IPL 2026 | ಇಂಪ್ಯಾಕ್ಟ್ 'ಕಿಂಗ್' ಪಡಿಕ್ಕಲ್; RCBಯಿಂದ ಶುಭಾರಂಭ

Photo : x@RCBTweets
SRH ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
SRH ನೀಡಿದ 202 ರನ್ ಗಳ ಬೆನ್ನಟ್ಟಿದ RCB ತಂಡವು 15.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ದೇವದತ್ ಪಡಿಕ್ಕಲ್ 26 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ತಮ್ಮ ಶೋ ತೋರಿಸಿದರು. ಅವರ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್ ಗಳು ಸೇರಿದ್ದವು.
19 ಆವೃತ್ತಿಯಿಂದ ರೋಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಕಿಂಗ್ ಕೊಹ್ಲಿ ಈ ಬಾರಿ ಆರಂಭಿಕ ಪಂದ್ಯದಲ್ಲಿಯೇ ಅರ್ಧ ಶತಕ ಬಾರಿಸಿ ಬೆಂಗಳೂರಿನ ಕ್ರಿಕೆಟ್ ಪ್ರಿಯರಿಗೆ ಒಂದು ದಿನ ಮುಂಚಿತವಾಗಿ ವಾರಾಂತ್ಯದ ಸಂಭ್ರಮ ತರಿಸಿದರು.
Next Story





