Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಂಭೀರ ಸ್ವರೂಪದ ಪ್ರಕರಣದಲ್ಲಿ ಎಫ್‍ಐಆರ್...

ಗಂಭೀರ ಸ್ವರೂಪದ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸದ ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ4 Aug 2023 7:17 PM IST
share
ಗಂಭೀರ ಸ್ವರೂಪದ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸದ ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಆ.4: ಗಂಭೀರ ಸ್ವರೂಪದ ಅಪರಾಧದ ಪ್ರಕರಣಗಳ ಮಾಹಿತಿ ನೀಡಿದಾಗ ತಕ್ಷಣ ಎಫ್‍ಐಆರ್ ದಾಖಲು ಮಾಡಬೇಕು ಎಂದು ನಿರ್ದೇಶಿಸಿರುವ ಹೈಕೋರ್ಟ್, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಲಲಿತಾಕುಮಾರಿ ಪ್ರಕರಣದ ಸಾರಾಂಶವನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಒದಗಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ದೂರು ಸಲ್ಲಿಸಿದ್ದರೂ ಎಫ್‍ಐಆರ್ ದಾಖಲಿಸದ ಬಬಲೇಶ್ವರ ಪೊಲೀಸ್ ಠಾಣಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲೆಯ ಕಿಲಾರಹಟ್ಟಿಯ ವಿಠ್ಠಲ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ.

ಅಲ್ಲದೇ, ಲಲಿತಾಕುಮಾರಿ ವಿರುದ್ಧದ ಉತ್ತರ ಪ್ರದೇಶ ಪ್ರಕರಣದಲ್ಲಿ ಸುಪ್ರೀಂಕೊರ್ಟ್ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಮಾರ್ಗಸೂಚಿಗಳುಳ್ಳ ಸುತ್ತೋಲೆ ಹೊರಡಿಸಲು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ. ಅಲ್ಲದೇ, ತೀರ್ಪಿನ 120ನೆ ಪ್ಯಾರಾವನ್ನು ಕನ್ನಡ, ಇಂಗ್ಲಿಷ ಭಾಷೆಯಲ್ಲಿ ಸುತ್ತೋಲೆ ಹೊರಡಿಸಬೇಕು. ಎಫ್‍ಐಆರ್ ದಾಖಲಿಸಲು ವಿಳಂಬ ಮಾಡದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ತಾಕೀತು ಮಾಡಿದೆ.

ಗಂಭೀರ ಅಪರಾಧದ ದೂರು ಬಂದಾಗ ಪ್ರಾಥಮಿಕ ತನಿಖೆ ನಡೆಸಬೇಕು ಎಂಬುದು ಅಗತ್ಯವಿಲ್ಲ. ಗಂಭೀರವಲ್ಲದ ಪ್ರಕರಣಗಳಲ್ಲಿ ಮಾತ್ರ ಪ್ರಾಥಮಿಕ ತನಿಖೆ ನಡೆಸಬಹುದು. 7 ದಿನಗಳೊಳಗೆ ಪ್ರಾಥಮಿಕ ತನಿಖೆ ಮುಕ್ತಾಯಗೊಳಿಸಬೇಕು. ಗಂಭೀರ ಅಪರಾಧ ಕಂಡುಬಂದಾಗ ಎಫ್‍ಐಆರ್ ದಾಖಲಿಸಬೇಕು. ಈ ಸಂಬಂಧ ಪೊಲೀಸ್ ಠಾಣಾ ಡೈರಿಯಲ್ಲಿ ತನಿಖೆಯ ಸಂಪೂರ್ಣ ಮಾಹಿತಿ ಉಲ್ಲೇಖಿಸಬೇಕು ಎಂದು ಪೀಠ ತಿಳಿಸಿದೆ.

ಅಲ್ಲದೇ, ಪ್ರಸ್ತುತದ ಪ್ರಕರಣದಲ್ಲಿ ಸಂಜ್ಞೇಯ ಅಪರಾಧವನ್ನು ಬಹಿರಂಗಪಡಿಸಿದಾಗ ಎಫ್‍ಐಆರ್ ದಾಖಲಿಸಬಹುದಾಗಿತ್ತು. ಆದರೆ, ಪ್ರಕರಣ ಹೈಕೋರ್ಟ್ ಮೆಟ್ಟಿಲೇರುವವರೆಗೂ ದಾಖಲಿಸದಿರುವುದು ಕರ್ತವ್ಯಲೋಪಕ್ಕೆ ಕಾರಣವಾಗಲಿದೆ. ಇದೇ ರೀತಿಯ ಹಲವು ಪ್ರಕರಣಗಳು ಹೈಕೋರ್ಟ್ ಮೆಟ್ಟಿಲೇರುತ್ತಿದ್ದು, ತಕ್ಷಣ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶನ ನೀಡಿದೆ. ಅಲ್ಲದೇ, ಈ ಸಂಬಂಧದ ಅನುಪಾಲನಾ ವರದಿಯನ್ನು ಆ.29ರಂದು ಸಲ್ಲಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಪ್ರಕರಣವೇನು:?

ಅರ್ಜಿದಾರರಾದ ವಿಠ್ಠಲ ಅವರ ಸೊಸೆಯ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ನಡೆಸಿ ಆಕೆಯ ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ಆಕೆಯನ್ನು ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ 2022ರ ನವೆಂಬರ್ 18ರಂದು ವಿಠ್ಠಲ ಅವರು ಬಬಲೇಶ್ವರ ಠಾಣೆಗೆ ದೂರು ನೀಡಿದ್ದರು. ಆದರೆ, ದೂರಿನ ಸಂಬಂಧ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ. ಐಪಿಸಿ ಅಡಿಯಲ್ಲಿ ಇದು ಸಂಜ್ಞೇಯ ಅಪರಾಧವಾಗಿದ್ದರೂ, ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿರುವುದಿಲ್ಲ. ಇದನ್ನು ಪ್ರಶ್ನಿಸಿ ವಿಠ್ಠಲ ಹೈಕೋರ್ಟ್ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X