IPL 2026 | 'ಪಂತ' ಸೋತ ಲಕ್ನೋ; ಗೆದ್ದು ಬೀಗಿದ RCB

Photo : x@RCBTweets
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ RCB ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರೆ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಸಿಖ್ ಸಲಾಮ್, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ ಅವರ ಬೌಲಿಂಗ್ ದಾಳಿಗೆ ಲಕ್ನೋ ಹಳಿ ತಪ್ಪಿತು. 20 ಓವರುಗಳಲ್ಲಿ 146 ರನ್ ಗಳಿಸಿ ಆಲೌಟ್ ಆಯಿತು. ರಸಿಖ್ ಸಲಾಮ್ 4 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ 2, ಹೇಝಲ್ ವುಡ್ ಒಂದು ವಿಕೆಟ್ ಪಡೆದರು.
147 ರನ್ಗಳ ಗರಿ ಪಡೆದ RCB 29 ಎಸೆತಗಳು ಬಾಕಿ ಇರುವಂತೆ ಪಂತ್ ಪಡೆಯನ್ನು 5 ವಿಕೆಟ್ ಗಳಿಂದ ಸೋಲಿಸಿ ಜಯಗಳಿಸಿತು.
Next Story




