Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಯೋಮಿತಿ ಮೀರಿದ್ದರೂ ವಿಧವೆಯೊಬ್ಬರಿಗೆ...

ವಯೋಮಿತಿ ಮೀರಿದ್ದರೂ ವಿಧವೆಯೊಬ್ಬರಿಗೆ ಅನುಕಂಪದ ನೇಮಕಾತಿಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ22 Aug 2025 2:02 PM IST
share
ವಯೋಮಿತಿ ಮೀರಿದ್ದರೂ ವಿಧವೆಯೊಬ್ಬರಿಗೆ ಅನುಕಂಪದ ನೇಮಕಾತಿಗೆ ಹೈಕೋರ್ಟ್ ಆದೇಶ
ಮಾನವೀಯ ನೀತಿ ರೂಪಿಸಲು ವಾಯುವ್ಯ ಸಾರಿಗೆ ನಿಗಮಕ್ಕೆ ಸೂಚನೆ

ಬೆಂಗಳೂರು: ಸೇವಾವಧಿಯಲ್ಲಿರುವ ನೌಕರರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಾನವೀಯ ನೀತಿಯೊಂದನ್ನು ರೂಪಿಸುವಂತೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (NWKRTC) ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ಸೂಚಿಸಿದೆ.

ಶಿರಹಟ್ಟಿ ಡಿಪೋನಲ್ಲಿ ನಿಯಂತ್ರಕರಾಗಿ ಕೆಲಸ ಮಾಡುತ್ತಿದ್ದ ಪತಿ ಮರಣ ಹೊಂದಿದ ಬಳಿಕ ಅನುಕಂಪದ ಉದ್ಯೋಗಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಯೋಮಿತಿ ಮೀರಿದ್ದ ಕಾರಣಕ್ಕೆ ತಿರಸ್ಕರಿಸಿದ್ದ ಕೆಎಸ್‌ಆರ್‌ಟಿಸಿ ಗದಗ ವಿಭಾಗೀಯ ನಿಯಂತ್ರಕರ ಕ್ರಮ ಪ್ರಶ್ನಿಸಿ ಲಕ್ಷ್ಮವ್ವ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ, ಮೃತ ನೌಕರನ ಪತ್ನಿಯನ್ನು (ಅರ್ಜಿದಾರ ಮಹಿಳೆ) ನಿಗಮದ ಡಿ ಗ್ರೂಪ್ ಉದ್ಯೋಗಿಗೆ ಅನ್ವಯವಾಗುವ ಸಾಮಾನ್ಯ ನಿಯಮಗಳ ಅನುಸಾರ ಗರಿಷ್ಠ ವಯೋಮಿತಿಯನ್ನು ಉಲ್ಲೇಖಿಸದೆಯೇ ಶಿರಹಟ್ಟಿ ಡಿಪೋನಲ್ಲಿ ಡಿ ದರ್ಜೆಯ ಹುದ್ದೆಗೆ ನೇಮಕ ಮಾಡುವಂತೆ ಗದಗ ವಿಭಾಗದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರಿಗೆ ನಿರ್ದೇಶಿಸಿದೆ.

ಇದೇ ವೇಳೆ, ಇಂಥ ಪ್ರಕರಣಗಳನ್ನು ಪರಿಶೀಲಿಸಿ ಸೇವೆಯಲ್ಲಿರುವ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರ ಹಿತದೃಷ್ಟಿಯಿಂದ ಸೂಕ್ತ ಮಾನವೀಯ ನೀತಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಲಕುವಂತೆ ವಾಯುವ್ಯ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನ್ಯಾಯಪೀಠ ಸೂಚನೆ ನೀಡಿದೆ.

ಮಾನವೀಯ ನೆಲೆಯಲ್ಲಿ ಪರಿಗಣಿಸಬೇಕು:

ಗರಿಷ್ಠ ವಯೋಮಿತಿ ಮೀರಿದ ಕಾರಣಕ್ಕೆ ವಿಧವೆಯೊಬ್ಬರಿಗೆ ಅನುಕಂಪದ ನೇಮಕಾತಿ ನಿರಾಕರಿಸಿದ ದುಃಖಕರ ಪ್ರಕರಣ ಇದಾಗಿದೆ. ಮೃತ ಉದ್ಯೋಗಿಯ ಅವಲಂಬಿತರ ಜೀವನ ಯಾವುದೇ ಸಮಸ್ಯೆ ಇಲ್ಲದೆ ಮುಂದುವರಿಯುವುದನ್ನು ಖಾತ್ರಿಪಡಿಸುವುದೇ ಅನುಕಂಪದ ಆಧಾರದ ನೇಮಕಾತಿಯ ಉದ್ದೇಶವಾಗಿದೆ. ಇದರಿಂದ, ಉದ್ಯೋಗಿಗೆ ತನ್ನ ಮರಣದ ನಂತರವೂ ತನ್ನ ಅವಲಂಬಿತರನ್ನು ಉದ್ಯೋಗದಾತರು ನೋಡಿಕೊಳ್ಳುತ್ತಾರೆ ಎಂಬ ಭರವಸೆ ಮೂಡುತ್ತದೆ. ಈ ಪ್ರಕರಣದಲ್ಲಿ ಮಹಿಳೆಯ ವಯಸ್ಸು ನಿಗಮ ನಿಗದಿಪಡಿಸಿರುವ ಗರಿಷ್ಠ ವಯೋಮಿತಿ ಮೀರಿದೆ ಎನ್ನುವುದು ಪ್ರತಿವಾದಿಗಳ ವಾದವಾಗಿದ್ದರೂ, ಮಹಿಳೆಯ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಅದನ್ನು ಮಾನವೀಯವಾಗಿ ಪರಿಗಣಿಸಬೇಕಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅರ್ಜಿದಾರ ಮಹಿಳೆ ಮೃತ ಉದ್ಯೋಗಿಯ ಪತ್ನಿಯಾಗಿದ್ದು, ಅವರಿಗೆ ಮಕ್ಕಳು ಸಹ ಇಲ್ಲ. ಇಂಥ ಸಂದರ್ಭದಲ್ಲಿ ಗರಿಷ್ಠ ವಯೋಮಿತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದರಿಂದ ಆಕೆಗೆ ಅನ್ಯಾಯವಾಗಲಿದೆ. ಅರ್ಜಿದಾರರು ವಿಧವೆಯಾಗಿದ್ದು, ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ ಎಂಬ ವಿಶೇಷ ಸನ್ನಿವೇಶವನ್ನು ಪರಿಗಣಿಸಿದಾಗ, ಪ್ರತಿವಾದಿಗಳು ಅರ್ಜಿದಾರರಿಗೆ ಅನುಕಂಪದ ಉದ್ಯೋಗ ನಿರಾಕರಿಸಿರುವುದು ಮಾನವೀಯ ನಡೆಯಲ್ಲ. ಇದರಿಂದ, ಮೃತ ಉದ್ಯೋಗಿಯ ಪತ್ನಿಗೆ ಅನ್ಯಾಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಹಿಳೆಗೆ ಉದ್ಯೋಗ ನಿರಾಕರಿಸಿ ನೀಡಲಾಗಿದ್ದ ಹಿಂಬರಹಗಳನ್ನು ರದ್ದುಪಡಿಸಿದೆ.

ಪ್ರಕರಣವೇನು?

ಗದಗ ಜಿಲ್ಲೆಯ ಶಿರಹಟ್ಟಿ ಡಿಪೋನಲ್ಲಿ ನಿಯಂತ್ರಕರಾಗಿ ಕೆಲಸ ಮಾಡುತ್ತಿದ್ದ ರಾಮಣ್ಣ ಗೋಶೆಲ್ಲನವರ್ 2021ರ ಜೂನ್ 25ರಂದು ಮರಣ ಹೊಂದಿದ್ದರು. ಆನಂತರ, ರಾಮಣ್ಣ ಪತ್ನಿ ಲಕ್ಷ್ಮವ್ವ ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಡಿ ದರ್ಜೆಯ ಹುದ್ದೆಗೆ ಅನುಕಂಪದ ಆಧಾರದಲ್ಲಿ ನೇಮಕಾತಿಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಮಹಿಳೆಯ ವಯಸ್ಸು 45 ವರ್ಷ ದಾಟಿದ್ದ ಕಾರಣಕ್ಕೆ ಅನುಕಂಪದ ಆಧಾರದ ನೇಮಕಾತಿಗೆ ಅರ್ಹರಲ್ಲ ಎಂದು ತಿಳಿಸಿ ಅರ್ಜಿ ತಿರಸ್ಕರಿಸಿ ಹಿಂಬರಹ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಹಿಳೆಯ ಪರ ವಾದ ಮಂಡಿಸಿದ್ದ ವಕೀಲ ಹೇಮಂತ್ ಕುಮಾರ್ ಎಲ್. ಹಾವರಗಿ, ಅರ್ಜಿದಾರರು ಮೃತ ಉದ್ಯೋಗಿಯ ಪತ್ನಿಯಾಗಿದ್ದು, ಮಕ್ಕಳಿಲ್ಲದ ಅವರನ್ನು ನೋಡಿಕೊಳ್ಳಲು ಬೇರೆ ಯಾರೂ ಇಲ್ಲ. ಅವರ ಜೀವನೋಪಾಯಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ನಿಗಮಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಈ ಪ್ರಕರಣದಲ್ಲಿ ಮಹಿಳೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ದಿನಾಂಕದಂದು ಅವರಿಗೆ 45 ವರ್ಷ 7 ತಿಂಗಳು ವಯಸ್ಸಾಗಿತ್ತು. ಗರಿಷ್ಠ ವಯೋಮಿತಿ ಮೀರಿದ್ದರಿಂದ ಅವರು ಅನುಕಂಪದ ನೇಮಕಾತಿಗೆ ಅರ್ಹತೆ ಹೊಂದಿರಲಿಲ್ಲ. ಆದ್ದರಿಂದ, ಅವರ ಅರ್ಜಿ ತಿರಸ್ಕರಿಸಿ ಹೊರಡಿಸಲಾದ ಆದೇಶ ಸರಿಯಾಗಿದ್ದು, ಅದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ‌‌ ಎಂದು ನಿಗಮದ ಪರ ವಕೀಲ ಪ್ರಶಾಂತ್ ಹೊಸಮನಿ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X