Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ನೇಹ್ ರಾಣಾಗೆ 8 ವಿಕೆಟ್ | ಟೆಸ್ಟ್...

ಸ್ನೇಹ್ ರಾಣಾಗೆ 8 ವಿಕೆಟ್ | ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಫಾಲೋ ಆನ್ ವಿಧಿಸಿದ ಭಾರತ ಮಹಿಳಾ ತಂಡ

ವಾರ್ತಾಭಾರತಿವಾರ್ತಾಭಾರತಿ30 Jun 2024 11:31 PM IST
share
ಸ್ನೇಹ್ ರಾಣಾಗೆ 8 ವಿಕೆಟ್ | ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಫಾಲೋ ಆನ್ ವಿಧಿಸಿದ ಭಾರತ ಮಹಿಳಾ ತಂಡ

ಚೆನ್ನೈ : ಪ್ರಮುಖ ಸ್ಪಿನ್ನರ್ ಸ್ನೇಹ್ ರಾಣಾ(8-77) ಅವರ ಐತಿಹಾಸಿಕ 8 ವಿಕೆಟ್ ಗೊಂಚಲು ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡ ಇಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಫಾಲೋ ಆನ್ ಹೇರಿದೆ.

ಮೂರನೇ ದಿನದಾಟವಾದ ರವಿವಾರ 4 ವಿಕೆಟ್ ನಷ್ಟಕ್ಕೆ 236 ರನ್ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕಾ ಕೇವಲ 17 ರನ್ ಗಳಿಸುವಷ್ಟರಲ್ಲಿ 8.2 ಓವರ್‌ ಗಳಲ್ಲಿ ಐದು ವಿಕೆಟ್‌ ಗಳನ್ನು ಕಳೆದುಕೊಂಡಿತು. 84.3 ಓವರ್‌ ಗಳಲ್ಲಿ 266 ರನ್ ಗೆ ಆಲೌಟಾಯಿತು. ಸ್ನೇಹ್ ರಾಣಾ ಇಂದು ಉರುಳಿದ 6 ವಿಕೆಟ್‌ ಗಳ ಪೈಕಿ ಐದನ್ನು ಕಬಳಿಸಿ ಚೊಚ್ಚಲ ಐದು ವಿಕೆಟ್ ಗೊಂಚಲು ಪಡೆದರು.

ಒಂದೇ ಇನಿಂಗ್ಸ್ನಲ್ಲಿ ಗರಿಷ್ಟ ವಿಕೆಟ್ ಪಡೆದ ಸ್ನೇಹ್ರಾಣಾ ಅವರು ಭಾರತದ ಮಾಜಿ ಕ್ರಿಕೆಟರ್ ನೀತು ಡೇವಿಡ್ ಹಾಗೂ ಆಸ್ಟ್ರೇಲಿಯದ ಅಶ್ ಗಾರ್ಡ್ನರ್ ಸಾಧನೆಯನ್ನು ಸರಿಗಟ್ಟಿದರು.

ಭಾರತದ ಮೊದಲ ಇನಿಂಗ್ಸ್ 603 ರನ್ಗೆ ಉತ್ತರವಾಗಿ ಮೊದಲ ಇನಿಂಗ್ಸ್ನಲ್ಲಿ 337 ಹಿನ್ನಡೆ ಕಂಡಿರುವ ದಕ್ಷಿಣ ಆಫ್ರಿಕಾ ತಂಡವನ್ನು ಭಾರತವು ಮತ್ತೊಮ್ಮೆ ಬ್ಯಾಟಿಂಗ್ ಗೆ ಇಳಿಸಿತು.

ಎರಡನೇ ಇನಿಂಗ್ಸ್ ಆರಂಭಿಸಿರುವ ದಕ್ಷಿಣ ಆಫ್ರಿಕಾ ಮಹಿಳಾ ತಂಡ ದಿನದಾಟದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿದೆ. ನಾಯಕ ಲೌರಾ ವಾಲ್ವಾರ್ಟ್(ಔಟಾಗದೆ 93, 252 ಎಸೆತ, 12 ಬೌಂಡರಿ)ಕ್ರೀಸ್ ಕಾಯ್ದುಕೊಂಡಿದ್ದಾರೆ.

ಸುನೆ ಲುಸ್(109 ರನ್, 203 ಎಸೆತ, 18 ಬೌಂಡರಿ)ಭಾರತದ ನಾಯಕಿ ಹರ್ಮನ್ಪ್ರೀತ್ ಕೌರ್ಗೆ ಕ್ಲೀನ್ ಬೌಲ್ಡಾಗುವ ಮೊದಲು ನಾಯಕಿ ಲೌರಾ ಜೊತೆಗೆ ಎರಡನೇ ವಿಕೆಟ್ ಗೆ 190 ರನ್ ಜೊತೆಯಾಟ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X