ನಾಳೆ(ಫೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ
![ನಾಳೆ(ಫೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಾಳೆ(ಫೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ](https://www.varthabharati.in/h-upload/2024/02/12/1243167-1230282-1229270-23c70a8b-1de7-4f35-ba05-e3529a77822d.webp)
ಬೆಂಗಳೂರು: ವಿಧಾನ ಮಂಡಲದ ಅಧಿವೇಶನವು ಫೆ.12 ರಿಂದ 23ರ ವರೆಗೆ ವಿಧಾನಸೌಧದಲ್ಲಿ ನಡೆಯುತ್ತಿದ್ದು, ವಿರೋಧ ಪಕ್ಷಗಳು ಸರಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆ.14ರ ಸಂಜೆ 7 ಗಂಟೆಗೆ ನಗರದ ಅರಮನೆ ರಸ್ತೆಯಲ್ಲಿರುವ ಹೊಟೇಲ್ ರ್ಯಾಡಿಸನ್ ಬ್ಲೂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾನಾಯಕ ಎನ್.ಎಸ್.ಭೋಸರಾಜು ಹಾಗೂ ಕೆಪಿಸಿಸಿಯ ಎಲ್ಲ ಕಾರ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಶಾಸಕರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story