ಎರಡನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ
6 ವಿಕೆಟ್ ಪಡೆದು ಮಿಂಚಿದ ಆಕಾಶ್ ದೀಪ್ ಸಿಂಗ್

Photo: x/@bcci
ಎಡ್ಬಾಸ್ಟನ್: ರವಿವಾರ ಇಲ್ಲಿ ಮುಕ್ತಾಯಗೊಂಡ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, 337 ರನ್ಗಳ ಬೃಹತ್ ಅಂತರದಿಂದ ಜಯಭೇರಿ ಬಾರಿಸಿದೆ.
ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಎದುರಿಸುವಲ್ಲಿ ವಿಫಲವಾದ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲನ್ನರು, 271 ರನ್ ಗಳಿಸುವ ವೇಳೆಗೆ ಆಲೌಟ್ ಆದರು.
ತೀವ್ರ ಕುತೂಹಲದ ಹಂತ ತಲುಪಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ, ಎರಡನೇ ಇನಿಂಗ್ಸ್ನಲ್ಲಿ 608 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುವಲ್ಲಿ ಇಂಗ್ಲೆಂಡ್ ವಿಫಲವಾಯಿತು.
ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಬುಮ್ರಾ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗದ ಬೌಲರ್ ಆಕಾಶ್ ದೀಪ್, ಎರಡನೇ ಇನ್ನಿಂಗ್ಸ್ನಲ್ಲಿ ಮಾರಕ ಬೌಲಿಂಗ್ ನಡೆಸುವ ಮೂಲಕ ಪ್ರಮುಖ 6 ವಿಕೆಟ್ಗಳನ್ನು ಪಡೆಯುವ ಮೂಲಕ ಮಿಂಚಿದರು.
Next Story