Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸೇನೆಯಲ್ಲಿನ ನರ್ಸಿಂಗ್ ಸೇವೆ’‌ ಯಲ್ಲಿ...

‘ಸೇನೆಯಲ್ಲಿನ ನರ್ಸಿಂಗ್ ಸೇವೆ’‌ ಯಲ್ಲಿ ಶೇ.100ರಷ್ಟು ಮಹಿಳೆಯರಿಗೆ ಮೀಸಲಾತಿ ಅಸಾಂವಿಧಾನಿಕ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 Jan 2024 8:03 PM IST
share
‘ಸೇನೆಯಲ್ಲಿನ ನರ್ಸಿಂಗ್ ಸೇವೆ’‌ ಯಲ್ಲಿ ಶೇ.100ರಷ್ಟು ಮಹಿಳೆಯರಿಗೆ ಮೀಸಲಾತಿ ಅಸಾಂವಿಧಾನಿಕ: ಹೈಕೋರ್ಟ್

ಬೆಂಗಳೂರು: ಸೇನೆಯಲ್ಲಿ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಿದ್ದ ಭಾರತೀಯ ಮಿಲಿಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ ‘ಮಹಿಳೆಯಾಗಿದ್ದರೆ' ಎಂಬ ಪದವನ್ನು ಅಸಾಂವಿಧಾನಿಕ ಎಂದು ಹೈಕೊರ್ಟ್ ಘೋಷಣೆ ಮಾಡಿದೆ.

ಈ ರೀತಿಯ ಮೀಸಲಾತಿ ನೀಡುವುದು ಸಂವಿಧಾನದ ಪರಿಚ್ಛೇದ 14(ಸಮಾನತೆ), 16(2)(ಲಿಂಗ ತಾರತಮ್ಯ) ಹಾಗೂ 21(ಜೀವ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಉಲ್ಲಂಘಿಸಿದಂತಾಗಲಿದೆ ಎಂದು ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, 81 ವರ್ಷಗಳ ಹಳೆಯ ಕಾನೂನನ್ನು ರದ್ದುಗೊಳಿಸಿ ಆದೇಶಿಸಿದೆ.

ಹುಬ್ಬಳ್ಳಿಯ ಕೆಎಲ್‍ಇ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್ ಎಂ ಪೀರಾಪುರ, ಕರ್ನಾಟಕ ಶುಶ್ರೂಷಕರ ಸಂಘ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಧಾರವಾಡದ ನ್ಯಾಯಪೀಠ, ಈ ಆದೇಶ ನೀಡಿದೆ.

ಸಂವಿಧಾನದ ಅಡಿಯಲ್ಲಿ ಮಹಿಳೆಯನ್ನು ಪ್ರತ್ಯೇಕ ವರ್ಗವೆಂದು ಹೇಳಿರುವುದು ನ್ಯಾಯಸಮ್ಮತವಾಗಿದೆ. ಆದರೆ, ಈ ಆಶಯವನ್ನು ಈಡೇರಿಸುವುದಕ್ಕಾಗಿ ತಾರ್ಕಿಕವಲ್ಲದ ರೀತಿಯಲ್ಲಿ ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡಬೇಕು ಎಂದಾಗುವುದಿಲ್ಲ ಮತ್ತು ಪರಿಚ್ಛೇದ 15(3)(ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವ ಅವಕಾಶ)ರ ಅಡಿಯಲ್ಲಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು 1943ರಲ್ಲಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದರು. ಅದನ್ನು ಸಂವಿಧಾನದ ಅಡಿಯಲ್ಲಿ ಅಳವಡಿಸಿಕೊಂಡು ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಈ ಕಾನೂನು ಸಂವಿಧಾನದ 33ನೇ ಪರಿಚ್ಛೇದದಂತೆ ಸಂಸತ್ತು ಜಾರಿಗೆ ತಂದಿರುವ ಕಾನೂನನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸ್ವಾಂತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಸೇನೆಗೆ ಸೇರಲು ಹಿಂಜರಿಯುತ್ತಿದ್ದರು. ಆದ ಕಾರಣ ಮಹಿಳೆಯನ್ನು ಪ್ರೋತ್ಸಾಹಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡಲಾಗಿತ್ತು. ಆದರೆ, 1943ರಲ್ಲಿ ಇದ್ದಂತಹ ಪರಿಸ್ಥಿತಿ ಪ್ರಸ್ತುತ ಇಲ್ಲ. ಈ ಸುಗ್ರೀವಾಜ್ಞೆ ಜಾರಿಯಾಗಿ 80 ವರ್ಷಗಳು ಕಳೆದಿವೆ. ಆದರೂ ಇಂದಿಗೂ ಮೀಸಲಾತಿ ಒದಗಿಸುವ ಉದ್ದೇಶಗಳು ಏನು ಎಂಬುದಕ್ಕೆ ಸೂಕ್ತ ಕಾರಣ ನೀಡಿಲ್ಲ. ಹೀಗಾಗಿ, ಈ ಮೀಸಲು ಸೌಲಭ್ಯ ಸಮರ್ಥನೆಗೆ ಅರ್ಹವಿಲ್ಲ ಎಂದು ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಆದಾಗ್ಯೂ, ಮೀಸಲಾತಿಯ ಪರಿಕಲ್ಪನೆಯು ವಂಚಿತರಿಗೆ ಸೌಲಭ್ಯವನ್ನು ಕಲ್ಪಿಸುವುದಾಗಿದೆಯೇ ವಿನಹ ಸೌಲಭ್ಯಗಳಿಂದ ವಂಚಿತರನ್ನಾಗಿಸುವುದಲ್ಲ. ಸಕಾರಣಗಳಿಲ್ಲದೆ ಶೇ.100ರಷ್ಟು ಮಹಿಳೆಯರಿಗೆ ಮಾತ್ರ ಅವಕಾಶ ನೀಡಿದಲ್ಲಿ ಮೀಸಲಾತಿ ಕಲ್ಪನೆ ಅಂತ್ಯಗೊಳಿಸಿದಂತಾಗುತ್ತದೆ. ಜತೆಗೆ, ಮೀಸಲು ಸೌಲಭ್ಯದಿಂದ ಪುರುಷರನ್ನು ಪ್ರತ್ಯೇಕಿಸಿದಂತಾಗಲಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರ್ಜಿದಾರರನ್ನು ಸೇನೆಯ ಶುಶ್ರೂಷಕರನ್ನಾಗಿ ನೇಮಕ ಮಾಡಬೇಕು ಎಂದು ನಿರ್ದೇಶನ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿದೆ.

ಪ್ರಕರಣವೇನು?: 2010ರ ಫೆ.13 ಮತ್ತು 19ರಂದು ಶುಶ್ರೂಷಕಿಯರ ನೇಮಕ ಸಂಬಂಧ ಭಾರತೀಯ ಮಿಲಿಟರಿ ಸೇನೆ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯಲ್ಲಿ ಮಹಿಳೆಯರು ಮಾತ್ರ ಎಂದು ತಿಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ 'ಮಹಿಳೆಯಾಗಿದ್ದರೆ’ ಎಂಬ ಪದವನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಕೋರಿದ್ದರು.

ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಕೀಲರು, ಅಧಿಸೂಚನೆಗೆ ಸಂಬಂಧಿಸಿದಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಗೆ ಮತ್ತು ಅರ್ಜಿದಾರರ ಸಂಘದಲ್ಲಿ ಇಬ್ಬರಿಗೆ ಈಗಾಗಲೇ ವಯೋಮಿತಿ ಮೀರಿದೆ ಎಂದು ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X