Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ-ರಾಜ್ಯಗಳ ನಡುವೆ ತೆರಿಗೆ ಹಂಚಿಕೆ...

ಕೇಂದ್ರ-ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ಹಾಗೂ ಆದಾಯ ವರ್ಧನೆಗೆ ಅಗತ್ಯ ಕ್ರಮ : 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ

ವಾರ್ತಾಭಾರತಿವಾರ್ತಾಭಾರತಿ29 Aug 2024 7:12 PM IST
share
ಕೇಂದ್ರ-ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ಹಾಗೂ ಆದಾಯ ವರ್ಧನೆಗೆ ಅಗತ್ಯ ಕ್ರಮ : 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ

ಬೆಂಗಳೂರು : ಹಣಕಾಸು ಆಯೋಗವು ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ಮತ್ತು ಆದಾಯ ವರ್ಧನೆಗೆ ಕ್ರಮಗಳನ್ನು ಕೈಗೊಂಡಿರುವುದರ ಜೊತೆಗೆ ವಿಪತ್ತು ನಿರ್ವಹಣ ಕಾಯ್ದೆ ಅಡಿಯಲ್ಲಿಯೂ ಹಣ ಬಿಡುಗಡೆ ಮಾಡುತ್ತದೆ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ ತಿಳಿಸಿದರು.

ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿರುವ 16ನೇ ಹಣಕಾಸು ಆಯೋಗವು ಗುರುವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

16ನೇ ಹಣಕಾಸು ಆಯೋಗವು ಈಗಾಗಲೇ ಹಿಮಾಚಲ ಪ್ರದೇಶ, ಚತ್ತೀಸ್‍ಗಡ, ಪಂಜಾಬ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ಭೇಟಿ ನೀಡಿದ್ದು, ಕರ್ನಾಟಕ 5ನೇ ರಾಜ್ಯವಾಗಿದೆ. ಅಲ್ಲದೆ ರಾಜ್ಯದ ಹಣಕಾಸು ಆಯೋಗ ಮಾಡುವ ಶಿಫಾರಸ್ಸುಗಳ ಆಧಾರದ ಮೇಲೆ ರಾಜ್ಯದ ಪಂಚಾಯತ್ ಮತ್ತು ಪುರಸಭೆಗಳ ಸಂಪನ್ಮೂಲಗಳಿಗೆ ಪೂರಕವಾಗಿ ರಾಜ್ಯದ ಕ್ರೋಢೀಕೃತ ಅನುದಾನವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯಗಳು ಕೆಲ ತೆರಿಗೆಗಳನ್ನು ಸಂಗ್ರಹ ಮಾಡುತ್ತವೆ. ಆದರೆ ಕೇಂದ್ರ ಸರಕಾರ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡುತ್ತದೆ. ಕೇಂದ್ರ ಸರಕಾರವು ತಾನು ಸಂಗ್ರಹಿಸಿರುವ ತೆರಿಗೆಯ ಪಾಲನ್ನು ರಾಜ್ಯಗಳಿಗೆ ಆದ್ಯತೆ ಮೇಲೆ ಹಂಚಲು ಸಹಕಾರಿಯಾಗುವಂತೆ ಹಣಕಾಸು ಆಯೋಗವು ಕೆಲಸ ಮಾಡುತ್ತದೆ. ಇದರಲ್ಲಿ ವಿಶೇಷ ಅನುದಾನಗಳು ಒಳಗೊಂಡಿರುತ್ತದೆ ಎಂದು ಅರವಿಂದ ಪನಗಾರಿಯಾ ಹೇಳಿದರು.

ಮುಖ್ಯಮಂತ್ರಿ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ರಾಜ್ಯ ಸರಕಾರವು ಉತ್ತಮ ರೀತಿಯಲ್ಲಿ ತನ್ನ ಪ್ರಸ್ತಾವನೆಯನ್ನು ನಮಗೆ ಸಲ್ಲಿಸಿದೆ. ತೆರಿಗೆ ಪಾಲನ್ನು ಹೇಗೆ ಹಂಚಿಕೆ ಮಾಡಬೇಕು, ಪ್ರಾಕೃತಿಕ ವಿಕೋಪಕ್ಕೆ ಪರಿಹಾರ ನೀಡಲು ವಿಶೇಷ ಅನುದಾನ ನೀಡಬೇಕು, ತೆರಿಗೆ ಪಾಲನ್ನು ಹಂಚಿಕೆ ಮಾಡುವಾಗ ಹೆಚ್ಚು ತೆರಿಗೆ ನೀಡುವಂತಹ ರಾಜ್ಯಗಳ ಪಾಲನ್ನು ಹೆಚ್ಚಿಸಬೇಕು ಎಂದು ರಾಜ್ಯ ಸರಕಾರವು ಬೇಡಿಕೆ ಇಟ್ಟಿದೆ ಎಂದು ಅವರು ಮಾಹಿತಿ ನೀಡಿದರು.

ಅಲ್ಲದೇ, ತನ್ನ ಬೇಡಿಕೆಗಳಿಗೆ ಕಾರಣಗಳನ್ನು ನೀಡುವ ಮೂಲಕ ವಿಭಿನ್ನವಾಗಿ ತನ್ನ ಪ್ರಸ್ತಾವನೆ ನಮ್ಮ ಮುಂದೆ ಇಟ್ಟಿದೆ. ಸಾಂಪ್ರದಾಯಿಕ ವಿಧಾನದ ಬದಲಾಗಿ ಇಂದಿನ ಸಂದರ್ಭಕ್ಕೆ ಅನುಗುಣವಾಗಿ ತೆರಿಗೆ ಹಂಚಿಕೆಯ ಸ್ವರೂಪವನ್ನು ಬದಲಾಯಿಸಬೇಕು ಎಂಬ ಸಲಹೆಯನ್ನು ನೀಡಿದೆ. ಭೌತಿಕ ಕೊಡುಗೆ, ಜಿಎಸ್‍ಡಿಪಿ ಆಧಾರದಲ್ಲಿ ರಾಜ್ಯಗಳಿಗೆ ಅನುದಾನ ಸಿಗಬೇಕು ಎಂಬ ಪಸ್ತಾವನೆಯೂ ಬಂದಿದೆ ಎಂದು ಅರವಿಂದ ಪನಗಾರಿಯಾ ತಿಳಿಸಿದರು.

ಹಣಕಾಸು ಆಯೋಗವು ದೇಶದ ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಅಲ್ಲಿನ ಸರಕಾರಗಳ ಅಭಿಪ್ರಾಯವನ್ನು ಸಂಗ್ರಹಿಸಲಿದೆ. ಆನಂತರ ರಾಜ್ಯಗಳ ಪ್ರಸ್ತಾವನೆಗಳ ಬಗ್ಗೆ ಆಂತರಿಕವಾಗಿ ಚರ್ಚೆಗಳನ್ನು ನಡೆಸಿ, ತೀರ್ಮಾನ ಕೈಗೊಂಡು ಕೇಂದ್ರ ಸರಕಾರಕ್ಕೆ ಶಿಫಾರಸ್ಸುಗಳನ್ನು ಸಲ್ಲಿಸುತ್ತೇವೆ ಎಂದು ಅರವಿಂದ ಪನಗಾರಿಯಾ ಹೇಳಿದರು.

ನಗರೀಕರಣ ಹೆಚ್ಚಾಗುತ್ತಿದೆ. ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ಕೊಡುವ ಅಗತ್ಯವಿದೆ.

ರಾಜ್ಯಗಳು ಹೆಚ್ಚಿನ ತೆರಿಗೆ ಪಾಲನ್ನು ಕೇಳುತ್ತಿವೆ. ನಾವು ನಮ್ಮದೇ ಆದ ರೀತಿಯಲ್ಲಿ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ರಾಜ್ಯಗಳಿಗೆ ಹೆಚ್ಚಿನ ಶಕ್ತಿ ತುಂಬಲು ನಾವು ಮುಕ್ತವಾಗಿದ್ದೇವೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ 16ನೇ ಹಣಕಾಸು ಆಯೋಗದ ಸದಸ್ಯರಾದ ಅಜಯ್ ನಾರಾಯಣ ಝಾ, ಅನ್ನಿ ಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡಾ ಮತ್ತು ಡಾ.ಸೌಮ್ಯಾ ಕಾಂತಿ ಘೋಷ್‌ ಉಪಸ್ಥಿತರಿದ್ದರು.

ಕೇಂದ್ರ ಸರಕಾರವು ಸಂಗ್ರಹ ಮಾಡುವ ಸೆಸ್ ಹಾಗೂ ಸರ್‍ಚಾರ್ಜ್‍ಗಳಲ್ಲಿ ರಾಜ್ಯಗಳಿಗೆ ಪಾಲು ಸಿಗುತ್ತಿಲ್ಲ. ಆದುದರಿಂದ, ಈ ಸಂಬಂಧ ಕೇಂದ್ರದ ನಿಲುವು ಬದಲಾಗಬೇಕು ಎಂದು ರಾಜ್ಯ ಸರಕಾರ ಪ್ರಸ್ತಾಪಿಸಿರುವ ಅಂಶದ ಕುರಿತು ಪ್ರತಿಕ್ರಿಯಿಸಿದ ಅರವಿಂದ ಪನಗಾರಿಯಾ, ಈ ಹಂತದಲ್ಲಿ ನಾವು ಯಾವುದೆ ಅಭಿಪ್ರಾಯವನ್ನು ವ್ಯಕ್ತಪಡಿಸುವುದು ಕಷ್ಟವಾಗುತ್ತದೆ. ಕೇಂದ್ರ ಸರಕಾರವು ತನ್ನ ಆದಾಯ ಹೆಚ್ಚಿಸಲು ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ. ನಾವು ಈ ಸಂಬಂಧ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

‘ಹಿಂದಿನ ನಷ್ಟಕ್ಕೆ ಈಗ ಪರಿಹಾರ ಕೊಡುವ ವ್ಯವಸ್ಥೆ ಇಲ್ಲ’: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯಕ್ಕೆ ಸುಮಾರು 80 ಸಾವಿರ ಕೋಟಿ ರೂ.ಗಳಷ್ಟು ನಷ್ಟ ಆಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ. ಅದಕ್ಕೆ ಏನಾದರೂ ಪರಿಹಾರ ಕೊಡಲು ಅವಕಾಶವಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರವಿಂದ ಪನಗಾರಿಯಾ, ರಾಜ್ಯ ಸರಕಾರ ನಮಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಆದರೆ, ಹಿಂದಿನ ನಷ್ಟಕ್ಕೆ ಈಗ ಪರಿಹಾರ ಕೊಡುವ ವ್ಯವಸ್ಥೆ ಇಲ್ಲ. ಸೆಸ್ ಹಾಗೂ ಸರ್‍ಚಾರ್ಜ್ ಬಗ್ಗೆ ಹಿಂದಿನ ಹಣಕಾಸು ಆಯೋಗವು ತಿದ್ದುಪಡಿಗಳನ್ನು ಮಾಡಲು ಯಾವುದೆ ಶಿಫಾರಸ್ಸು ಮಾಡಿಲ್ಲ. ಆದುದರಿಂದ, ಈ ವಿಚಾರದ ಬಗ್ಗೆ ಸದ್ಯದ ಪರಿಸ್ಥಿತಿಯಲ್ಲಿ ಮಾತನಾಡುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X