Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ,...

ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ವಾರ್ತಾಭಾರತಿವಾರ್ತಾಭಾರತಿ13 Feb 2025 1:42 PM IST
share
ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್‌ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು.

ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೋಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ʼವೋಲ್ವೊ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತು. ಈಗ ನಮ್ಮಲ್ಲಿ ವೋಲ್ವೊ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೊ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು’ ಎಂದರು.

ವೋಲ್ವೊ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, ʼಕರ್ನಾಟಕದಲ್ಲಿ ಕಂಪನಿಯು ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್/ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್/ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗ ಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದರು.

ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ ಮತ್ತು ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X