Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಂಪತಿ ಪರಸ್ಪರ ದೂರವಿರಲು...

ದಂಪತಿ ಪರಸ್ಪರ ದೂರವಿರಲು ನಿರ್ಧರಿಸಿದಲ್ಲಿ ವಿಚ್ಛೇದನಕ್ಕೆ 1 ವರ್ಷ ಕಡ್ಡಾಯವಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 Sept 2023 9:15 PM IST
share
ದಂಪತಿ ಪರಸ್ಪರ ದೂರವಿರಲು ನಿರ್ಧರಿಸಿದಲ್ಲಿ ವಿಚ್ಛೇದನಕ್ಕೆ 1 ವರ್ಷ ಕಡ್ಡಾಯವಲ್ಲ: ಹೈಕೋರ್ಟ್

ಬೆಂಗಳೂರು, ಸೆ.7: ವೃತ್ತಿಯ ಬಗ್ಗೆ ಗಮನ ಹರಿಸಲು ತೀರ್ಮಾನಿಸಿ ದಂಪತಿ ಪರಸ್ಪರ ದೂರವಿರಲು ನಿರ್ಧರಿಸಿದ್ದಲ್ಲಿ ವಿಚ್ಛೇದನಕ್ಕೆ ಒಂದು ವರ್ಷದ ಕಡ್ಡಾಯ ಅವಧಿ ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅಲ್ಲದೇ, ದಂಪತಿ ಸಲ್ಲಿಸಿರುವ ಅರ್ಜಿಯನ್ನು ಶೀಘ್ರದಲ್ಲಿ ಪರಿಗಣಿಸಿ ಸೂಕ್ತ ಆದೇಶವನ್ನು ನೀಡಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ ಪಾಟೀಲ್ ಅವರಿದ್ದ ವಿಭಾಗೀಯಪೀಠ, ವಿಚ್ಚೇದನ ಮಂಜೂರಾತಿಗೆ ನಿರಾಕರಿಸಿ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಿ ಆದೇಶಿಸಿದೆ.

ಪ್ರಸ್ತುತ ಪ್ರಕರಣದ ಅರ್ಜಿದಾರರು 32 ರಿಂದ 37 ವರ್ಷದ ವಯೋಮಾನದವರು. ಅವರಿಬ್ಬರೂ ನಿರ್ದಿಷ್ಟವಾಗಿ ಪರಸ್ಪರ ದೂರ ಸರಿದು ತಮ್ಮ ತಮ್ಮ ವೃತ್ತಿಜೀವನದ ಮೇಲೆ ಹೆಚ್ಚಿನ ಗಮನಹರಿಸಲು ಮತ್ತು ಪ್ರತ್ಯೇಕ ಜೀವನ ನಡೆಸಲು ಇಚ್ಚಿಸಿದ್ದಾರೆ. ಅವರು ಕೈಗೊಂಡಿರುವ ನಿರ್ಧಾರ ಪ್ರಜ್ಞಾಪೂರ್ವಕವಾದುದು ಮತ್ತು ಆ ನಿರ್ಧಾರದ ಪರಿಣಾಮಗಳ ಬಗ್ಗೆ ಅವರಿಗೆ ಅರಿವಿದೆ. ಹೀಗಾಗಿ, ಈ ಮೇಲಿನ ಪರಿಸ್ಥಿತಿ ಮತ್ತು ಸಂದರ್ಭದ ಹಿನ್ನೆಲೆಯಲ್ಲಿ ಈ ಕೋರ್ಟ್‍ಗೆ ಅವರಿಬ್ಬರ ನಡುವಿನ ಸಂಧಾನ ಸಾಧ್ಯತೆ ಕ್ಷೀಣಿಸುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೇ ನಿಯಮದ ಪ್ರಕಾರ, ಅರ್ಜಿ ಸಲ್ಲಿಸಿದ ಆರು ತಿಂಗಳು ಸಮಯ ನೀಡುವುದು (ಕೂಲಿಂಗ್ ಅವಧಿ) ಕೋರ್ಟ್ ಮೆಟ್ಟಿಲೇರಿರುವ ಪತಿ-ಪತ್ನಿ ಮನಸ್ಸು ಬದಲಾವಣೆಯಾಗಬಹುದು. ಆರು ತಿಂಗಳ ನಂತರವೂ ಪತಿ-ಪತ್ನಿ ಇಬ್ಬರೂ ಮನಸ್ಸು ಬದಲಿಸದೇ, ವಿಚ್ಚೇದನ ಅರ್ಜಿಯನ್ನು ಮುಂದುವರಿಸಲು ಸಮ್ಮತಿಸಿದರೆ, ಆಗ ನ್ಯಾಯಾಲಯ ಮುಂದಿನ ಆರು ತಿಂಗಳಲ್ಲಿ ಮೆರಿಟ್ ಆಧಾರದ ಮೇಲೆ ಅರ್ಜಿ ಪರಿಶೀಲಿಸಿ, ಅಗತ್ಯ ಆದೇಶಗಳನ್ನು ಹೊರಡಿಸುತ್ತದೆ. ಆದರೆ, ಸುಪ್ರೀಂಕೋರ್ಟ್ 2017 ರಲ್ಲಿ ಅಮರ್ ದೀಪ್ ಸಿಂಗ್ ವರ್ಸಸ್ ಹರ್ವೀನ್ ಕೌರ್ ಪ್ರಕರಣದಲ್ಲಿ ಕೂಲಿಂಗ್ ಅವಧಿ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಹೀಗಾಗಿ, ವಿಚ್ಚೇದನ ಮಂಜೂರು ಮಾಡುವಾಗ ಪ್ರಕರಣಗಳ ವಾಸ್ತವಾಂಶ ಹಾಗೂ ಸಂದರ್ಭಗಳಿಗೆ ಅನುಗುಣವಾಗಿ ನ್ಯಾಯಾಲಯಗಳು ವಿವೇಚನೆ ಬಳಸಬೇಕು ಮತ್ತು ಪಕ್ಷಗಾರರನ್ನು ಮತ್ತೆ ಒಂದುಗೂಡಿ ಸಂಸಾರ ನಡೆಸುತ್ತಾರೆಯೇ? ಎಂದು ಕೇಳಬೇಕು. ಅವರು ಒಪ್ಪಲಿಲ್ಲ ಎಂದಾದರೆ ವಿಚ್ಚೇದನ ಮಂಜೂರು ಮಾಡಬಹುದು ಎಂದು ನ್ಯಾಯಪೀಠ ವಿವರಿಸಿದೆ.

ಈ ಪ್ರಕರಣದಲ್ಲಿ ಪತಿ-ಪತ್ನಿ ಇಬ್ಬರೂ ಎಂಜಿನಿಯರಿಂಗ್ ಪದವೀಧರರು, ಇಬ್ಬರೂ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇಬ್ಬರಿಗೂ ತಮ್ಮ ನಡುವಿನ ಪರಸ್ಪರ ಭಿನ್ನಾಭಿಪ್ರಾಯಗಳು, ಇಷ್ಟ, ಕಷ್ಟಗಳು ಅರ್ಥವಾಗಿವೆ. ಸಂಧಾನಕ್ಕೆ ಮಾಡಿರುವ ಯತ್ನಗಳು ವಿಫಲವಾಗಿವೆ. ಇಬ್ಬರೂ ಪರಸ್ಪರ ಯಾವುದೇ ಆರೋಪ-ಪ್ರತ್ಯಾರೋಪಗಳನ್ನು ಮಾಡದೆ ವಿವಾಹ ಬಂಧನ ಕಡಿದುಕೊಳ್ಳಲು ನಿರ್ಧರಿಸಿದ್ದಾರೆ.

ಹೀಗಾಗಿ, ಅವರನ್ನು ಮತ್ತಷ್ಟು ಅವಧಿಗೆ ಕಾಯಿಸುವುದು ಸರಿಯಲ್ಲ. ನ್ಯಾಯಾಲಯ ಈ ಪ್ರಕರಣದಲ್ಲಿ ಅರ್ಜಿದಾರರ ಪರಸ್ಪರ ಒಪ್ಪಿಗೆ ಮೇರೆಗೆ ಕೂಲಿಂಗ್ ಅವಧಿ ಮನ್ನಾ ಮಾಡಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X