ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗಾಗಿ ಲಂಡನ್ ನಿಂದ ಭಾರತಕ್ಕೆ ಆಗಮಿಸಿದ ಕೊಹ್ಲಿ

ವಿರಾಟ್ ಕೊಹ್ಲಿ |Photo Credit : X
ಹೊಸದಿಲ್ಲಿ, ನ.25: ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ನವೆಂಬರ್ 30ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸುವ ಸಲುವಾಗಿ ಮಂಗಳವಾರ ಬ್ರಿಟನ್ ನಿಂದ ಭಾರತಕ್ಕೆ ಬಂದಿಳಿದರು.
ಭಾರತದ ಹಿರಿಯ ಬ್ಯಾಟರ್ ಕೊಹ್ಲಿ ಮಂಗಳವಾರ ಮಧ್ಯಾಹ್ನ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಭಾರತದ ಮಾಜಿ ನಾಯಕ ಕೊಹ್ಲಿ ಲಂಡನ್ ನಲ್ಲಿ ನೆಲೆಸಿದ್ದು, ಸ್ವದೇಶ ಹಾಗೂ ವಿದೇಶದ ಸರಣಿಗೆ ಇಂಗ್ಲೆಂಡ್ ನಲ್ಲೇ ತಯಾರಿ ನಡೆಸುತ್ತಾರೆ. ಸರಣಿ ಆರಂಭವಾಗಲು ಕೆಲವೇ ದಿನಗಳ ಮುಂಚಿತವಾಗಿ ಟೀಮ್ ಇಂಡಿಯಾವನ್ನು ಸೇರುತ್ತಾರೆ.
ಕೊಹ್ಲಿ ಅವರು ವಿಮಾನನಿಲ್ದಾಣದಿಂದ ಹೊರಬರುತ್ತಿರುವ ಚಿತ್ರಗಳನ್ನು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಕೊಹ್ಲಿ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಕೊನೆಯ ಬಾರಿ ಏಕದಿನ ಸರಣಿಯನ್ನು ಆಡಿದ್ದರು.
ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ನ.30ರಂದು ರಾಂಚಿಯಲ್ಲಿ ನಡೆಯಲಿದೆ. ಎರಡನೇ ಏಕದಿನ ಡಿಸೆಂಬರ್ 3ರಂದು ರಾಯ್ಪುರ ಹಾಗೂ ಮೂರನೇ ಏಕದಿನ ಡಿಸೆಂಬರ್ 6ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ತಂಡವನ್ನು ಬಿಸಿಸಿಐ ರವಿವಾರ ಪ್ರಕಟಿಸಿದೆ. ಕೆ.ಎಲ್.ರಾಹುಲ್ ಸರಣಿಯಲ್ಲಿ ಹಂಗಾಮಿ ನಾಯಕನಾಗಿ ಆಯ್ಕೆಯಾಗಿದ್ದಾರೆ.







