Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Thdcl ಜತೆ 15,000 ಕೋಟಿ ರೂ. ವಿದ್ಯುತ್...

Thdcl ಜತೆ 15,000 ಕೋಟಿ ರೂ. ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ರಾಜ್ಯ ಸರಕಾರ ಸಹಿ

ವಾರ್ತಾಭಾರತಿವಾರ್ತಾಭಾರತಿ9 Nov 2023 2:05 PM IST
share
Thdcl ಜತೆ 15,000 ಕೋಟಿ ರೂ. ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ರಾಜ್ಯ ಸರಕಾರ ಸಹಿ

ಬೆಂಗಳೂರು, ನ. 9: ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳನ್ನು ಕೈಗೊಳ್ಳುವ ಸಂಬಂಧ ಕೇಂದ್ರ ಸರಕಾರದ ಸ್ವಾಮ್ಯದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ಜತೆ ರಾಜ್ಯ ಸರ್ಕಾರ ಸಹಿ ಹಾಕಿದೆ.

ಇಂಧನ ಸಚಿವ ಕೆ ಜೆ ಜಾರ್ಜ್ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್‌ ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

"ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗಳನ್ನು ಪರಿಹರಿಸಲು ಈ ಒಪ್ಪಂದ ಪೂರಕವಾಗಿದ್ದು, ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಬದ್ಧ," ಎಂದು ಇಂಧನ ಸಚಿವರು ತಿಳಿಸಿದರು.

"ದಿಲ್ಲಿಯಲ್ಲಿ ಈ ಹಿಂದೆ ಕೇಂದ್ರ ಇಂಧನ ಸಚಿವ ಆರ್‌ಕೆ ಸಿಂಗ್ ಮತ್ತು ಟಿಹೆಚ್‌ಡಿಸಿಎಲ್‌ನ ಸಿಎಂಡಿ ಆರ್.ಕೆ. ವಿಷ್ಣೋಯ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಒಪ್ಪಂದ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿತ್ತು. ಅದರ ಫಲವಾಗಿ ನಾವು ಇಂದು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಒಪ್ಪಂದದಂತೆ ಆದ್ಯತೆ ಮೇರೆಗೆ ಕರ್ನಾಟಕಕ್ಕೆ ವಿದ್ಯುತ್‌ ಒದಗಿಸುವುದಾಗಿ ಟಿಹೆಚ್‌ಡಿಸಿಎಲ್‌ ಭರವಸೆ ನೀಡಿದೆ"ಎಂದರು.

"ಕದ್ರಾ ಅಣೆಕಟ್ಟು ಜಲಾಶಯದಲ್ಲಿ 100 ಮೆಗಾವ್ಯಾಟ್‌ ಸಾಮರ್ಥ್ಯದ ಫ್ಲೋಟಿಂಗ್‌ ಸೋಲಾರ್ ಪಿವಿ ಸ್ಥಾವರದ ಅಭಿವೃದ್ಧಿ, 170 ಮೆಗಾವ್ಯಾಟ್ ಸಾಮರ್ಥ್ಯದ ಗ್ರೌಂಡ್‌ ಮೌಂಟೆಡ್‌ ಯೋಜನೆ, ಕೆಪಿಸಿಎಲ್ ಆವರಣದಲ್ಲಿ ಮೇಲ್ಛಾವಣಿ ಸೌರ ಪಿವಿ ಸ್ಥಾವರ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್‌ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕ ಸ್ಥಾಪನೆ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ", ಎಂದು ಸಚಿವರು ವಿವರಿಸಿದರು.

"ನವೀಕರಿಸಬಹುದಾದ ಇಂಧನ ಮತ್ತು ಹೈಡ್ರೋ ಮತ್ತು ಪಂಪ್ ಹೈಡ್ರೋ ವಲಯದಲ್ಲಿ ಅಪಾರ ಅನುಭವ ಇರುವ ಟಿಹೆಚ್‌ಡಿಸಿಎಲ್‌ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಯೋಜನೆ ಕೈಗೊಳ್ಳುವ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಮುಂದಿನ ಹಂತದಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಕಾರ್ಯಸಾಧ್ಯತೆಯ ಅಧ್ಯಯನ ಕೈಗೊಳ್ಳಲಾಗುವುದು ಮತ್ತು ಎಲ್ಲ ಅಗತ್ಯ ಅನುಮೋದನೆಗಳನ್ನು ಪಡೆಯುವುದಾಗಿ ಟಿಹೆಚ್‌ಡಿಸಿಎಲ್‌ ಮುಖ್ಯಸ್ಥರು ಭರವಸೆ ನೀಡಿದ್ದಾರೆ," ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ ತಿಳಿಸಿದರು.

ಕ್ರೆಡಲ್‌ ಜತೆ ಒಪ್ಪಂದ:

1 ಗಿ.ವ್ಯಾ. ಹೈಬ್ರಿಡ್ ಯೋಜನೆ ಮತ್ತು 500 ಮೆಗಾ ವ್ಯಾಟ್‌ ಸಾಮರ್ಥ್ಯದ ಬೀದರ್ ಸೋಲಾರ್ ಪಾರ್ಕ್‌ ಅಭಿವೃದ್ಧಿ ಸಂಬಂಧ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ ಜತೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ. ಟಿಹೆಚ್‌ಡಿಸಿಎಲ್‌ನ ತಾಂತ್ರಿಕ ನಿರ್ದೇಶಕ ಭೂಪೇಂದರ್ ಗುಪ್ತಾ ಹಾಗೂ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಅವರು ಒಪ್ಪಂದ ಪತ್ರ ವಿನಿಮಯ ಮಾಡಿಕೊಂಡರು. ಅದರಂತೆ ಟಿಹೆಚ್‌ಡಿಸಿಎಲ್‌ ಕೈಗೊಳ್ಳುವ ನವೀಕರಿಸಬಹುದಾದದ ಇಂಧನ ಯೋಜನೆಗಳಿಗೆ ನವೀಕರೀಸಬಹುದಾದದ ಇಂಧನ ನೀತಿ 2022-27ರ ಅನ್ವಯ ಕ್ರೆಡಲ್‌ ನೆರವು ಒದಗಿಸಲಿದೆ.

ಸಭೆಯಲ್ಲಿ ಟಿಹೆಚ್‌ಡಿಸಿಎಲ್‌ ಮುಖ್ಯ ವ್ಯವಸ್ಥಾಪಕ ಸಂದೀಪ್ ಸಿಂಘಾಲ್, ಟಿಹೆಚ್‌ಡಿಸಿಎಲ್‌ ಸಹಾಯಕ ಮುಖ್ಯ ವ್ಯವಸ್ಥಾಪಕ ಮಲ್ಲಿಕಾರ್ಜುನ ಉದಯಗಿರಿ, ಟಿಹೆಚ್‌ಡಿಸಿಎಲ್‌ನ ವಿಶೇಷ ಅಧಿಕಾರಿ, ಗುಜರಾತ್ ಸರ್ಕಾರದ ಮಾಜಿ ವಿಶೇಷ ಆಯುಕ್ತ ಎಕೆ ವಿಜಯ್ ಕುಮಾರ್ ಮತ್ತು ಇತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X