Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನನ್ನೊಂದಿಗೆ ಫೋಟೊ ತೆಗೆದುಕೊಳ್ಳಲು ಹಣ...

ನನ್ನೊಂದಿಗೆ ಫೋಟೊ ತೆಗೆದುಕೊಳ್ಳಲು ಹಣ ಕೊಡಬೇಕು: ಮಕ್ಕಳಿಗೆ ತಮಾಷೆ ಮಾಡಿದ ವೈಭವ್ ಸೂರ್ಯವಂಶಿ

ವಾರ್ತಾಭಾರತಿವಾರ್ತಾಭಾರತಿ27 April 2026 8:57 PM IST
share
ನನ್ನೊಂದಿಗೆ ಫೋಟೊ ತೆಗೆದುಕೊಳ್ಳಲು ಹಣ ಕೊಡಬೇಕು: ಮಕ್ಕಳಿಗೆ ತಮಾಷೆ ಮಾಡಿದ ವೈಭವ್ ಸೂರ್ಯವಂಶಿ

ಹೊಸದಿಲ್ಲಿ, ಎ.27: ‘‘ನನ್ನೊಂದಿಗೆ ಫೋಟೊ ತೆಗೆಸಿಕೊಳ್ಳಬೇಕಾದರೆ ನೀವು ಹಣ ನೀಡಬೇಕಾಗುತ್ತದೆ’’ ಎಂದು ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಪುಟಾಣಿ ಅಭಿಮಾನಿಗಳಿಗೆ ವಿಮಾನ ನಿಲ್ದಾಣದಲ್ಲಿ ತಮಾಷೆ ಮಾಡಿದ ಘಟನೆ ನಡೆದಿದೆ.

ತನ್ನೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಬಂದ ಇಬ್ಬರು ಮಕ್ಕಳೊಂದಿಗಿದ್ದ ಸೂರ್ಯವಂಶಿ ತಮಾಷೆ ಮಾಡುತ್ತಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಹಂಚಿಕೊಂಡಿದೆ.

ಇಬ್ಬರು ಮಕ್ಕಳು ಸೂರ್ಯವಂಶಿ ಬಳಿ ತೆರಳಿ ತಮ್ಮೊಂದಿಗೆ ಫೋಟೊ ತೆಗೆಸಿಕೊಳ್ಳುವಂತೆ ಕೇಳಿಕೊಂಡವು. ಅದಕ್ಕೆ ಸಮ್ಮತಿಸಿದ ಸೂರ್ಯವಂಶಿ, ತನ್ನೊಂದಿಗೆ ಫೋಟೊ ತೆಗೆಯಬೇಕಾದರೆ ಹಣ ನೀಡಬೇಕು. ಉಚಿತವಾಗಿ ನೀಡುವುದಿಲ್ಲ ಎಂದು ಹೇಳುತ್ತಿರುವುದು ವೀಡಿಯೊದಲ್ಲಿದೆ.

‘‘ಬ್ರದರ್, ನಾನು ಫೋಟೊಗಳನ್ನು ತೆಗೆಯಲು ಶುಲ್ಕ ವಿಧಿಸುತ್ತೇನೆ. ಇದನ್ನು ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ’’ ಎಂದು ಸೂರ್ಯವಂಶಿ ಹೇಳಿದಾಗ ಮಕ್ಕಳು ಆಶ್ಚರ್ಯ ಚಕಿತರಾದರು.

ಮಕ್ಕಳು 200 ರೂ. ಹಿಡಿದುಕೊಂಡು ಬಂದು ಸೂರ್ಯವಂಶಿ ಅವರೊಂದಿಗೆ ಫೋಟೊ ತೆಗೆಸಿಕೊಂಡರು. ಆ ನಂತರ ಸೂರ್ಯವಂಶಿ ಅವರು ನಾನು ತಮಾಷೆ ಮಾಡಿದ್ದು ಎಂದು ಹೇಳಿ, ಹಣ ವಾಪಸ್ ನೀಡಿದರು. ಆ ಮಕ್ಕಳೊಂದಿಗೆ ಕೆಲವು ಫೋಟೊಗಳನ್ನು ತೆಗೆಸಿಕೊಂಡರು.

ಸದ್ಯ ಭರ್ಜರಿ ಫಾರ್ಮ್ನಲ್ಲಿರುವ ಸೂರ್ಯವಂಶಿ ಅವರನ್ನು ಎಸ್ಆರ್‌ಎಚ್‌ ನಾಯಕ ಪ್ಯಾಟ್ ಕಮಿನ್ಸ್ ಶ್ಲಾಘಿಸಿದರು.

‘‘ಸೂರ್ಯವಂಶಿ ನನ್ನ ನೆಚ್ಚಿನ ಆಟಗಾರನಾಗಿದ್ದಾರೆ. ಆತ ಚೆಂಡನ್ನು ಜೋರಾಗಿ ಹೊಡೆಯುತ್ತಾರೆ. ಅವರ ಆಟ ನೋಡುವುದೇ ಚಂದ’’ ಎಂದು ಕಮಿನ್ಸ್ ಹೇಳಿದ್ದಾರೆ.

ಸೂರ್ಯವಂಶಿ ಈ ವರ್ಷದ ಐಪಿಎಲ್‌ನಲ್ಲಿ 8 ಪಂದ್ಯಗಳಲ್ಲಿ ಒಟ್ಟು 357 ರನ್ ಗಳಿಸಿದ್ದು, ಇದರಲ್ಲಿ 31 ಬೌಂಡರಿಗಳು ಹಾಗೂ 32 ಸಿಕ್ಸರ್‌ಗಳಿವೆ.

View this post on Instagram

A post shared by Thenewsroominida (@thenewsroomindia)

Tags

Vaibhav Sooryavanshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X