Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300...

ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕೆಪಿಎಸ್‌ ಶಾಲೆಗಳ ಸ್ಥಾಪನೆ : ಸಚಿವ ಮಧುಬಂಗಾರಪ್ಪ

► "3ನೇ ತರಗತಿಯಿಂದಲೇ ಎಐ ಶಿಕ್ಷಣ, ಪ್ರಾಥಮಿಕ ಹಂತದಿಂದ ಕಂಪ್ಯೂಟರ್‌ ಕಲಿಕೆ" ► "ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ, ಉಚಿತ ಬಸ್‌ ಸೌಲಭ್ಯ"

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ25 Nov 2026 3:06 PM IST
share
ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕೆಪಿಎಸ್‌ ಶಾಲೆಗಳ ಸ್ಥಾಪನೆ : ಸಚಿವ ಮಧುಬಂಗಾರಪ್ಪ

ಬೆಂಗಳೂರು : ಮುಂದಿನ ಎರಡು ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ 1,300 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್‌) ಸ್ಥಾಪಿಸುವ ಗುರಿ ಹೊಂದಿದ್ದು, ಈ ಶಾಲೆಗಳ ನಿರ್ಮಾಣದ ಮೂಲಕ ಕರ್ನಾಟಕವು ಶೈಕ್ಷಣಿಕವಾಗಿ ದೇಶದಲ್ಲೇ ಗಮನ ಸೆಳೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಬಿಐಇಸಿ ಸಭಾಂಗಣದಲ್ಲಿ ಇಂದು ʻಇಂಡಿಯಾ ಡೈಡ್ಯಾಕ್ʼ ಆಯೋಜಿಸಿದ್ದ ಟೈಸ್‌ (TIEES) ಅಂತರರಾಷ್ಟ್ರೀಯ ಶಿಕ್ಷಣ ಮತ್ತು ಕೌಶಲ್ಯ ಕುರಿತ ಸಮ್ಮೇಳನ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳ ಕಲಿಕೆಯ ಗುಣಮಟ್ಟ ಸುಧಾರಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೆಪಿಎಸ್‌ ಶಾಲೆಗಳಲ್ಲಿ ಪ್ರತಿಯೊಂದು ವಿಷಯಕ್ಕೂ ನುರಿತ ಶಿಕ್ಷಕರನ್ನು ನೇಮಿಸಲಾಗುವುದು. ಮೂರನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣ ನೀಡಲಾಗುವುದು. ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್‌ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಸಾಲ ನೀಡುತ್ತಿದ್ದು, ರಾಜ್ಯ ಸರ್ಕಾರದ ಅನುದಾನ ಸೇರಿದಂತೆ ಒಟ್ಟು 4,500 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ಪ್ರತಿಯೊಂದು ಕೆಪಿಎಸ್‌ ಶಾಲೆಗೂ ಸರ್ಕಾರದ ವತಿಯಿಂದ ಉಚಿತ ಬಸ್‌ ಸೌಲಭ್ಯ ಕಲ್ಪಿಸುವ ಉದ್ದೇಶವಿದೆ ಎಂದರು.

ಸಂಗೀತ, ರಂಗಭೂಮಿ ಮತ್ತು ಮಾನವೀಯ ಮೌಲ್ಯಗಳಿಗೂ ಒತ್ತು:

ಶೈಕ್ಷಣಿಕ ವಿಷಯಗಳ ಬೋಧನೆಯ ಜೊತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಸಂಗೀತ ಮತ್ತು ರಂಗಭೂಮಿ ಶಿಕ್ಷಕರನ್ನೂ ಕೆಪಿಎಸ್‌ ಶಾಲೆಗಳಲ್ಲಿ ಒದಗಿಸಲಾಗುವುದು. ನಮ್ಮದು ಸಂಸ್ಕೃತಿಯನ್ನು ಗೌರವಿಸುವ ದೇಶ. ಅದರಲ್ಲೂ ದಕ್ಷಿಣ ಭಾರತದಲ್ಲಿ ಸಂಸ್ಕೃತಿ ಮತ್ತು ಪರಂಪರೆಗೆ ವಿಶೇಷ ಗೌರವವಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದಕ್ಕೂ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ 46 ಸಾವಿರ ಸರ್ಕಾರಿ ಶಾಲೆಗಳಿದ್ದು, ಎಲ್ಲ ಶಾಲೆಗಳ ಮಕ್ಕಳೂ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಇಂದು ಮಕ್ಕಳು ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿಯದೆಯೇ ನಿರರ್ಗಳವಾಗಿ ಪ್ರಸ್ತಾವನೆಯನ್ನು ಓದುತ್ತಿದ್ದಾರೆ. ಸಂವಿಧಾನವೇ ಶ್ರೇಷ್ಠ ಎಂಬ ಭಾವನೆಯನ್ನು ಮಕ್ಕಳಲ್ಲಿ ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.

ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿ:

ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರೌಢಶಿಕ್ಷಣ ಪೂರ್ಣಗೊಳಿಸುವ ವೇಳೆಗೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಭವಿಷ್ಯದಲ್ಲಿ ಸ್ವಾವಲಂಬಿಯಾಗಿ ಬದುಕಲು ಹಾಗೂ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯಗಳನ್ನು ಕಲಿಸುವ ವಾತಾವರಣ ನಿರ್ಮಿಸಲಾಗುತ್ತಿದೆ. ಇದರಿಂದ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉದ್ಯೋಗಾವಕಾಶಗಳನ್ನು ಸುಲಭವಾಗಿ ಪಡೆಯಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

ಶೃಂಗಸಭೆಯಲ್ಲಿ ಮಾಲ್ದೀವ್ಸ್ ಗಣರಾಜ್ಯದ ಉನ್ನತ ಶಿಕ್ಷಣ ಸಚಿವ ಅಹಮದ್‌ ಶೆಫ್ಯೂ, ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌, 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್' ಸಂಸ್ಥೆಯ ರವಿಶಂಕರ್, ಮಾಜಿ ಸಚಿವ ಸಿ ಎನ್‌ ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಮುಖ್ಯ ಸಚೇತಕ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.

Tags

Minister Madhu BangarappaKPS schoolsKarnataka
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X