ಬ್ಯಾಟಿಂಗ್ ನಲ್ಲಿ ಅಗ್ರ ಸ್ಥಾನ ಉಳಿಸಿಕೊಂಡ ರೋಹಿತ್: ಐಸಿಸಿ ಏಕದಿನ ರ್ಯಾಂಕಿಂಗ್ಸ್

ರೋಹಿತ್ ಶರ್ಮಾ | Photo Credit : PTI
ದುಬೈ, ನ. 12: ಭಾರತದ ರೋಹಿತ್ ಶರ್ಮಾ ಬುಧವಾರ ಬಿಡುಗಡೆಗೊಂಡ ನೂತನ ಪುರುಷರ ಐಸಿಸಿ ಏಕದಿನ ರ್ಯಾಂಕಿಂಗ್ಸ್ ನಲ್ಲಿ ಬ್ಯಾಟಿಂಂಗ್ ವಿಭಾಗದಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಭಾರತೀಯ ತಂಡದ ನಾಯಕ ಶುಭಮನ್ ಗಿಲ್ ತನ್ನ ನಾಲ್ಕನೇ ಸ್ಥಾನವನ್ನು ಉಳಿಸಿಕೊಂಡಿದ್ದರೆ, ವಿರಾಟ್ ಕೊಹ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಇಂಗ್ಲೆಂಡ್ನ ಜೋಫ್ರಾ ಆರ್ಚರ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಆ ಮೂಲಕ ಅವರು ದಕ್ಷಿಣ ಆಫ್ರಿಕಾದ ಕೇಶವ ಮಹಾರಾಜ್ ರನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ.
ಆಲ್ರೌಂಡರ್ ವಿಭಾಗದಲ್ಲಿ ಶ್ರೀಲಂಕಾದ ವನಿಂದು ಹಸರಂಗ ತನ್ನ 10ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
Next Story





