Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟಿ20 ವಿಶ್ವಕಪ್: ಭಾರತಕ್ಕೆ ಸುಲಭದ...

ಟಿ20 ವಿಶ್ವಕಪ್: ಭಾರತಕ್ಕೆ ಸುಲಭದ ತುತ್ತಾದ ಅಫ್ಘಾನ್

ವಾರ್ತಾಭಾರತಿವಾರ್ತಾಭಾರತಿ21 Jun 2024 7:59 AM IST
share
ಟಿ20 ವಿಶ್ವಕಪ್: ಭಾರತಕ್ಕೆ ಸುಲಭದ ತುತ್ತಾದ ಅಫ್ಘಾನ್

ಹೊಸದಿಲ್ಲಿ: ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಜಸ್ಪ್ರೀತ್ ಬೂಮ್ರಾ ಅವರ ಅದ್ಭುತ ಬೌಲಿಂಗ್ ನೆರವಿನಿಂದ ಟಿ20 ವಿಶ್ವಕಪ್ ಪಂದ್ಯಾವಳಿಯ ಸೂಪರ್8 ಹಂತದ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ 47 ರನ್ ಗಳ ಸುಲಭ ಜಯ ಸಾಧಿಸಿದೆ.

ಗುರುವಾರ ಬಾರ್ಬಡೋಸ್ ನಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಬೌಲರ್ ರಶೀದ್ ಖಾನ್ 3 ಪ್ರಮುಖ ವಿಕೆಟ್ ಕಬಳಿಸಿದ ಬಳಿಕ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡ 8 ವಿಕೆಟ್ ನಷ್ಟಕ್ಕೆ 181 ರನ್ ಗಳ ಗೌರವಾರ್ಹ ಮೊತ್ತ ತಲುಪಲು ನೆರವಾದರು.

ಬೌಲಿಂಗ್ ನಲ್ಲಿ ಜಸ್ಪ್ರೀತ್ ಬೂಮ್ರಾ, ಅಫ್ಫಾನ್ ಬ್ಯಾಟ್ಸ್ಮನ್ ಗಳನ್ನು ಸಿಂಹಸ್ವಪ್ನವಾಗಿ ಕಾಡಿದರು. ನಾಲ್ಕು ಓವರ್ ಗಳಲ್ಲಿ ಕೇವಲ 7 ರನ್ ನೀಡಿ ಮೂರು ವಿಕೆಟ್ ಕಿತ್ತರೆ, ಅವರಿಗೆ ಉತ್ತಮ ಸಾಥ್ ನೀಡಿದ ಕುಲದೀಪ್ ಯಾದವ್ 32 ರನ್ ಗಳಿಗೆ 2 ವಿಕೆಟ್ ಗಳಿಸಿ ಅಫ್ಘಾನಿಸ್ತಾನವನ್ನು 134 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ನಾಯಕ ರಶೀದ್ ಖಾನ್ 26 ರನ್ ಗಳಿಗೆ 3 ವಿಕೆಟ್ ಕಿತ್ತು ಉತ್ತಮ ಪ್ರದರ್ಶನ ನೀಡಿದರೂ, ಭಾರತ ವಿರುದ್ಧ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಸೋಲಿನ ಸರಣಿ ಮುಂದುವರಿಯಿತು.

ಭಾರತದ ಪರ ಬ್ಯಾಟಿಂಗ್ ನಲ್ಲಿ ರಿಷಬ್ ಪಂತ್ 11 ಎಸೆತಗಳಲ್ಲಿ 20 ಹಾಗೂ ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ 32 ರನ್ ಗಳಿಸಿ ಮಿಂಚಿದರು. ಟೂರ್ನಿಯುದ್ದಕ್ಕೂ ನೀರಸ ಪ್ರದರ್ಶನ ನೀಡುತ್ತಾ ಬಂದ ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 24 ರನ್ ಗಳಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ ಈ ಟೂರ್ನಿಯಲ್ಲಿ ಎರಡಂಕಿಯ ರನ್ ಗಳಿಸಿರುವುದು ಇದೇ ಮೊದಲು.

Tags

T20 World CupAfghanistanIndia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X