Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಜ್ಯ ಬಜೆಟ್: ರಾಯಚೂರಿನಲ್ಲಿ ಮಿಶ್ರ...

ರಾಜ್ಯ ಬಜೆಟ್: ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಬಾವಸಲಿ,ರಾಯಚೂರುಬಾವಸಲಿ,ರಾಯಚೂರು7 March 2026 7:56 AM IST
share
ರಾಜ್ಯ ಬಜೆಟ್: ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
ಪ್ರಮುಖ ಬೇಡಿಕೆಗಳಿಗೆ ಮನ್ನಣೆ ಇಲ್ಲ

ರಾಯಚೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ನೇ ಬಜೆಟ್‌ನಲ್ಲಿ ರಾಯಚೂರು ಜಿಲ್ಲೆಗೆ ನಿರೀಕ್ಷಿತ ಯೋಜನೆಗಳು ಘೋಷಣೆಯಾಗಿಲ್ಲ. ರಾಯಚೂರು ನಗರದ ರಿಂಗ್ ರೋಡ್‌ಗೆ ಅನುದಾನ, ರಾಯಚೂರು ತಾಲೂಕಿನ ಯರಗೇರಾ, ಗಿಲ್ಲೆಸುಗೂರು, ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ, ಮುದಗಲ್, ಮಾನ್ವಿಯ ಕವಿತಾಳ ಗ್ರಾಮ, ಹೋಬಳಿಗಳನ್ನು ತಾಲೂಕುಗಳಾಗಿ ಘೊಷಣೆ ಮಾಡುವ ಭರವಸೆ ಹುಸಿಯಾಗಿದೆ. ಹೊಸ ವಿವಿಗಳಲ್ಲಿ ಒಂದಾದ ರಾಯಚೂರಿನ ಆದಿಕವಿ ಮಹರ್ಷಿ ವಾಲ್ಮೀಕಿ ವಿವಿಗೆ ಅನುದಾನ, ಕೃಷ್ಣ-ತುಂಗಭದ್ರಾ ನದಿಗಳ ಆಧುನೀಕರಣ ಕಾಮಗಾರಿ, ಗ್ರಾಮೀಣ ರಸ್ತೆಗಳ ಸುಧಾರಣೆ, ಕೆಎಸ್‌ಆರ್‌ಪಿ ಘಟಕ ಸ್ಥಾಪನೆ, ಸಿಂಧನೂರು ತಾಲೂಕನ್ನು ಜಿಲ್ಲೆಯಾಗಿ ಘೊಷಣೆ ಸೇರಿ ಅನೇಕ ಬೇಡಿಕೆಗಳಿಗೆ ಮನ್ನಣೆ ನೀಡದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಅದಾಗ್ಯೂ, ನೂತನ ಮಹಾನಗರ ಪಾಲಿಕೆಗೆ 200 ಕೋಟಿ, ಐಐಐಟಿನಲ್ಲಿ ಎಐ ಶ್ರೇಷ್ಠತಾ ಕೇಂದ್ರ ಸ್ಥಾಪನೆ ಹಾಗೂ ಇನ್ನಿತರ ಕೆಲವು ಘೋಷಣೆಗಳು ತಕ್ಕ ಮಟ್ಟಿಗೆ ಸಮಾಧಾನ ತಂದಿದೆ.

ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಘೊಷಣೆಯಾದ ರಾಯಚೂರು ಮಹಾನಗರ ಪಾಲಿಕೆಗೆ ಕಳೆದ ವರ್ಷ ಘೊಷಿಸಿದ್ದ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಗೆ ರೂ.200 ಕೋಟಿ ಅನುದಾನ ನೀಡಿದ್ದು ಮೂಲಸೌಕರ್ಯ ಒದಗಿಸಲು ಅನುಕೂಲವಾಗಿದೆ. ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ ಚಾಲನೆ, ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದ ಬಲವರ್ಧನೆಗೆ ರಾಯಚೂರು ನಗರದ ಹೊರವಲಯದ ಯರಮರಸ್ ಕ್ಯಾಂಪ್‌ನಲ್ಲಿರುವ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯಲ್ಲಿ ಕೃತಕ ಬುದ್ಧಿ ಮತ್ತೆ (ಎಐ) ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ಘೋಷಣೆ ಮಾಡಿ ರೂ. 5 ಕೋಟಿ ಅನುದಾನ ನೀಡಿದೆ.

ಮಸ್ಕಿಗೆ ಕ್ರೀಡಾಂಗಣ, ಪದವಿಪೂರ್ವ ಕಾಲೇಜು: ನೂತನ ತಾಲೂಕು ಮಸ್ಕಿ, ಸಿರವಾರ ತಾಲೂಕಿಗೆ ಬಿಇಒ ಕಚೇರಿ, ತಾಲೂಕು ಆಸ್ಪತ್ರೆ ಸೇರಿ ಅನೇಕ ಪೂರ್ಣ ಪ್ರಮಾಣದ ಕಚೇರಿಗಳಿಲ್ಲ. ಈಗಲೂ ಅಖಂಡ ಮಾನ್ವಿ, ಸಿಂಧನೂರು ತಾಲೂಕುಗಳ ಮೇಲೆ ಅವಲಂಬನೆಯಾಗಿದೆ. ಆದರೆ ಮಸ್ಕಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ರೂ.2 ಕೋಟಿ, ಬಳಗಾನೂರಿಗೆ ಪದವಿ ಕಾಲೇಜು, ಶ್ರಮಿಕ ವಸತಿ ಶಾಲೆ ಘೋಷಣೆ ಮಾಡಿದೆ. ಆದರೆ ಸಿರವಾರ ತಾಲೂಕಿಗೆ ಯಾವುದೇ ಘೋಷಣೆಯಾಗಿಲ್ಲ.

ಹಳೆಯ ಯೋಜನೆಗಳ ಮರುಘೋಷಣೆ: ಕಲ್ಮಲಾ-ಸಿಂಧನೂರು ರಸ್ತೆ, ಮಹಾನಗರ ಪಾಲಿಕೆಯ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ, ಕೆರೆ ತುಂಬುವ ಯೋಜನೆ, ನಗರದ ಓಪೆಕ್‌ನ ಟ್ರಾಮ ಸೆಂಟರ್ ಇವು ಹಳೆಯ ಯೋಜನೆಗಳು ಹಾಗೂ ಪ್ರಸ್ತುತ ಕಾಮಗಾರಿಯೂ ನಡೆಯುತ್ತಿದೆ ಆದರೂ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಕಲ್ಮಲಾ-ಸಿಂಧನೂರು ರಸ್ತೆಯ ಒಟ್ಟು 77 ಕಿ.ಮೀ ಪೈಕಿ 60 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು, ಬಾಕಿ ಉಳಿದಿರುವ 17 ಕಿ.ಮೀ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಲಾಗಿದೆ.

ಆರೋಗ್ಯ, ಶಿಕ್ಷಣ, ನೀರಾವರಿಗೆ ಆದ್ಯತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸಲು ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ‘ವಸತಿಯುತ ಪ್ರಥಮ ದರ್ಜೆ ಕಾಲೇಜು’ ನಿರ್ಮಾಣ, ನಗರದ ಇಎಸ್‌ಐ ಆಸ್ಪತ್ರೆಯನ್ನು ಮೇಲ್ದರ್ಜೆಗೆ, ರಾಯಚೂರಿನ 18, ದೇವದುರ್ಗದ 14 ಕೆರೆಗಳನ್ನು ತುಂಬಿಸಲು ಯೋಜನೆ, ಮದ್ಲಾಪೂರ ಏತ ನೀರಾವರಿ ಮಾನ್ವಿಯ ದದ್ದಲ್ ಬಳಿ ಏತ ನೀರಾವರಿ, ಜಿಲ್ಲೆಯ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ, ಮಸ್ಕಿಯ ಜಾಲವಾಡಗಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ, ಮಾನ್ವಿಯ ಜೀನೂರು-ಉದ್ಭಾಳ ಏತ ನೀರಾವರಿ, ರಾಯಚೂರು ತಾಲೂಕಿನ ಅಡವಿಖಾನಾಪುರ ಗ್ರಾಮದಲ್ಲಿ ತುಂಗಭದ್ರಾ ಏತ ನೀರಾವರಿ ಯೋಜನೆ ಘೋಷಣೆ ಮಾಡಲಾಗಿದೆ.

ಕೇಂದ್ರ ಸರಕಾರ ತೆರಿಗೆ ಪಾಲು ನೀಡಲು ಅನ್ಯಾಯ, 15ನೇ ಹಣಕಾಸು ಯೋಜನೆಯಡಿ ತಾರತಮ್ಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಂಪನ್ಮೂಲಗಳನ್ನು ಕ್ರೂಢೀಕರಿಸಿ ಸಮತೋಲನ, ಸರಿದೂಗಿಸುವ ಬಜೆಟ್ ಮಂಡಿಸಿದ್ದಾರೆ. ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ, ಹಿಂದುಳಿದ ವರ್ಗಗಳ ಮಡಿವಾಲ, ಸವಿತಾ ಸಮುದಾಯಕ್ಕೆ ವೃತ್ತಿ ಕೌಶಲ್ಯಕ್ಕೆ ಪ್ರಾದ್ಯಾನತೆ ನೀಡಿ ಅಹಿಂದ ಸಮುದಾಯಕ್ಕೆ ನ್ಯಾಯ ಒದಗಿಸಿದ್ದಾರೆ.

-ವಸಂತ ಕುಮಾರ, ವಿಧಾನಪರಿಷತ್ ಸದಸ್ಯ ರಾಯಚೂರು

ಬಜೆಟ್‌ನಲ್ಲಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ, ಹಳೆಯ ಯೋಜನೆಗಳನ್ನೇ ಮರು ಘೋಷಣೆ ಮಾಡಿದ್ದಾರೆ. ರಾಯಚೂರಿನ ವರ್ತುಲ ರಸ್ತೆ ಸೇರಿ ಯಾವುದೇ ಯೋಜನೆಗೆ ಅನುದಾನ ನೀಡಿಲ್ಲ, ಸಾಲದ ಪ್ರಮಾಣ ಏರಿಕೆಯಾಗಿದ್ದು ಹಿಂದೆ ಮಾಡಿದ ಎಲ್ಲಾ ಮುಖ್ಯಮಂತ್ರಿಗಳ ಸಾಲವನ್ನು ಒಬ್ಬರೇ ಸಿದ್ದರಾಮಯ್ಯ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ ಜಿಲ್ಲೆಗೂ ರಾಜ್ಯಕ್ಕೂ ಶೂನ್ಯ ಕೊಡುಗೆ.

-ಡಾ.ಶಿವರಾಜ ಪಾಟೀಲ, ರಾಯಚೂರು ನಗರ ಶಾಸಕ

ರಾಯಚೂರು ಮಹಾನಗರ ಪಾಲಿಕೆಗೆ 200 ಕೋಟಿ ರೂ. ಅನುದಾನ, ಐಐಐಟಿ ರಾಯಚೂರಿನಲ್ಲಿ ಎಐ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ ಒತ್ತು ನೀಡಲಾಗಿದೆ. ರಾಜ್ಯ ಬಜೆಟ್ ‘ಪ್ರಾದೇಶಿಕ ಅಭಿವೃದ್ಧಿಯ ದೂರದೃಷ್ಟಿಯ ನೀಲನಕ್ಷೆ

-ಎನ್.ಎಸ್. ಭೋಸರಾಜು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ

share
ಬಾವಸಲಿ,ರಾಯಚೂರು
ಬಾವಸಲಿ,ರಾಯಚೂರು
Next Story
X