Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆಲವೊಮ್ಮೆ ಹೆಚ್ಚು ಹಣ ಬಂದರೆ...

ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ: ಭಾರತದ ಕ್ರಿಕೆಟಿಗರ ವಿರುದ್ಧ ಕಪಿಲ್ ದೇವ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ30 July 2023 6:33 PM IST
share
ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ: ಭಾರತದ ಕ್ರಿಕೆಟಿಗರ ವಿರುದ್ಧ ಕಪಿಲ್ ದೇವ್ ಕಿಡಿ

ಹೊಸದಿಲ್ಲಿ, ಜು.30: ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ. ಈ ಕ್ರಿಕೆಟಿಗರು ತಮಗೆ ಎಲ್ಲವೂ ತಿಳಿದಿದೆ ಎಂದು ಭಾವಿಸುತ್ತಾರೆ. ಸಹಾಯದ ಅಗತ್ಯವಿರುವ ಅನೇಕ ಕ್ರಿಕೆಟಿಗರು ಇದ್ದಾರೆ. ಸುನೀಲ್ ಗವಾಸ್ಕರ್ ಇರುವಾಗ ನೀವು ಏಕೆ ಮಾತನಾಡಬಾರದು? ಎಂದು ಹೇಳಿರುವ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹಾಲಿ ಕ್ರಿಕೆಟಿಗರ ಕುರಿತು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ಈ ಹಿಂದೆ ಆಟಗಾರರ ಅಹಂಕಾರದ ಕುರಿತಂತೆ ಹೇಳಿಕೆ ನೀಡಿದ್ದ ಇನ್ನೋರ್ವ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಮಾತಿಗೆ ಧ್ವನಿಗೂಡಿಸಿದ್ದಾರೆ.

The Weekಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಕಪಿಲ್ ದೇವ್, ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ. ಅದಕ್ಕಿಂತ ಉತ್ತಮವಾಗಿ ಅದನ್ನು ಹೇಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಅನುಭವಿ ವ್ಯಕ್ತಿ ನಿಮಗೆ ಸಹಾಯ ಮಾಡಬಹುದು ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ಕಳೆದ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯ ವಿರುದ್ಧ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್-2023ರ ಫೈನಲ್ ಪಂದ್ಯವನ್ನು ಸೋತ ನಂತರ ಸುನೀಲ್ ಗವಾಸ್ಕರ್ ಭಾರತ ತಂಡವನ್ನು ಟೀಕಿಸಿದ್ದರು. ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹೊರತುಪಡಿಸಿ ಬೇರ್ಯಾವ ಆಟಗಾರನು ನನ್ನ ಬಳಿ ಸಲಹೆ ಕೇಳಲು ಬಂದಿಲ್ಲ ಎಂದು ಹೇಳಿದ್ದರು.

ಈಗಿನ ಆಟಗಾರರ ಕುರಿತು ಗವಾಸ್ಕರ್ ಹೇಳಿಕೆಯ ಬಗ್ಗೆ ಕಪಿಲ್ ದೇವ್ ಮಾತನಾಡಿದ್ದು, ನನ್ನನ್ನು ಈ ತನಕ ಯಾವುದೇ ವೇಗದ ಬೌಲರ್ ಸಲಹೆ ಕೇಳಿ ಸಂಪರ್ಕಿಸಿಲ್ಲ. ನಾನು ಗವಾಸ್ಕರ್ ರಿಂದ ಒಂದು ವಿಚಾರ ತಿಳಿದುಕೊಂಡಿದ್ದೇನೆ. ಅದೇನೆಂದರೆ, ಆಟಗಾರರಿಗೆ ಅಗತ್ಯವಿರುವ ತನಕ ಸಲಹೆ ನೀಡುವುದು ಬೇಡ. ನಿನ್ನ ಬಳಿ ಸಲಹೆ ಕೇಳುವ ತನಕ ಸಲಹೆ ನೀಡಬೇಡ ಎಂದು ಅವರು ನನಗೆ ಹೇಳಿದ್ದರು ಎಂದರು.

ಬಾರ್ಬಡೋಸ್ ನಲ್ಲಿ ಶನಿವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು 40.1 ಓವರ್ಗಳಲ್ಲಿ 181 ರನ್ ಗೆ ಆಲೌಟಾಯಿತು. ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ಹೊರತುಪಡಿಸಿ ಹೆಚ್ಚಿನ ಎಲ್ಲ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಸುಮಾರು 4 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದ್ದ ವೆಸ್ಟ್ಇಂಡೀಸ್ 3 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X