Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ನೌಕರರ ವೇತನ ಪರಿಷ್ಕರಣೆಯಿಂದ...

ಸರಕಾರಿ ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಹೆಚ್ಚುವರಿ ವೆಚ್ಚ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 July 2024 7:42 PM IST
share
ಸರಕಾರಿ ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಹೆಚ್ಚುವರಿ ವೆಚ್ಚ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಏಳನೆ ವೇತನ ಆಯೋಗದ ಶಿಫಾರಸ್ಸು ಜಾರಿ ಹಿನ್ನೆಲೆಯಲ್ಲಿ ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಮಂಗಳವಾರ ಈ ಸಂಬಂಧ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ, ರಾಜ್ಯ ಸರಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆಗೆ 2022ರ ಅಕ್ಟೋಬರ್ 19ರಂದು 7ನೆ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 2024ರ ಮಾರ್ಚ್ 24ರಂದು ವರದಿಯನ್ನು ಸಲ್ಲಿಸಿರುತ್ತದೆ ಎಂದರು.

ಏಳನೇ ವೇತನ ಆಯೋಗದ ಶಿಫಾರಸಿನಂತೆ ಸರಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು 2022ರ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ, 2024ರ ಆಗಸ್ಟ್ 1ರಿಂದ ಅನುಷ್ಠಾನಗೊಳಿಸಲು ನಿನ್ನೆ (ಜು.15) ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದು ಅವರು ತಿಳಿಸಿದರು.

ಅದರಂತೆ, 2022ರ ಜುಲೈ 1ಕ್ಕೆ ನೌಕರರ ಮೂಲ ವೇತನಕ್ಕೆ ಶೇ.31ರಷ್ಟು ತುಟ್ಟಿಭತ್ಯೆ ಮತ್ತು ಶೇ.27.50ರಷ್ಟು ಫಿಟ್‍ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿ ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ.58.50ರಷ್ಟು ಹೆಚ್ಚಳವಾಗುತ್ತದೆ. ಮನೆ ಬಾಡಿಗೆ ಭತ್ಯೆಯಲ್ಲಿ ಶೇ.32ರಷ್ಟು ಹೆಚ್ಚಳವಾಗುತ್ತದೆ ಎಂದು ಸಿದ್ದರಾಮಯ್ಯ ವಿವರ ನೀಡಿದರು.

ಸರಕಾರಿ ನೌಕರರ ಕನಿಷ್ಠ ಮೂಲ ವೇತನವು 17ಸಾವಿರ ರೂ.ನಿಂದ 27ಸಾವಿರ ರೂ.ಗಳಿಗೆ, ಗರಿಷ್ಠ ವೇತನವು 1,50,600 ರೂ.ನಿಂದ 2,41,200 ರೂ.ಗಳಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ರೂ.ನಿಂದ 13,500 ರೂ.ಗಳಿಗೆ ಮತ್ತು ಗರಿಷ್ಠ ಪಿಂಚಣಿಯು 75,300 ರೂ.ನಿಂದ 1,20,600 ರೂ.ಗಳಿಗೆ ಪರಿಷ್ಕರಣೆಗೊಳ್ಳುತ್ತದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ನೌಕರರು, ವಿವಿಧ ವಿಶ್ವ ವಿದ್ಯಾನಿಲಯಗಳಲ್ಲಿನ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ ಎಂದು ಸಿದ್ದರಾಮಯ್ಯ ಇದೇ ವೇಳೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X