Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು,...

ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು, ಮುಖಂಡರ ಸಭೆ; ಸಮೀಕ್ಷೆ ಮುಂದೂಡುವಂತೆ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 Sept 2025 7:45 PM IST
share
ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು, ಮುಖಂಡರ ಸಭೆ; ಸಮೀಕ್ಷೆ ಮುಂದೂಡುವಂತೆ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ

ಬೆಂಗಳೂರು, ಸೆ. 20: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಸೆ.22ರಿಂದ ನಡೆಸಲು ಉದ್ದೇಶಿಸಿರುವ ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯನ್ನು ಮುಂದೂಡಬೇಕು ಹಾಗೂ ಸಮೀಕ್ಷಾ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದ್ದಾರೆ.

ಶನಿವಾರ ವಿಜಯನಗರದ ಆದಿಚುಂಚನಗಿರಿ ಮಠದ ಸಮುದಾಯ ಭವನದಲ್ಲಿ ಸಮುದಾಯದ ವಿವಿಧ ಮಠಾಧೀಶರು, ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ನಡೆಸಿದ ಸಮಾಲೋಚನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಸಮೀಕ್ಷೆಯಲ್ಲಿ ಒಕ್ಕಲಿಗ ಸಮುದಾಯದವರು ಜಾತಿ ಕಾಲಂನಲ್ಲಿ ಏನೇ ಇದ್ದರೂ ‘ಒಕ್ಕಲಿಗ’ ಎಂದೇ ಬರೆಸಬೇಕು. ಅಗತ್ಯವಿದ್ದರೆ ಮಾತ್ರ ಉಪಪಂಗಡಗಳನ್ನು ಬರೆಸಬೇಕು ಎಂದು ಸಲಹೆ ಮಾಡಿದರು.

ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಅವಕಾಶ ಕಲ್ಪಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಸೆ.22ರಿಂದ ನವರಾತ್ರಿ ಆಚರಣೆ ನಡೆಯುತ್ತದೆ. ಅಲ್ಲದೆ, ಈ ವೇಳೆ ಪಿತೃಪಕ್ಷ ಸೇರಿದಂತೆ ಸಾಲು-ಸಾಲು ಹಬ್ಬಗಳಿವೆ. ರೈತಾಪಿ ಸಮುದಾಯ ಕೃಷಿ ಚಟುವಟಿಕೆಯಲ್ಲಿ ಮಗ್ನವಾಗಿರುತ್ತದೆ. ಜೊತೆಗೆ ಶಾಲೆಗಳಿಗೆ ದಸರಾ ರಜೆ ಇರಲಿದೆ. ಹೀಗಾಗಿ ಈ ಕಾಲಘಟ್ಟ ವಾಸ್ತವಿಕವಾಗಿ ಸಮೀಕ್ಷೆ ಸಾಧ್ಯವಿಲ್ಲ. ಸರಕಾರ 400ರಿಂದ 500 ಕೋಟಿ ರೂ.ವೆಚ್ಚ ಮಾಡಿ ಸಮೀಕ್ಷೆ ನಡೆಸುತ್ತಿದ್ದು, ಇದು ಅರ್ಥಪೂರ್ಣವಾಗಬೇಕು ಎಂಬುದೇ ನಮ್ಮ ಅಪೇಕ್ಷೆ. ಸಮೀಕ್ಷೆಗೆ ಇದು ಸೂಕ್ತ ಕಾಲವಲ್ಲ, ಹೀಗಾಗಿ ಸಮೀಕ್ಷೆಯನ್ನು ಮುಂದೂಡಬೇಕು ಎಂದರು.

ತೆಲಂಗಾಣ ರಾಜ್ಯದಲ್ಲಿ 3.50ಕೋಟಿ ಜನಸಂಖ್ಯೆ ಇದೆ. ಅಲ್ಲಿ 3 ತಿಂಗಳ ಕಾಲಾವಕಾಶ ಕೊಟ್ಟು ಆಧುನಿಕ ತಂತ್ರಜ್ಞಾನ ಬಳಸಿ ಸಮೀಕ್ಷೆ ಮಾಡಿದ್ದಾರೆ. ರಾಜ್ಯದಲ್ಲಿ 7 ಕೋಟಿಗೂ ಹೆಚ್ಚು ಜನಸಂಖ್ಯೆಯಿದ್ದು, ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು. ಅದಕ್ಕಾಗಿ ಹೆಚ್ಚು ಸಮಯವನ್ನು ನೀಡಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದರು.

ಜಾತಿಗಣತಿ ಬಗ್ಗೆ ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಎಲ್ಲ ಜನಪ್ರತಿನಿಧಿಗಳಿಗೆ ಈ ವಿಚಾರವನ್ನು ಮನದಟ್ಟು ಮಾಡಲಾಗಿದೆ. ಒಕ್ಕಲಿಗರ ಜಾತಿಯ ಜೊತೆಗೆ ವಿವಿಧ ಧರ್ಮ, ಜಾತಿಗಳನ್ನು ಸೇರಿಸಿರುವುದು ವೈರುಧ್ಯಕ್ಕೆ ಕಾರಣವಾಗಿದೆ.ಇದೀಗ ಆಯೋಗವು ಪ್ರಕಟಿಸಿರುವ ಜಾತಿಗಳ ಪಟ್ಟಿ ಹಾಗೂ ಸಮೀಕ್ಷೆಯಲ್ಲಿ ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.

ರಾಜ್ಯ ಸರಕಾರಕ್ಕೆ ಜನಗಣತಿ ಮಾಡುವ ಅಧಿಕಾರವಿಲ್ಲ. ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಮಾತ್ರ ಸಮೀಕ್ಷೆ ಮಾಡಬೇಕು. ಶೇ.90ರಷ್ಟು ಒಕ್ಕಲಿಗ ಸಮುದಾಯದವರು ಉಪಜಾತಿಯನ್ನು ಬರೆಸಲು ಸಿದ್ಧವಿಲ್ಲ. ಕಾರಣಾಂತರದಿಂದ ಸಣ್ಣ-ಪುಟ್ಟ ಆಚರಣೆಯಿಂದ ಬಂದಿರುವ ಧಾರ್ಮಿಕ, ಸಾಂಸ್ಕೃತಿಕ ಆಚರಣೆಗಳು ಮನೆಗೆ ಸೀಮಿತವಾಗಿರುತ್ತವೆ. ಹೀಗಾಗಿ ಸರಕಾರ ಸಮೀಕ್ಷೆಯನ್ನು ಮುಂದೂಡಬೇಕು ಎಂದರು.

ಕ್ರಿಶ್ಚಿಯನ್ ಒಕ್ಕಲಿಗ, ಜೈನ ಒಕ್ಕಲಿಗ ಎಂದೆಲ್ಲಾ ಉಲ್ಲೇಖಿಸಲಾಗಿದೆ. ಮುಂದೆ ಮುಸ್ಲಿಮ್ ಒಕ್ಕಲಿಗ, ಹಿಂದೂ ಕ್ರಿಶ್ಚಿಯನ್ ಆಗಬಹುದಲ್ಲವೇ?. ಧರ್ಮ ಒಡೆದಿರುವ ಬಗ್ಗೆ ಇತಿಹಾಸ ಅವಲೋಕಿಸಿದರೆ ಗಮನಕ್ಕೆ ಬರುತ್ತದೆ. ‘ನಾಸ್ತಿಕ’ ಬಳಕೆಗೆ ಅವಕಾಶ ಕಲ್ಪಿಸಿರುವುದು ಗಮನಿಸಿದರೆ ಪ್ರಜಾಪ್ರಭುತ್ವದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸ್ವಾಮೀಜಿ ಆಕ್ಷೇಪಿಸಿದರು.

ಪಾರದರ್ಶಕವಾಗಿರಲಿ: ಸಮೀಕ್ಷೆ ಸಂದರ್ಭದಲ್ಲಿ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸ ಪಡೆದ ಮೇಲೆ ಗಣತಿದಾರರು ಪೂರ್ಣ ಮಾಹಿತಿ ಪಡೆದು ಅಪ್‍ಲೋಡ್ ಮಾಡಿದ ಬಳಿಕ ಮನೆಯ ಯಜಮಾನನಿಗೆ ಅದರ ಪೂರ್ಣ ಮಾಹಿತಿ ಸಿಗಬೇಕು. ಸಮೀಕ್ಷೆಯ ಮಾಹಿತಿಯೂ ಸಾರ್ವಜನಿಕರಿಗೆ ಮುಕ್ತವಾಗಿ ಸಿಗಬೇಕು, ಜತೆಗೆ ಪಾರದರ್ಶಕವಾಗಿರಬೇಕು ಎಂದು ಅವರು ತಿಳಿಸಿದರು.

ಒಗ್ಗಟ್ಟು ಪ್ರದರ್ಶನ: ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿಚಾರ ಸಂಬಂಧ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಸಮೀಕ್ಷೆಯ ಸಮಾಲೋಚನಾ ಸಭೆಯಲ್ಲಿ ಪಕ್ಷಬೇಧ ಮರೆತು ಸಮುದಾಯದ ರಾಜಕೀಯ ಪಕ್ಷಗಳ ಮುಖಂಡರು ಒಗ್ಗಟ್ಟು ಪ್ರದರ್ಶಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಟಿ.ಕೋನಪ್ಪರೆಡ್ಡಿ ಸೇರಿದಂತೆ ಸಮುದಾಯದ ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X