ಲಕ್ಷ್ಯ ಸೇನ್ ಸಹೋದರರ ವಿರುದ್ಧದ ಮೊಕದ್ದಮೆ ರದ್ದುಪಡಿಸಿದ ಸುಪ್ರೀಂ ಕೋರ್ಟ್

ಲಕ್ಷ್ಯ ಸೇನ್ | PC : X \ @India_AllSports
ಹೊಸದಿಲ್ಲಿ, ಜು. 29: ಕಡಿಮೆ ವಯಸ್ಸಿನ ಪಂದ್ಯಾವಳಿಯೊಂದರಲ್ಲಿ ಭಾಗವಹಿಸುವುದಕ್ಕಾಗಿ ಬ್ಯಾಡ್ಮಿಂಟನ್ ಆಟಗಾರರಾದ ಲಕ್ಷ್ಯ ಸೇನ್ ಮತ್ತು ಅವರ ಸಹೋದರ ಚಿರಾಗ್ ಸೇನ್ ತಮ್ಮ ಜನ್ಮ ಪ್ರಮಾಣಪತ್ರಗಳನ್ನು ತಿರುಚಿದ್ದಾರೆ ಎಂಬುದಾಗಿ ಆರೋಪಿಸಿ ದಾಖಲಾಗಿರುವ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ಈ ಆರೋಪವನ್ನು ಸಾಬೀತುಪಡಿಸುವ ಯಾವುದೇ ಪುರಾವೆಯಿಲ್ಲ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರವು ಈಗಾಗಲೇ ತನಿಖೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಅವರಿಗೆ ಕ್ಲೀನ್ಚಿಟ್ ಕೊಟ್ಟಿದೆ ಎಂದು ನ್ಯಾಯಾಲಯ ಹೇಳಿತು.
ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಸಹೋದರರು ಸಲ್ಲಿಸಿರುವ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳಾದ ಸುಧಾಂಶು ದುಲಿಯ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ತೀರ್ಪು ನೀಡಿತು.
ಆರೋಪಗಳ ಪರಿಶೀಲನೆಗೆ ಕ್ರಿಮಿನಲ್ ತನಿಖೆ ಅಗತ್ಯ ಎಂಬ ಅಭಿಪ್ರಾಯದಲ್ಲಿ ಹುರುಳಿಲ್ಲ ಎಂದು ಅದು ಹೇಳಿತು.
Next Story





