Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ವಿವಿಧೆಡೆಗಳಲ್ಲಿ ಬೀದಿ ನಾಯಿಗಳ...

ರಾಜ್ಯದ ವಿವಿಧೆಡೆಗಳಲ್ಲಿ ಬೀದಿ ನಾಯಿಗಳ ಹಾವಳಿ: ಪರಿಷತ್‍ನಲ್ಲಿ ಗಂಭೀರ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ12 Aug 2025 7:48 PM IST
share
ರಾಜ್ಯದ ವಿವಿಧೆಡೆಗಳಲ್ಲಿ ಬೀದಿ ನಾಯಿಗಳ ಹಾವಳಿ: ಪರಿಷತ್‍ನಲ್ಲಿ ಗಂಭೀರ ಚರ್ಚೆ
1800 ನಾಯಿಗಳಿಗೆ ವಿಷವಿಟ್ಟು ತೋಟದಲ್ಲಿ ಹೂಳಿಸಿದ್ದೆ : ಎಸ್.ಎಲ್.ಭೋಜೇಗೌಡ

ಬೆಂಗಳೂರು, ಆ.12: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲು ಸರಕಾರ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಬೇಕೆಂಬ ವಿಷಯದ ಕುರಿತಾಗಿ ಮಂಗಳವಾರ ವಿಧಾನ ಪರಿಷತ್‍ನಲ್ಲಿ ಗಂಭೀರ ಚರ್ಚೆ ನಡೆಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್.ಭೋಜೇಗೌಡ ವಿಷಯ ಪ್ರಸ್ತಾಪಿಸಿ, ಚಿಕ್ಕಮಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ. ಸಚಿವರು, ಶಾಸಕರು, ನ್ಯಾಯಾಧೀಶರ ಮಕ್ಕಳಿಗೆ ಬೀದಿನಾಯಿಗಳಿಂದ ಸಮಸ್ಯೆಯಿಲ್ಲ. ಬೀದಿಯಲ್ಲಿ ಓಡಾಡುವ ಮಕ್ಕಳಿಗೆ ಮಾತ್ರ ತೊಂದರೆಯಾಗುತ್ತಿವೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕುಂದು ಮನವಿ ಮಾಡಿದರು.

ಬೆಂಗಳೂರಿನ ಕಬ್ಬನ್‍ಪಾರ್ಕ್, ಲಾಲ್‍ಬಾಗ್, ಹೈಕೋರ್ಟ್ ಸೇರಿದಂತೆ ಮತ್ತಿತರ ಕಡೆ ನಾಯಿಗಳ ಹಾವಳಿ ವಿಪರೀತವಾಗಿದೆ. ಬಡವರು, ಆರ್ಥಿಕವಾಗಿ ಹಿಂದುಳಿದವರು ತೀರಾ ಸಂಕಷ್ಟ ಸ್ಥಿತಿಯಲ್ಲಿರುವವರು ಸರಕಾರಿ ಶಾಲೆಗಳಿಗೆ ಹೋಗುವ ಹಾಗೂ ಖಾಸಗಿ ವಾಹನಗಳಲ್ಲಿ ಹೋಗಲು ಸಾಧ್ಯವಿಲ್ಲದವರು ಬೀದಿಯಲ್ಲಿ ನಡೆದುಕೊಂಡು ಹೋಗುವಾಗ ಏಕಾಏಕಿ ಬಂದು ನಾಯಿಗಳು ಕಚ್ಚುತ್ತವೆ ಎಂದು ಭೋಜೇಗೌಡ ಸದನದ ಗಮನ ಸೆಳೆದರು.

ಒಂದು ಕಡೆ ಸರಕಾರ ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ ಒದಗಿಸಿದೆ. ಇದನ್ನು ತಿಂದ ನಾಯಿಗಳು, ಹಿರಿಯರು, ವಯಸ್ಕರು, ವೃದ್ಧರು, ಶಾಲಾ ಮಕ್ಕಳು ವಾಯುವಿಹಾರ ನಡೆಸುವವರ ಮೇಲೆ ದಾಳಿ ಮಾಡುತ್ತಿವೆ. ಅನೇಕ ಕಡೆ ಸಾವನ್ನಪ್ಪಿರುವ ಪ್ರಕರಣಗಳು ಜರುಗಿವೆ ಎಂದು ಭೋಜೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಪ್ರಾಣಿ ದಯಾಸಂಘದವರು ನಾಯಿಗಳ ಸ್ಥಳಾಂತರಕ್ಕೆ ಅಡ್ಡಿಪಡಿಸಿದರೆ ಅವರ ಮನೆಗೆ ನಾಯಿಗಳನ್ನು ಬಿಟ್ಟು ಬನ್ನಿ. ಇವರು ಪ್ರಾಣಿ ದಯಾಸಂಘದವರಲ್ಲ. ಅದರ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವ ಸಂಘದವರು ಎಂದು ಭೋಜೇಗೌಡ ಕಿಡಿಕಾರಿದರು.

ಈ ಬಗ್ಗೆ ಸರಕಾರವು ಕಾನೂನು ಸಲಹೆ ಪಡೆದು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸುವಂತೆ ಸಲಹೆ ನೀಡಿದರು. ಈ ಬಗ್ಗೆ ಉತ್ತರಿಸಿದ ಪೌರಾಡಳಿತ ಸಚಿವ ರಹೀಂಖಾನ್, ಬೀದಿ ನಾಯಿ ಹಾವಳಿ ವಿಚಾರ ಸಂಬಂಧಿಸಿದಂತೆ ಶೀಘ್ರದಲ್ಲಿ ಸಭೆ ಕರೆಯುತ್ತೇನೆ. ಸಮಸ್ಯೆ ನಿವಾರಣೆಗೆ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುತ್ತೇನೆ ಎಂದರು.

1800 ನಾಯಿಗಳಿಗೆ ವಿಷವಿಟ್ಟು ತೋಟದಲ್ಲಿ ಹೂಳಿಸಿದ್ದೆ: ಬೀದಿ ನಾಯಿಗಳ ದಾಳಿಯಿಂದ ರೇಬಿಸ್ ಖಾಯಿಲೆ ಬರುತ್ತಿದ್ದು, ಇದನ್ನು ತಪ್ಪಿಸಲು ವ್ಯಾಕ್ಸಿನ್ ಇದೆ. ನಾಯಿ ಕಚ್ಚುವುದನ್ನು ತಪ್ಪಿಸುವುದು ಹೇಗೆ? ಎಂಬುದರ ವಸ್ತು ಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್‍ಗೆ ಕೇಳುವುದರಲ್ಲಿ ತಪ್ಪೇನಿಲ್ಲ. ಈ ಪ್ರಾಣಿ ದಯಾ ಸಂಘದವರದ್ದು ಕಾಟವಾಗಿದೆ. ಅವರ ಮನೆಗಳಿಗೆ ನಾಯಿಗಳನ್ನು ಬಿಡುವಂತೆ ಕಿಚಾಯಿಸಿದ ಭೋಜೇಗೌಡ, ನಾನು ಈ ಹಿಂದೆ ಸಿಎಂಸಿ ಅಧ್ಯಕ್ಷನಾಗಿದ್ದಾಗ 1800 ನಾಯಿಗಳಿಗೆ ವಿಷವಿಟ್ಟು ಸಾಯಿಸಿ ತೆಂಗಿನ ಮರಗಳಿಗೆ ಗೊಬ್ಬರ ಆಗಲೆಂದು ತೋಟದಲ್ಲಿ ಹೂಳಿಸಿದ್ದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X