Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆ ಮೂರನೇ ಏಕದಿನ | ಸರಣಿ ಸೋಲಿನಿಂದ...

ನಾಳೆ ಮೂರನೇ ಏಕದಿನ | ಸರಣಿ ಸೋಲಿನಿಂದ ಪಾರಾಗುವ ವಿಶ್ವಾಸದಲ್ಲಿ ಭಾರತ

ವಾರ್ತಾಭಾರತಿವಾರ್ತಾಭಾರತಿ6 Aug 2024 9:57 PM IST
share
ನಾಳೆ ಮೂರನೇ ಏಕದಿನ | ಸರಣಿ ಸೋಲಿನಿಂದ ಪಾರಾಗುವ ವಿಶ್ವಾಸದಲ್ಲಿ ಭಾರತ

ಕೊಲಂಬೊ : ಶ್ರೀಲಂಕಾ ವಿರುದ್ಧ ಸುಮಾರು 3 ದಶಕಗಳ ನಂತರ ಮೊದಲ ಬಾರಿ ಸರಣಿ ಸೋಲಿನಿಂದ ಪಾರಾಗಲು ಭಾರತೀಯ ಬ್ಯಾಟ್ಸ್‌ಮನ್‌ಗಳು ಬುಧವಾರ ನಡೆಯಲಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಸ್ಪಿನ್ ಸವಾಲನ್ನು ದಿಟ್ಟವಾಗಿ ಎದುರಿಸಬೇಕಾಗಿದೆ.

ನಾಯಕ ರೋಹಿತ್ ಶರ್ಮಾ ಇದಕ್ಕೆ ದಾರಿ ಕೊಡಬಲ್ಲರು. ಆದರೆ ಉಳಿದ ಆಟಗಾರರು ನಾಯಕನ ಹಾದಿಯನ್ನು ಅನುಸರಿಸಬೇಕಾಗಿದೆ.

ಮುಖ್ಯ ಕೋಚ್ ಆಗಿ ತನ್ನ ಚೊಚ್ಚಲ ಏಕದಿನ ಸರಣಿಯಲ್ಲಿ ಗೌತಮ್ ಗಂಭೀರ್ ಸದ್ಯ ಉತ್ತಮ ಆರಂಭ ಪಡೆದಂತೆ ಕಾಣುತ್ತಿಲ್ಲ.

ಭಾರತವು 1997ರಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಬಾರಿ ದ್ವಿಪಕ್ಷೀಯ ಏಕದಿನ ಸರಣಿಯನ್ನು ಸೋತಿತ್ತು. ಆನಂತರ ಉಭಯ ತಂಡಗಳ ನಡುವೆ ನಡೆದಿದ್ದ 11 ಏಕದಿನ ಅಂತರ್‌ರಾಷ್ಟ್ರೀಯ ಸರಣಿಯಲ್ಲಿ ಭಾರತವು ಸೋತಿಲ್ಲ.

ಮೊದಲ ಪಂದ್ಯ ಟೈ ಗೊಂಡ ನಂತರ ಎರಡನೇ ಪಂದ್ಯದಲ್ಲಿ 32 ರನ್‌ನಿಂದ ಸೋತಿರುವ ಭಾರತವು ಸದ್ಯ ಸಂಕಷ್ಟದಲ್ಲಿದೆ. ಬುಧವಾರ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಭಾರತಕ್ಕೆ ಸರಣಿ ಸೋಲಿನಿಂದ ಪಾರಾಗುವ ಕಠಿಣ ಸವಾಲು ಎದುರಾಗಿದೆ.

ಸರಣಿಯಲ್ಲಿ ಭಾರತದ ಬ್ಯಾಟರ್‌ಗಳು, ಸ್ಪಿನ್ನರ್‌ಗಳ ಸ್ನೇಹಿ ಪಿಚ್‌ನಲ್ಲಿ ರನ್ ಗಳಿಸಲು ಪರದಾಡುತ್ತಿದ್ದಾರೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 2 ಪಂದ್ಯಗಳಲ್ಲಿ ಕೇವಲ 38 ರನ್ ಗಳಿಸಿದ್ದಾರೆ. ಕೊಹ್ಲಿ ಔಟಾಗಿರುವ ರೀತಿಯು ಕಳವಳಕಾರಿಯಾಗಿದೆ.

ಎರಡು ಪಂದ್ಯಗಳಲ್ಲಿ ರೋಹಿತ್ ಉತ್ತಮ ಆರಂಭ ಒದಗಿಸಿದ್ದರೂ ಅದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಕೊಹ್ಲಿ ವಿಫಲರಾಗಿದ್ದಾರೆ. ರೋಹಿತ್ ಅವರು ಸರಣಿಯಲ್ಲಿ ಒಟ್ಟು 122 ರನ್ ಗಳಿಸಿದ್ದು, ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕವೇ 90 ರನ್ ಸಿಡಿಸಿದ್ದರು.

ಮಾಸ್ಟರ್ ಬ್ಯಾಟರ್ ಕೊಹ್ಲಿ ಮೊದಲ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಹಾಗೂ ಎರಡನೇ ಪಂದ್ಯದಲ್ಲಿ 6 ವಿಕೆಟ್ ಗೊಂಚಲು ಪಡೆದಿದ್ದ ಜೆಫ್ರಿ ವಾಂಡರ್ಸೆ ವಿರುದ್ಧ ಪರದಾಟ ನಡೆಸಿದ್ದರು. ಮಧ್ಯಮ ಓವರ್‌ಗಳಲ್ಲಿ ಭಾರತದ ಯಶಸ್ಸು ಕೊಹ್ಲಿ ಅವರನ್ನು ಹೆಚ್ಚು ಅವಲಂಬಿಸಿದೆ. ಕೊಹ್ಲಿ ಭಾರತದ ಪರ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಹಿಂದಿನ 15 ಇನಿಂಗ್ಸ್‌ಗಳಲ್ಲಿ ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.

ಶಿವಂ ದುಬೆ ಎರಡನೇ ಏಕದಿನ ಪಂದ್ಯದಲ್ಲಿ ವಾಂಡರ್ಸೆ ಅವರ ಸರಳ ಲೆಗ್ ಬ್ರೇಕ್ ಗುರುತಿಸುವಲ್ಲಿ ವಿಫಲರಾಗಿ ಎಲ್ಬಡಬ್ಲ್ಯು ಬಲೆಗೆ ಬಿದ್ದಿದ್ದರು. ಸ್ಪಿನ್ನರ್‌ಗಳ ಎದುರು ಉತ್ತಮವಾಗಿ ಆಡಬಲ್ಲ ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್.ರಾಹುಲ್ ಲಂಕಾದ ಸ್ಪಿನ್ನರ್‌ಗಳ ಎದುರು ಪರದಾಡಿದ್ದಾರೆ.

ರೋಹಿತ್ ಅವರು ಲಂಕಾದ ಸ್ಪಿನ್ ಹಾಗೂ ವೇಗದ ಬೌಲಿಂಗ್‌ನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. 2ನೇ ಪಂದ್ಯದಲ್ಲಿ 44 ಎಸೆತಗಳಲ್ಲಿ 64 ರನ್ ಗಳಿಸಿದ್ದರು.

ಬುಧವಾರ ಆಡುವ 11ರ ಬಳಗ ನಿರ್ಧರಿಸುವಾಗ ಟೀಮ್ ಮ್ಯಾನೇಜ್‌ಮೆಂಟ್ ದುಬೆ ಅವರನ್ನು ಕೈಬಿಡುವ ಕುರಿತು ಯೋಚಿಸಬೇಕಾಗಿದೆ. ಕೊಲಂಬೊದ ಪಿಚ್ ಅನ್ನು ಪರಿಗಣಿಸಿದರೆ ಬ್ಯಾಟಿಂಗ್ ಆಲ್‌ರೌಂಡರ್ ರಿಯಾನ್ ಪರಾಗ್‌ಗೆ ಅವಕಾಶ ನೀಡಿದರೆ ಹೆಚ್ಚು ಉಪಯುಕ್ತವಾಗಲಿದೆ.

ಭಾರತದ ಬೌಲರ್‌ಗಳು ಪಂದ್ಯದ ನಿರ್ಣಾಯಕ ಹಂತದಲ್ಲಿ ಉತ್ತಮ ಪ್ರದರ್ಶನ ನೀಡುವ ಅಗತ್ಯವಿದೆ. ಹಿಂದಿನ ಪಂದ್ಯದಲ್ಲಿ ಲಂಕಾವು 142 ರನ್‌ಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿದ್ದರೂ ಆತಿಥೇಯರನ್ನು ಕಟ್ಟಿಹಾಕುವಲ್ಲಿ ವಿಫಲರಾಗಿದ್ದರು.

2ನೇ ಪಂದ್ಯದಲ್ಲಿ ವಿಕೆಟ್ ನಷ್ಟವಿಲ್ಲದೆ 97 ರನ್ ಗಳಿಸಿದ್ದ ಭಾರತ 147 ರನ್‌ಗೆ 6 ವಿಕೆಟ್ ಕಳೆದುಕೊಳ್ಳಲು ಕಾರಣವಾಗಿದ್ದ ಸ್ಪಿನ್ನರ್‌ಗಳ ಮೇಲೆ ಶ್ರೀಲಂಕಾ ಭಾರೀ ವಿಶ್ವಾಸ ಇರಿಸಿಕೊಂಡಿದೆ. ನಾಯಕ ಚರಿತ್ ಅಸಲಂಕಾ 61 ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ. 10 ವಿಕೆಟ್ ಅನ್ನು ಭಾರತ ವಿರುದ್ಧವೇ ಕಬಳಿಸಿದ್ದರು. ಆರು ವಿಕೆಟ್ ಪ್ರಸಕ್ತ ಸರಣಿಯಲ್ಲಿ ಉರುಳಿಸಿದ್ದರು.

ಪಂದ್ಯದ ಸಮಯ: ಮಧ್ಯಾಹ್ನ 2:30

share
ವಾರ್ತಾಭಾರತಿ
ವಾರ್ತಾಭಾರತಿ
Next Story
X