Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿನಿಮಾ ಟಿಕೆಟ್ ದರದ ಮೇಲೆ ಶೇ.2 ಸೆಸ್;...

ಸಿನಿಮಾ ಟಿಕೆಟ್ ದರದ ಮೇಲೆ ಶೇ.2 ಸೆಸ್; ಸಿನಿಪ್ಲೆಕ್ಸ್ ಪ್ರೈ.ಲಿ. ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ2 Nov 2026 8:40 PM IST
share
ಸಿನಿಮಾ ಟಿಕೆಟ್ ದರದ ಮೇಲೆ ಶೇ.2 ಸೆಸ್; ಸಿನಿಪ್ಲೆಕ್ಸ್ ಪ್ರೈ.ಲಿ. ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

ಬೆಂಗಳೂರು : ಚಿತ್ರಮಂದಿರಗಳ ಟಿಕೆಟ್‌ ಆದಾಯದ ಮೇಲೆ ವಿಧಿಸಲಾಗಿರುವ ಶೇ.2ರ ಸೆಸ್‌ ಪಾವತಿಸದ ಹಿನ್ನೆಲೆಯಲ್ಲಿ ಸಿನಿಪ್ಲೆಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಕಾಯ್ದೆ-2024ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಿನಿಪ್ಲೆಕ್ಸ್‌ ಪ್ರೈವೇಟ್‌ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್‌.ಟಿ. ನರೇಂದ್ರ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎಂ.ಜಿ. ನವೀನ್‌ ಕುಮಾರ್‌ ಅವರು, ಮಲ್ಟಿಪ್ಲೆಕ್ಸ್‌ಗಳ ಸಿನಿಮಾ ಟಿಕೆಟ್‌ ಆದಾಯದ ಮೇಲೆ ಶೇ. 2 ಸೆಸ್‌ ವಿಧಿಸುವ ಕಾಯ್ದೆ ಪ್ರಶ್ನಿಸಲಾಗಿದೆ. ಈಗಾಗಲೇ ಬೇರೆ ಅರ್ಜಿದಾರರಿಗೆ ನ್ಯಾಯಾಲಯ ರಕ್ಷಣೆ ಒದಗಿಸಿದ್ದು, ತಮಗೂ ಅದೇ ರಕ್ಷಣೆ ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಮುಂದಿನ ವಿಚಾರಣೆ ದಿನಾಂಕದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿತು.

ಕರ್ನಾಟಕ ಕಾರ್ಮಿಕ ಇಲಾಖೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಮಂಡಳಿ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ಇದೇ ರೀತಿಯ ಆಕ್ಷೇಪಗಳನ್ನು ಒಳಗೊಂಡಿರುವ ಇತರ ಅರ್ಜಿಗಳ ಜತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ಪಟ್ಟಿ ಮಾಡುವಂತೆ ಆದೇಶಿಸಿತು. ಅರ್ಜಿಯ ಮುಂದಿನ ವಿಚಾರಣೆ ನ.17ರಂದು ನಡೆಯಲಿದೆ.

ಇದೇ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮತ್ತೊಂದು ಅರ್ಜಿಯಲ್ಲಿ, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸರ್ಕಾರದ ಪರವಾಗಿ ಭರವಸೆ ನೀಡಿದ್ದಾರೆ.

ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ, ಇಂಡಿಯನ್‌ ಬ್ರಾಡ್‌ಕಾಸ್ಟಿಂಗ್‌ ಆ್ಯಂಡ್‌ ಡಿಜಿಟಲ್‌ ಫೌಂಡೇಷನ್‌ ಸೇರಿದಂತೆ ಇತರ ಸಂಸ್ಥೆಗಳೂ ಸೆಸ್‌ ವಿಧಿಸುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿವೆ. ಈ ಅರ್ಜಿಗಳಲ್ಲಿಯೂ ರಾಜ್ಯ ಸರ್ಕಾರದ ಬಲವಂತದ ಕ್ರಮಗಳಿಂದ ಮಧ್ಯಂತರ ರಕ್ಷಣೆ ದೊರೆತಿದೆ.

Tags

CinepolisHigh Courtcinema ticket
share
ವಾರ್ತಾಭಾರತಿ
ವಾರ್ತಾಭಾರತಿ
Next Story
X