ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಜನವರಿಯಲ್ಲಿ ‘ಮೀಡಿಯಾ ಚಾಂಪಿಯನ್ಸ್ ಲೀಗ್’

ಸಾಂದರ್ಭಿಕ ಚಿತ್ರ | Photo Credit : freepik
ಬೆಂಗಳೂರು, ಡಿ.1: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ 2026ರ ಜನವರಿಯಲ್ಲಿ ಕರ್ನಾಟಕ ಮೀಡಿಯಾ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಮುಖ್ಯಸ್ಥ ಕಿರಣ್ ಶೆಟ್ಟಿ ತಿಳಿಸಿದ್ದಾರೆ.
ಸೋಮವಾರ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಅಂತರ್-ಮಾಧ್ಯಮ ಕ್ರಿಕೆಟ್ ಟೂರ್ನಿಯಾಗಿದ್ದು, ಇದರ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲಾಗುವುದು ಹಾಗೂ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂದೇಶವನ್ನು ನೀಡಲಾಗುವುದು ಎಂದರು.
ಚಾಂಪಿಯನ್ ತಂಡಕ್ಕೆ 10 ಲಕ್ಷ ರೂ., ರನ್ನರ್ಸ್-ಅಪ್ ತಂಡಕ್ಕೆ 5 ಲಕ್ಷ ರೂ. ಹಾಗೂ ಸೆಮಿಫೈನಲ್ ಪ್ರವೇಶಿಸಿದ ತಂಡಗಳಿಗೆ ತಲಾ 2.5ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು. ಈ ಟೂರ್ನಿಯಲ್ಲಿ ಆಡುವ ಮಾಧ್ಯಮ ತಂಡಗಳಿಗೆ ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ 78922 69215ಗೆ ಸಂಪರ್ಕಿಸಬಹುದು ಎಂದು ಕಿರಣ್ ಶೆಟ್ಟಿ ತಿಳಿಸಿದರು.





