕೇರಳ , ಎದುರು ಗೆದ್ದು ಸೆಮಿಫೈನಲ್‌ ತಲುಪಿತ್ತು. ಬಳಿಕ ಮತ್ತೆ ಎದುರಾದ ಕೇರಳ ಜೊತೆಗಿನ ಸೆಮಿಫೈನಲ್‌ ಪಂದ್ಯದಲ್ಲಿ ಪರಾಭವಗೊಂಡಿತ್ತು. ನಂತರ ಅಂಕಗಳ ಆಧಾರದ ಮೇಲೆ ಮೂರನೇ ಸ್ಥಾನಕ್ಕಾಗಿ ಆಂದ್ರಪ್ರದೇಶ ತಂಡದೊಂದಿಗೆ ನಡೆದ ಪಂದ್ಯದಲ್ಲಿ 1-3 ಅಂಕ ಗಳಿಸಿ ಕಂಚಿನ ಪದಕಕ್ಕಾಗಿ ತೃಪ್ತಿಪಟ್ಟುಕೊಂಡಿತ್ತು.

ತಂಡದಲ್ಲಿದ್ದವರು: ಆದ್ಯಾ ನಾಯ್ಕ ಕೈಗಾ(ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ರಾಜಗುರು ಶಿರಸಿ, ಸಾಕಿಬ್ ಕೈಗಾ, ಅಯ್ಯನ್ ಕೈಗಾ, ಶ್ರೀಶ ಶೇಷಗಿರಿ ಮೊಗೇರ ಕಾರವಾರ, ಐಶ್ವರ್ಯ ತುಮಕೂರು, ದಕ್ಷತ್ ತುಮಕೂರು ಕರ್ನಾಟಕ ತಂಡವನ್ನ ಪ್ರತಿನಿಧಿಸಿದ್ದರು.

ಒಟ್ಟಾರೆ ಟೂರ್ನಿಯಲ್ಲಿ ಕೈಗಾದ ಆದ್ಯಾ ನಾಯ್ಕ, ರಾಜಗುರು, ಭುವನೀತ, ಮಾನ್ಯತಾ, ಅಪೂರ್ವ ಕರ್ನಾಟಕ ತಂಡದ ಪರವಾಗಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಕರ್ನಾಟಕ ತಂಡದ ಆಟಗಾರರಿಗೆ ದಿಲೀಪ ಹಣಬರ ತರಬೇತಿ ನೀಡಿದ್ದರು. ಮಕ್ಕಳ ಸಾಧನೆಗೆ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಅಭಿನಂದನೆ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X