Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಡಿಕೆ ವ್ಯಾಪಾರಿಯ ಕಾರಿನಲ್ಲಿದ್ದ 1 ಕೋಟಿ...

ಅಡಿಕೆ ವ್ಯಾಪಾರಿಯ ಕಾರಿನಲ್ಲಿದ್ದ 1 ಕೋಟಿ ರೂ. ಹಣ ಕಳವು ಪ್ರಕರಣ: ಚಾಲಕ ಸೇರಿ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Nov 2023 9:28 PM IST
share
ಅಡಿಕೆ ವ್ಯಾಪಾರಿಯ ಕಾರಿನಲ್ಲಿದ್ದ 1 ಕೋಟಿ ರೂ. ಹಣ ಕಳವು ಪ್ರಕರಣ: ಚಾಲಕ ಸೇರಿ ನಾಲ್ವರ ಬಂಧನ

ಬೆಂಗಳೂರು, ನ.2: ಅಡಿಕೆ ವ್ಯಾಪಾರಿಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಕಾರಿನಲ್ಲಿದ್ದ 1ಕೋಟಿ ರೂ.ಹಣ ಕಳವು ಮಾಡಿದ್ದ ಕಾರು ಚಾಲಕನ ಸಹಿತ ನಾಲ್ವರು ಆರೋಪಿಗಳನ್ನು ಇಲ್ಲಿನ ಉಪ್ಪಾರಪೇಟೆ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತರನ್ನು ಸ್ವಾಮಿ(34), ಅನುಪಮಾ(38), ಪವನ್(30) ಹಾಗೂ ಕಾರ್ತಿಕ್(27) ಎಂದು ಗುರುತಿಸಲಾಗಿದೆ.

ಬಂಧಿತರಿಂದ 90.19 ಲಕ್ಷ ರೂ ನಗದು, ಕದ್ದ ಹಣದಲ್ಲಿ ಖರೀದಿಸಿದ್ದ 6.49 ಲಕ್ಷ ಮೌಲ್ಯದ 2 ಆ್ಯಪಲ್ ಐಫೋನ್‍ಗಳು, 1 ಇಯರ್ ಫೋನ್, 2 ವಾಚುಗಳು, 1 ಸ್ಮಾರ್ಟ್ ವಾಚ್, 61.670 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 2 ಕಾರುಗಳು, 1 ಬೈಕ್, 4 ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ.

ಅ.7ರಂದು ಬೆಂಗಳೂರಿಗೆ ಬಂದಿದ್ದ ಅಡಿಕೆ ವ್ಯಾಪಾರಿ ಉಮೇಶ್ ಎಂಬುವವರ ಕಾರಿನಲ್ಲಿದ್ದ 1 ಕೋಟಿ ರೂ. ಕಳ್ಳತನವಾಗಿತ್ತು. ಈ ಸಂಬಂಧ ಕಾರು ಚಾಲಕ ಸ್ವಾಮಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಅ.21ರಂದು ಉಪ್ಪಾರಪೇಟೆ ಠಾಣೆಗೆ ಉಮೇಶ್ ದೂರು ನೀಡಿದ್ದರು.

ಘಟನೆ ವಿವರ: ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಮೂಲದ ಉಮೇಶ್ ವಿವಿಧ ಜಿಲ್ಲೆಗಳ ರೈತರಿಂದ ಅಡಿಕೆ ಖರೀದಿಸಿ, ಹೊರ ರಾಜ್ಯಗಳಿಗೆ ರಫ್ತು ಮಾಡುವ ಕೆಲಸ ಮಾಡಿಕೊಂಡಿದ್ದರು. ಅ.7ರಂದು ಅಡಿಕೆ ಖರೀದಿಸಲು ಹಣದೊಂದಿಗೆ ಉಮೇಶ್, ತಮ್ಮ ಕಾರು ಚಾಲಕ ಸ್ವಾಮಿ ಜೊತೆ ಚಿತ್ರದುರ್ಗದಿಂದ ಹೊರಟಿದ್ದರು. ಕಾರಿನ ಢಿಕ್ಕಿಯಲ್ಲಿ ಹಣದ ಬ್ಯಾಗ್ ಇರಿಸಿದ್ದರು. ತುಮಕೂರಿನಲ್ಲಿ ಅಡಿಕೆ ಸಿಕ್ಕಿರಲಿಲ್ಲ. ಆದ್ದರಿಂದ ಬೆಂಗಳೂರಿನ ಚಂದ್ರಾಲೇಔಟ್‍ನ ಪಿಜಿಯಲ್ಲಿದ್ದ ಮಗಳನ್ನು ಮಾತನಾಡಿಸಿಕೊಂಡು ಹೋಗೋಣವೆಂದು ಬೆಂಗಳೂರಿಗೆ ಬಂದಿದ್ದರು.

ಗಾಂಧಿನಗರದ ಕಾಳಿದಾಸ ರಸ್ತೆಯಲ್ಲಿರುವ ಗಿರಿಯಾಸ್ ಬಳಿ ಕಾರು ನಿಲ್ಲಿಸಿದ್ದ ಉಮೇಶ್ ಹಾಗೂ ಸ್ವಾಮಿ, ಸಮೀಪದಲ್ಲಿದ್ದ ಹೋಟೆಲ್‍ನಲ್ಲಿ ಊಟ ಮಾಡಿಕೊಂಡು ಬಂದು ಚಂದ್ರಾಲೇಔಟ್‍ಗೆ ತೆರಳಿ ಮಗಳನ್ನು ಮಾತನಾಡಿಸಿಕೊಂಡು ಚಿತ್ರದುರ್ಗಕ್ಕೆ ಹೊರಟಿದ್ದರು. ನಂತರ ಚಹಾ ಕುಡಿಯಲು ಚಾಲಕ ಸ್ವಾಮಿ, ಡಾಬಸ್‍ಪೇಟೆ ಬಳಿ ಕೆಲ ನಿಮಿಷ ಕಾರು ನಿಲ್ಲಿಸಿದ್ದ. ಬಳಿಕ ಇಬ್ಬರೂ ಕಾರಿನಲ್ಲಿ ಭೀಮಸಮುದ್ರಕ್ಕೆ ಹೋಗಿ ನೋಡಿದಾಗ ಹಣದ ಬ್ಯಾಗ್ ನಾಪತ್ತೆಯಾಗಿತ್ತು. ಸಾಕಷ್ಟು ಹುಡುಕಾಟದ ನಂತರವೂ ಬ್ಯಾಗ್ ಸಿಗದಿದ್ದಾಗ ತಮ್ಮ ಸ್ನೇಹಿತನೊಂದಿಗೆ ಚರ್ಚಿಸಿದ ಬಳಿಕ ಉಪ್ಪಾರಪೇಟೆ ಠಾಣೆಗೆ ಬಂದು ಉಮೇಶ್ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಉಪ್ಪಾರಪೇಟೆ ಪೊಲೀಸರು ಕಾರಿನ ಚಾಲಕ ಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಸಂಚು ರೂಪಿಸಿ ನಗರದ ಹೊರವಲಯದಲ್ಲಿ ಹಣ ಕಳ್ಳತನ ಮಾಡಿರುವುದು ತಿಳಿದುಬಂದಿದೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X