Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂಗಾರು ಅಧಿವೇಶನ | ಭೂ ಸುಧಾರಣೆ ಕಾನೂನು...

ಮುಂಗಾರು ಅಧಿವೇಶನ | ಭೂ ಸುಧಾರಣೆ ಕಾನೂನು ತಿದ್ದುಪಡಿ ವಿಧೇಯಕ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ13 Aug 2025 7:55 PM IST
share
ಮುಂಗಾರು ಅಧಿವೇಶನ | ಭೂ ಸುಧಾರಣೆ ಕಾನೂನು ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು, ಆ.13: ಗ್ರಾಮೀಣ ಭಾಗದಲ್ಲಿ ಎರಡು ಎಕರೆ ವರೆಗೆ ಸಣ್ಣ ಉದ್ದಿಮೆ ಸ್ಥಾಪಿಸಲು ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಲು ಅವಕಾಶ ಕಲ್ಪಿಸುವ 2025ರ ಕರ್ನಾಟಕ ಭೂಸುಧಾರಣೆಗಳು ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.

ಬುಧವಾರ ಶಾಸನ ರಚನೆ ಕಲಾಪದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧೇಯಕ ಕುರಿತು ಮಾತನಾಡಿ, ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ,ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್ 109ರ ಅಡಿಯಲ್ಲಿ ಈ ಹಿಂದೆಯೇ ಅನುಮತಿ ನೀಡಲಾಗಿದೆ. ಆದರೆ, ಆ ಅನುಮತಿಗಾಗಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿಯ ವರೆಗೆ ಬರುವಂತಿದೆ. ಹೀಗಾಗಿ, ಈಗಿನ ನೂತನ ತಿದ್ದುಪಡಿಯಲ್ಲಿ ಆ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡಲಾಗಿದೆ ಎಂದರು.

ಸಣ್ಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳೇ 4 ಹೆಕ್ಟೇರ್ ವರೆಗಿನ ಭೂಮಿ ಖರೀದಿಗೆ ಅನುಮತಿ ನೀಡಬಹುದು. ಹೀಗೆ ನೀಡುವ ಅನುಮತಿ ಆಟೊಮ್ಯಾಟಿಕ್ ಭೂ-ಪರಿವರ್ತನೆಯಾಗಿರುತ್ತದೆ. ಕರ್ನಾಟಕದಲ್ಲಿ ಎಲ್ಲೇ ಆಗಲಿ 2 ಎಕರೆ ವರೆಗೆ ಕೈಗಾರಿಕೆಗೆ ಮಾಡಲು ಪರಿವರ್ತನೆಗೆ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಅದರಲ್ಲೂ, ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತಿದ್ದುಪಡಿಯನ್ನು ತರಲಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರ ಪ್ರಸ್ತುತ ಉದಯೋನ್ಮುಖ ವಲಯ. ದೇಶದ ಆದ್ಯತೆ ಕಲ್ಲಿದ್ದಲಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದ ಕಡೆ ಬದಲಾಗಬೇಕು ಎಂಬುದು ಸರಕಾರದ ಹಾಗೂ ಜನ ಸಾಮಾನ್ಯರ ಆದ್ಯತೆ ಎಂದೂ ಅವರು ಹೇಳಿದರು.

ಸೋಲಾರ್, ಪವನ ವಿದ್ಯುತ್ ಘಟಕ ಸ್ಥಾಪಿಸಲು ಅನುಮತಿ ಕೊಡಿಸುವ ನೆಪದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಸಣ್ಣ ಉದ್ದಿಮೆದಾರರು ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದರೆ, ಸೋಲಾರ್ ಹಾಗೂ ಪವನ ಶಕ್ತಿ ವಿಂಡ್ ಮಿಲ್ ಸ್ಥಾಪಿಸುವ ಉದ್ದಿಮೆದಾರರ ಬಂಡವಾಳ ಹೂಡಿಕೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಮಧ್ಯವರ್ತಿಗಳ ಉಪಟಳ ತಪ್ಪಿಸಿ ಬಂಡವಾಳ ಹೆಚ್ಚಿಸುವ ಸಲುವಾಗಿ ಆಟೊ ಕನ್‍ವರ್ಷನ್‍ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರ ಒತ್ತಾಯವೂ ಇತ್ತು. ಹೀಗಾಗಿ ಬಹಳ ದಿನಗಳ ಚರ್ಚೆಯ ನಂತರ ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಆನಂತರ, ವಿಧೇಯಕ ಕುರಿತು ಹಲವು ಶಾಸಕರು ಉಪಯುಕ್ತ ಸಲಹೆಗಳನ್ನು ನೀಡಿದರು. ಬಳಿಕ ಸ್ಪೀಕರ್ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X