Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ನಾಟಕಕ್ಕೆ 217 ರನ್ ಸೋಲುಣಿಸಿದ...

ಕರ್ನಾಟಕಕ್ಕೆ 217 ರನ್ ಸೋಲುಣಿಸಿದ ಮಧ್ಯಪ್ರದೇಶ

ವಾರ್ತಾಭಾರತಿವಾರ್ತಾಭಾರತಿ25 Jan 2026 11:39 PM IST
share
ಕರ್ನಾಟಕಕ್ಕೆ 217 ರನ್ ಸೋಲುಣಿಸಿದ ಮಧ್ಯಪ್ರದೇಶ
ರಣಜಿ ಎಲಿಟ್ ‘ಬಿ’ ಗುಂಪಿನ ಪಂದ್ಯ

ಬೆಂಗಳೂರು, ಜ. 25: ರಣಜಿ ಟ್ರೋಫಿ ಎಲೈಟ್ ‘ಬಿ’ ಗುಂಪಿನ ಪಂದ್ಯದಲ್ಲಿ ರವಿವಾರ ಮಧ್ಯಪ್ರದೇಶ ತಂಡವು ಆತಿಥೇಯ ಹಾಲಿ ಚಾಂಪಿಯನ್ ಕರ್ನಾಟಕವನ್ನು 217 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ.

ಆಲೂರಿನ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ ನಾಲ್ಕನೇ ಹಾಗೂ ಕೊನೆಯ ದಿನ ಮಧ್ಯಪ್ರದೇಶದ ಸ್ಪಿನ್ನರ್‌ಗಳಾದ ಸಾರಾಂಶ್ ಜೈನ್ ಮತ್ತು ಸಾಗರ್ ಸೋಳಂಕಿ ಒಟ್ಟು ಆರು ವಿಕೆಟ್‌ಗಳನ್ನು ಕಬಳಿಸಿ ಕರ್ನಾಟಕದ ಬ್ಯಾಟರ್‌ಗಳ ಮೇಲೆ ಸವಾರಿ ಮಾಡಿದರು.

ಪಂದ್ಯದ ಕೊನೆಯ ದಿನ ಮಧ್ಯಪ್ರದೇಶ ತನ್ನ ದ್ವಿತೀಯ ಇನಿಂಗ್ಸ್ ಅನ್ನು 6 ವಿಕೆಟ್ ನಷ್ಟಕ್ಕೆ 204 ರನ್ ಇದ್ದಲ್ಲಿಂದ ಮುಂದುವರಿಸಿತು. ತಂಡದ ಮೊತ್ತ 8 ವಿಕೆಟ್ ನಷ್ಟಕ್ಕೆ 229 ರನ್ ಆದಾಗ ಇನಿಂಗ್ಸ್ ಘೋಷಿಸಿತು.

ಗೆಲುವಿಗೆ ದ್ವಿತೀಯ ಇನಿಂಗ್ಸ್‌ನಲ್ಲಿ 362 ರನ್‌ಗಳ ಗುರಿ ಪಡೆದ ಕರ್ನಾಟಕ ಕೇವಲ 144 ರನ್‌ಗಳಿಗೆ ಸರ್ವಪತನ ಕಂಡಿತು.

ಮಧ್ಯಪ್ರದೇಶದ ಆಫ್‌ಸ್ಪಿನ್ನರ್ ಸಾರಾಂಶ್ ಜೈನ್ 37 ರನ್ ನೀಡಿ ಮೂರು ವಿಕೆಟ್‌ಗಳನ್ನು ಕಬಳಿಸಿದರೆ, ಎಡಗೈ ಸ್ಪಿನ್ನರ್ ಸಾಗರ್ ಸೋಳಂಕಿ 20 ರನ್ ನೀಡಿ ಮೂರು ವಿಕೆಟ್‌ಗಳನ್ನು ಪಡೆದರು.

ಮೊದಲ ಇನಿಂಗ್ಸ್‌ನಲ್ಲಿ 92 ರನ್ ಗಳಿಸಿದ್ದ ಆರಂಭಿಕ ಆಟಗಾರ ಕೆ.ವಿ. ಅನೀಶ್, ದ್ವಿತೀಯ ಇನಿಂಗ್ಸ್‌ನಲ್ಲಿ 142 ಎಸೆತಗಳಲ್ಲಿ 57 ರನ್ ಗಳಿಸಿ ಪ್ರತಿರೋಧ ನೀಡಿದರು.

ಕರುಣ್ ನಾಯರ್ ಸ್ಥಾನದಲ್ಲಿ ಆಡಿದ ನಿಕಿನ್ ಜೋಸ್ 101 ಎಸೆತಗಳಲ್ಲಿ 26 ರನ್ ಗಳಿಸಿದರು. ವಿದ್ಯಾಧರ್ ಪಾಟೀಲ್ 69 ಎಸೆತಗಳಲ್ಲಿ 26 ರನ್ ಗಳಿಸಿ ಔಟಾಗದೆ ಉಳಿದರು.

ಈ ಗೆಲುವಿನಿಂದ ಮಧ್ಯಪ್ರದೇಶ ಎಲಿಟ್ ‘ಬಿ’ ಗುಂಪಿನಲ್ಲಿ 22 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ. ಕರ್ನಾಟಕ 21 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಗೋವಾವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿರುವ ಮಹಾರಾಷ್ಟ್ರ 24 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ.

Tags

Ranji Trophy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X