Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ಪ್ರಕರಣ | ಎಸ್‍ಐಟಿ ತನಿಖೆಗೆ...

ಧರ್ಮಸ್ಥಳ ಪ್ರಕರಣ | ಎಸ್‍ಐಟಿ ತನಿಖೆಗೆ ತೊಂದರೆ ಮಾಡುವ ಉದ್ದೇಶ ಬಿಜೆಪಿಗಿದೆ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ2 Sept 2025 8:38 PM IST
share
ಧರ್ಮಸ್ಥಳ ಪ್ರಕರಣ | ಎಸ್‍ಐಟಿ ತನಿಖೆಗೆ ತೊಂದರೆ ಮಾಡುವ ಉದ್ದೇಶ ಬಿಜೆಪಿಗಿದೆ : ಜಿ.ಪರಮೇಶ್ವರ್
"ಎನ್‍ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ"

ಬೆಂಗಳೂರು, ಸೆ.2: ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರು ಎಸ್‍ಐಟಿ ತನಿಖೆಗೆ ತೊಂದರೆ ಮಾಡುವ ಉದ್ದೇಶ ಹೊಂದಿರುವಂತೆ ಕಂಡುಬರುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿ ಈ ಪ್ರಕರಣದ ತನಿಖೆಯಲ್ಲಿ ಯಾವುದೇ ಲೋಪಗಳಿಲ್ಲ. ಹೀಗಾಗಿ ಎನ್‍ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಹಲವು ಸಂದರ್ಭಗಳಲ್ಲಿ ಸ್ಪಷ್ಟಪಡಿಸಿದ್ದೇನೆ. ಆದರೂ ಬಿಜೆಪಿಯವರು ಅನೇಕ ರೀತಿಯಲ್ಲಿ ಒತ್ತಾಯ ಮಾಡುವ ಮೂಲಕ ಸ್ವರೂಪ ಬದಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಜಾರಿ ನಿರ್ದೇಶನಾಲಯವು ಫೇಮಾ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ತನಿಖೆ ಆರಂಭಿಸಿ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರಕ್ಕೆ ಎನ್‍ಜಿಓ ಹಣ ಬಳಕೆಯಾಗಿರುವ ಬಗ್ಗೆ ವಿಚಾರಣೆ ನಡೆಸುವುದಾದರೆ ನಮ್ಮ ಅಭ್ಯಂತರವಿಲ್ಲ. ಈ.ಡಿ.ಯವರು ಹಣಕಾಸಿನ ವಿಚಾರಗಳ ಕುರಿತು ತನಿಖೆ ಮಾಡುತ್ತಾರೆ. ಎಸ್‍ಐಟಿ ತನ್ನ ಪಾಲಿನ ಜವಾಬ್ದಾರಿಯನ್ನು ನಿಭಾಯಿಸುತ್ತದೆ. ದೂರುದಾರ ಚಿನ್ನಯ್ಯ ಅವರು ನಿಯಮ 164ರ ಅಡಿ ನ್ಯಾಯಾಧೀಶರ ಮುಂದೆ ನೀಡಿರುವ ಹೇಳಿಕೆ ಆಧಾರದಲ್ಲಿ ತನಿಖೆ ನಡೆಸುತ್ತಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

ಧರ್ಮಸ್ಥಳದ ವಿರುದ್ಧ ಬಿಜೆಪಿ ಷಡ್ಯಂತ್ರ ಮಾಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿರುವುದು ನನಗೆ ಗೊತ್ತಿಲ್ಲ. ಅವರಿಗೆ ಬೇರೆ ರೀತಿಯ ಮಾಹಿತಿಗಳು ಇರಬಹುದು. ನಾನು ಜವಾಬ್ದಾರಿಯುತ ಸಚಿವನಾಗಿ ತನಿಖೆ ನಡೆಯುವ ಸಂದರ್ಭದಲ್ಲಿ ಬೇರೆ ರೀತಿಯ ಹೇಳಿಕೆ ನೀಡಲು ಬಯಸುವುದಿಲ್ಲ ಎಂದು ಜಿ.ಪರಮೇಶ್ವರ್ ತಿಳಿಸಿದರು.

ಸೌಜನ್ಯ ಅವರ ಪ್ರಕರಣದಲ್ಲಿ ಬಿಜೆಪಿಯವರ ನಿಲುವುಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಸೌಜನ್ಯ ಅಪಹರಣವಾಗಿರುವುದನ್ನು ಕಣ್ಣಾರೆ ನೋಡಿದ್ದಾಗಿ, ಮಹಿಳೆ ಹೇಳಿಕೆ ನೀಡಿರುವುದನ್ನೂ ಎಸ್‍ಐಟಿ ಗಮನಿಸುತ್ತದೆ ಎಂದು ಜಿ.ಪರಮೇಶ್ವರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X