ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದ ರಿಷಭ್ ಪಂತ್

ರಿಷಭ್ ಪಂತ್ | Photo Credit : PTI
ಕೋಲ್ಕತಾ. ನ.15: ಟೀಮ್ ಇಂಡಿಯಾದ ಬ್ಯಾಟರ್ ರಿಷಭ್ ಪಂತ್ ತಮ್ಮ ಯಶಸ್ವಿ ಟೆಸ್ಟ್ ವೃತ್ತಿಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಲೆಜೆಂಡರಿ ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದಿರುವ ಪಂತ್ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ಸಿಕ್ಸರ್ ಸಿಡಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ.
ಸ್ಪಿನ್ನರ್ ಕೇಶವ ಮಹಾರಾಜ್ ಬೌಲಿಂಗ್ ನಲ್ಲಿ ಮುನ್ನುಗ್ಗಿ ಆಡಿದ ಪಂತ್ ಅವರು 90 ಸಿಕ್ಸರ್ ಗಳನ್ನು ಸಿಡಿಸಿರುವ ಭಾರತದ ಮಾಜಿ ಆರಂಭಿಕ ಬ್ಯಾಟರ್ ಸೆಹ್ವಾಗ್ ದಾಖಲೆಯನ್ನು ಮುರಿದಿದ್ದಾರೆ.
ಪಂತ್ ಒಟ್ಟು 91 ಸಿಕ್ಸರ್ ಗಳನ್ನು ಸಿಡಿಸಿದ್ದು, ಭಾರತೀಯ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಆಗಿದ್ದಾರೆ. ಸೆಹ್ವಾಗ್(90 ಸಿಕ್ಸರ್), ರೋಹಿತ್ ಶರ್ಮಾ(88), ರವೀಂದ್ರ ಜಡೇಜ(80) ಹಾಗೂ ಎಂ.ಎಸ್. ಧೋನಿ(78)ಗಿಂತ ಮುಂದಿದ್ದಾರೆ.
Next Story





